ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ-ಕಟ್ಲ ಜನತಾಕಾಲನಿ ಇಲ್ಲಿನ 1.60 ಎಕರೆ ಭೂಮಿ ಕಬಳಿಕೆ ವಿರೋಧಿಸಿ ಹೋರಾಟ ಸಮಿತಿಯ ವತಿಯಿಂದ ಶಾಲಾ ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಾನ-ಕಟ್ಲ ಜನತಾ ಕಾಲನಿಯಲ್ಲಿನ ಸರ್ಕಾರಿ ಶಾಲೆಯ ಭೂ ಒತ್ತುವರಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
“ಕಾನ-ಕಟ್ಲ ಜನತಾ ಕಾಲನಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕರೆಯಷ್ಟು ಭೂಮಿ ಕಬಳಿಕೆಯಾಗಿರುವ ಕುರಿತು ಮಾಧ್ಯಮಗಳಲ್ಲಿ ಸುದ್ದಿಯಾದರೂ ಜಿಲ್ಲಾಡಳಿತವಾಗಲಿ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಾಗಲೀ ಈವರೆಗೆ ಶಾಲೆಗೆ ಭೇಟಿ ನೀಡಿಲ್ಲ. ಭೂ ಹಗರಣವನ್ನು ಗಂಭೀರವಾಗಿ ಪರಿಗಣಿಸದೆ ಇರುವುದು ಸರ್ಕಾರಿ ಶಾಲೆಗಳ ಸಂರಕ್ಷಣೆ ಬಗ್ಗೆ ಜಿಲ್ಲಾಡಳಿತಕ್ಕೆ ಇಚ್ಛಾಶಕ್ತಿ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ” ಎಂದು ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಸಂಚಾಲಕ, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್ ಆರೋಪಿಸಿದರು.
ಸರ್ಕಾರಿ ಶಾಲೆಯ ಭೂಮಿಯನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ನೀಡಿದರೂ ಕೂಡ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕಾನ-ಕಟ್ಲ ಜನತಾಕಾಲನಿ ನಿವಾಸಿಗಳು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ನಡೆಯಲ್ಲ: ಬಡಗಲಪುರ ನಾಗೇಂದ್ರ
ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷೆ ವಾರಿಜ ಹೋರಾಟದ ನೇತೃತ್ವ ವಹಿಸಿದ್ದರು. ಹೋರಾಟ ಸಮಿತಿಯ ಪ್ರಮುಖರುಗಳಾದ ಶರೀಫ್, ಫಾರೂಕ್ ಜನತಾ ಕಾಲನಿ, ಶ್ರೀನಾಥ್ ಕುಲಾಲ್, ಬಿ ಕೆ ಮಕ್ಸೂದ್, ಆಸೀಫ್, ಅಶ್ರಫ್, ಶಬನಾ, ಸಿಸಿಲಿ ಡಿಸೋಜಾ, ಶೈಫರ್ ಆಲಿ, ಅಸ್ಕಾಫ್, ಐ ಮೊಹಮ್ಮದ್, ಸಾದಿಕ್ ಕಿಲ್ಪಾಡಿ, ಹನೀಫ್ ಇಡ್ಯಾ, ಮುಂತಾದವರು ಭಾಗವಹಿಸಿದ್ದರು.