ದಕ್ಷಿಣ ಕನ್ನಡ | ಭಾರೀ ಮಳೆ; ಸೆಮಿಸ್ಟರ್‌ ಪರೀಕ್ಷೆ ಮುಂದೂಡದ ಮಂಗಳೂರು ವಿವಿ

Date:

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಬಾರೀ ಮಳೆ ಮುಂದುವರಿದಿದ್ದು,ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೂ ಪದವಿ ವಿದ್ಯಾರ್ಥಿಗಳು ಅಪಾಯ ಲೆಕ್ಕಿಸದೇ ಪ್ರವಾಹದ ನೀರನ್ನು ದಾಟಿಕೊಂಡು ಬಂದು ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಸೋಮವಾರ ಉಂಟಾಗಿದೆ.

ಮಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆ ಸೋಮವಾರ ನಿಗದಿಯಾಗಿತ್ತು‌. ಭಾರೀ ಮಳೆಯ ಮುನ್ಸೂಚನೆ ಇದ್ದರೂ ವಿಶ್ವವಿದ್ಯಾಲಯವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರೀಕ್ಷೆ ಮುಂದೂಡಿರಲಿಲ್ಲ. ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆಗೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಧಾವಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಭಾರೀ ಮಳೆ; 41 ಮನೆಗಳಿಗೆ ಹಾನಿ, ಶಾಲೆ-ಕಾಲೇಜುಗಳಿಗೆ ರಜೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾರೀ ಮಳೆಯಾಗುವ ಸಂಭವವಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸೋಮವಾರ ಬೆಳಿಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಿಗದಿಯಾಗಿದ್ದವು. ಮಂಗಳೂರು ವಿಶ್ವವಿದ್ಯಾಲಯವು ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...