ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಗಾಡಿಯನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ.
ಉಚ್ಚಿಲ ಬಟ್ಟಪ್ಪಾಡಿಯಿಂದ ಮರಳು ತುಂಬಿಸಿ ಟಿಪ್ಪರ್ ಗಾಡಿಯಲ್ಲಿ ಸಾಗಾಟ ಮಾಡಲಾಗುತ್ತಿದ್ದ ಹಿನ್ನೆಲೆಯಲ್ಲಿ ಖಚಿತ ಮಾಹಿತಿಯೊಂದಿಗೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಬೆಳಧರ ಸರ್ಕಾರಿ ಶಾಲೆ ಆಟದ ಮೈದಾನ ವಶ; ತಪ್ಪಿತಸ್ಥರ ವಿರುದ್ಧ ಲೋಕಾಯುಕ್ತಕ್ಕೆ ಅರ್ಜಿ
ಟಿಪ್ಪರ್ ಚಾಲಕ ತಲೆಮರೆಸಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.