ದಕ್ಷಿಣ ಕನ್ನಡ | ₹10 ಸಾವಿರ ಲಂಚಕ್ಕೆ ಬೇಡಿಕೆ, ಕಡಬ ಪಿಡಿಒಗೆ 3 ವರ್ಷ ಜೈಲು ಶಿಕ್ಷೆ

Date:

Advertisements

2019ರಲ್ಲಿ ಭೂಮಿ ದಾಖಲೆ ವರ್ಗಾವಣೆ ಮಾಡುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಂದ ರೆಡ್‌ಹ್ಯಾಂಡ್ ಆಗಿ ಬಂಧಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಗ್ರಾಮ ಪಂಚಾಯತಿ​ ಅಭಿವೃದ್ಧಿ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಕಡಬ ತಾಲೂಕಿನ ಐತ್ತೂರು ಗ್ರಾಪಂನಲ್ಲಿ ಪಿಡಿಒ ಆಗಿದ್ದ ಪ್ರೇಮ್‌ಸಿಂಗ್ ನಾಯ್ಕ್ ಶಿಕ್ಷೆಗೊಳಗಾದವರು. ಐತ್ತೂರು ಗ್ರಾಮದ ಶಾಹುಲ್ ಹಮೀದ್ ಎಂಬವರು ತನ್ನ ತಾಯಿಯ ಹೆಸರಿನಿಂದ ತನ್ನ ಹೆಸರಿಗೆ ಭೂಮಿಯನ್ನು ವರ್ಗಾಯಿಸಲೆಂದು ಗ್ರಾಪಂಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪಿಡಿಒ ಪ್ರೇಮ್‌ಸಿಂಗ್ ನಾಯ್ಕ್ ಎಂಬವರು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

2019ರ ಮೇ 21ರಂದು ಶಾಹುಲ್ ಹಮೀದ್‌ ಅವರು 2 ಸಾವಿರ ರೂ.ಗಳನ್ನು ಪಿಡಿಒ ಕೈಯಲ್ಲಿ ಹಾಗೂ 8 ಸಾವಿರ ರೂ.ಗಳನ್ನು ಪಿಡಿಒ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು. ಆದರೆ, ನಂತರ ಇನ್ನೂ 10 ಸಾವಿರ ರೂ. ಲಂಚಕ್ಕೆ ಪಿಡಿಒ ಬೇಡಿಕೆ ಇರಿಸಿದಾಗ ಶಾಹುಲ್ ಹಮೀದ್‌ರವರು ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಜೂ.3ರಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಿಡಿಒ ಪ್ರೇಮ್ ಸಿಂಗ್ ನಾಯ್ಕ್ ಅವರನ್ನು ರೆಡ್​ಹ್ಯಾಂಡ್ ಆಗಿ ಬಂಧಿಸಿದ್ದರು. ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಮಂಗಳೂರಲ್ಲಿ ಕಲಂ 7(ಎ) ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ-1988 (ತಿದ್ದುಪಡಿ ಕಾಯಿದೆ 2018) ಅಡಿ ಪ್ರಕರಣ ದಾಖಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಗರೇಟ್ ಪ್ಯಾಕೆಟ್ ಕದ್ದನೆಂದು ದಲಿತ ಯುವಕನ ಸಾಯಬಡಿದರು!

ಅಂದಿನ ಲೋಕಾಯುಕ್ತ ನಿರೀಕ್ಷಕ ಶ್ಯಾಮಸುಂದರ್ ಹೆಚ್.ಎಂ ಅವರು ತನಿಖಾಧಿಕಾರಿಯಾಗಿದ್ದು,ಆರೋಪಿ ವಿರುದ್ಧ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಡಿ.13ರಂದು ಆರೋಪಿ ಪ್ರೇಮ್‌ಸಿಂಗ್ ನಾಯ್ಕಗೆ 3 ವರ್ಷಗಳ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿದೆ. ಆರೋಪಿ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 1 ತಿಂಗಳ ಕಾಲ ಸಾದಾ ಜೈಲು ಅನುಭವಿಸುವಂತೆ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X