ನಿಲ್ಲಿಸಿದ್ದ ಗೂಡ್ಸ್ ಲಾರಿಯೊಂದಕ್ಕೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೂರ್ನಡ್ಕ ಮರೀಲ್ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಬಳಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಕಾಸರಗೋಡು ಪೈವಳಿಕೆ ಗ್ರಾಮದ ಸುಳ್ಳಿಮಲೆ ಎಂಬಲ್ಲಿನ ನಿವಾಸಿಗಳಾದ ಕೃಷ್ಣಪ್ಪ ನಾಯ್ಕ(60), ಅವರ ಪತ್ನಿ ಗುಲಾಬಿ(55), ಪುತ್ರಿ ರೋಹಿಣಿ(32) ಮತ್ತು ಮೊಮ್ಮಗಳು ಗನ್ಯ(2) ಗಾಯಗೊಂಡವರು.
ಪುತ್ತೂರಿನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿಯಲ್ಲಿ ಇವರು ಪ್ರಯಾಣಿಸುತ್ತಿದ್ದ ಕಾರು ಸಂಚರಿಸುತ್ತಿದ್ದ ಸಂದರ್ಭ ಮುಂಭಾಗದಿಂದ ಬೈಕೊಂದು ಆಗಮಿಸಿದ್ದು, ಬೈಕ್‍ಗೆ ಸೈಡ್ ಕೊಡುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ್ದು, ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಗೆ ಢಿಕ್ಕಿ ಹೊಡೆದಿತ್ತು. ಗಾಯಾಳುಗಳ ಪೈಕಿ ಕೃಷ್ಣಪ್ಪ ನಾಯ್ಕ ಮತ್ತು ಗುಲಾಬಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗ್ಯಾರಂಟಿ ಭರವಸೆಗಳೊಂದಿಗೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ದ: ಸಚಿವ ಬೋಸರಾಜು
ರೋಹಿಣಿ ಮತ್ತು ಗನ್ಯ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
