ದಕ್ಷಿಣ ಕನ್ನಡ | ಮಹಿಳೆಗೆ ಅವಮಾನ; ಖಾಸಗಿ ಬಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

Date:

ಮಂಗಳೂರು ನಗರದ ಪಿವಿಎಸ್ ವೃತ್ತದಲ್ಲಿ ಬಸ್ ಹತ್ತಲು ಹೊರಟಿದ್ದ ಮಹಿಳಾ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಖಾಸಗಿ ಬಸ್ ನಿರ್ವಾಹಕ ಹಾಗೂ ಚಾಲಕನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಸಹ ಪ್ರಯಾಣಿಕರ ಎದುರು ಕಂಡಕ್ಟರ್‌ ತಮಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ವಕೀಲೆಯೊಬ್ಬರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದೇರಳಕಟ್ಟೆ ಸಮೀಪದ ಜಲಾಲ್‌ಬಾಗ್ ನಿವಾಸಿಯಾಗಿರುವ ಕೆ ಮುಫೀದಾ ರಹ್ಮಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ವಕೀಲೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

“ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಮುಫೀದಾ ರಹ್ಮಾನ್ ಅವರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್‌ನಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ತೆರಳುವ ರೂಟ್ ನಂಬರ್ 19ರ ‘ಆ್ಯಶೆಲ್’ ಎಂಬ ಹೆಸರಿನ ಖಾಸಗಿ ಬ‌ಸ್‌ಗೆ ಹತ್ತುವ ವೇಳೆ ಚಾಲಕನು ಅಜಾಗರೂಕತೆಯಿಂದ ಮುಂದಕ್ಕೆ ಚಲಾಯಿಸಿದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪಡಿತರ ಚೀಟಿ ತಿದ್ದುಪಡಿ; ಇನ್ನೂ ಬಗೆಹರಿಯದ ಸರ್ವರ್‌ ಸಮಸ್ಯೆ

“ತಾನು ಬಸ್ಸಿನಿಂದ ಕೆಳಕ್ಕೆ ಬೀಳುವ ಸ್ಥಿತಿಯಲ್ಲಿದ್ದು, ಚೀರಾಟ ಆರಂಭಿಸಿದೆ. ಬಳಿಕ ಕಂಡೆಕ್ಟರ್ ಉಡಾಫೆಯಾಗಿ ಮಾತನಾಡಿದ್ದು, ಅವಾಚ್ಯವಾಗಿ ತನ್ನನ್ನು ನಿಂದಿಸಿದ್ದಾರೆ. ಅಲ್ಲದೆ ಬಸ್ಸಿನಿಂದ ಇಳಿಯುವವರೆಗೂ ಧರ್ಮವನ್ನು ಉಲ್ಲೇಖಿಸಿ ನಿಂದಿಸಿದ್ದು, ಮಾನಸಿಕ ಕಿರುಕುಳ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ವಕೀಲೆ ಮುಫೀದಾ ರಹ್ಮಾನ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಅವರ ದೂರಿನ ಆಧಾರದ ಮೇಲೆ ಖಾಸಗಿ ಬಸ್‌ ನಿರ್ವಾಹಕ ಮತ್ತು ಚಾಲಕನ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...