ದಕ್ಷಿಣ ಕನ್ನಡ | ಕುಮಾರ ಪರ್ವತ ಚಾರಣಕ್ಕೆ ಅ.3ರಿಂದ ನಿರ್ಬಂಧ

Date:

Advertisements

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರ ಪರ್ವತದಲ್ಲಿ ಚಾರಣ ನಡೆಸಲು ಅಕ್ಟೋಬರ್ 3ರಿಂದ ನಿರ್ಬಂಧ ವಿಧಿಸಲಾಗಿದೆ‌ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿಗಳು, “ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸ್ತುತದಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಅ.3ರಿಂದ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮಳೆಯ ಪ್ರಮಾಣ ಹೆಚ್ಚಿರುವ ಪರಿಣಾಮ ಕಡಿದಾದ ಬೆಟ್ಟವನ್ನು ಏರಲು ಚಾರಣಿಗರಿಗೆ ಅತಿಯಾದ ಸಂಕಷ್ಟ ಮತ್ತು ಕಷ್ಟವಾಗುತ್ತದೆಂದು ನಿರ್ಧರಿಸಿ ನಿರ್ಬಂಧ ವಿಧಿಸಲಾಗಿದೆ. ಇಲಾಖೆಯ ಈ ಆದೇಶಕ್ಕೆ ಚಾರಣಿಗರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸಬೇಕು” ಎಂದು ಇಲಾಖೆ ಕೋರಿದೆ.

Advertisements

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಹೊಸ ಮದ್ಯದಂಗಡಿ ಪ್ರಸ್ತಾವನೆ ವಿರೋಧಿಸಿ ಮೌನ ಪ್ರತಿಭಟನೆ

“ಬಿರು ಬೇಸಿಗೆ ಮತ್ತು ಅಧಿಕ ಮಳೆಯ ಕಾರಣ ಮೇ ತಿಂಗಳಿನಿಂದ ಸೆಪ್ಟೆಂಬರ್‌ 29ರ ತನಕ ನಿರ್ಬಂಧ ವಿಧಿಸಲಾಗಿತ್ತು. ಶನಿವಾರದಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು. ಮೊದಲ ದಿನವೇ 750ಕ್ಕೂ ಅಧಿಕ ಚಾರಣಿಗರು ಕುಮಾರ ಪರ್ವತವೇರಲು ಆಗಮಿಸಿದ್ದರು. ಭಾನುವಾರವೂ ಭಾರೀ ಸಂಖ್ಯೆಯ ಚಾರಣಾಸಕ್ತರು ಕುಮಾರಪರ್ವತಕ್ಕೆ ತೆರಳಿದ್ದರು. ಆದರೆ ಈ ದಿನಗಳಲ್ಲಿ ಕುಕ್ಕೆ ಸೇರಿದಂತೆ ಬೆಟ್ಟ ಪ್ರದೇಶದಲ್ಲಿ ಅತ್ಯಧಿಕ ಮಳೆ ಸುರಿದ ಕಾರಣ ಚಾರಣಿಗರಿಗೆ ತೆರಳಲು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X