ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ ಅಸ್ಥಿಪಂಜರ ಪತ್ತೆಯಾಗಿದೆ. ಪಾಡಿ ನಿವಾಸಿ ವಿನೋದ್ ಅವರಿಗೆ ಸೇರಿದ ಕೃಷಿ ಜಮೀನಿನ ಹೊಳೆ ಬಳಿ ತಲೆಬುರುಡೆ, ಮೂಳೆ ಹಾಗೂ ಬಟ್ಟೆಗಳು ಪತ್ತೆಯಾಗಿದೆ. ಆತಂಕಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
SOCO ತಂಡದೊಂದಿಗೆ ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಅಸ್ಥಿಪಂಜರವನ್ನು ವಶಪಡಿಸಿಕೊಳ್ಳಲಾಗಿದ್ದು, ಮೃತದೇಹದ ಗುರುತು ಮತ್ತು ಸಾವಿನ ಕಾರಣ ಕಂಡುಹಿಡಿಯಲು ಹೆಚ್ಚಿನ ತನಿಖೆ ಅಗತ್ಯವಿದೆ.
ಸ್ಥಳೀಯರಲ್ಲಿ ಭಯ ಹಾಗೂ ಆತಂಕ ಮೂಡಿಸಿರುವ ಈ ಘಟನೆಯ ಬಗ್ಗೆ ಪೊಲೀಸರು ವಿವರವಾದ ತನಿಖೆ ನಡೆಸುತ್ತಿದ್ದಾರೆ.
This video cannot be played in your browser. Open the video directly






