ದಕ್ಷಿಣ ಕನ್ನಡ | ದ್ವೇಷದ ದಾಳಿಗೆ ಗುರಿಯಾಗಿರುವ ಎಂ ಜಿ ಹೆಗ್ಡೆ; ಸಮಾನ ಮನಸ್ಕರಿಂದ ಭೇಟಿ

Date:

ಒಂದು ವರ್ಗದ ಮಾಧ್ಯಮಗಳ ಪಕ್ಷಪಾತಿ, ಕೋಮುವಾದಿ ಮನಸ್ಥಿತಿಯ ವಿರುದ್ಧ ಧ್ವನಿ ಎತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಎಂ ಜಿ ಹೆಗ್ಡೆಯವರಿಗೆ ಸಮಾನ ಮನಸ್ಕ ಸಂಘಟನೆಯ ನಾಯಕರು ಭೇಟಿ ಮಾಡಿ ಬೆಂಬಲ ಸೂಚಿಸಿದರು.

ಎಂ ಜಿ‌ ಹೆಗ್ಡೆ ಅವರನ್ನು ಗುರಿಯಾಗಿಸಿ ಬಲಪಂಥೀಯ ಕೋಮು ಶಕ್ತಿಗಳು ದ್ವೇಷ ಸಾಧನೆಯ ದಾಳಿಯನ್ನು ಸಂಘಟಿಸಿವೆ. ಉಡುಪಿಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣರ ನೇತೃತ್ವದಲ್ಲಿ ಎಂ ಜಿ ಹೆಗ್ಡೆಯವರ ವಿರುದ್ಧ ಅಸಭ್ಯ ರೀತಿಯ ಪ್ರತಿಭಟನೆಯನ್ನು ನಡೆಸಿ ದೈಹಿಕ ದಾಳಿಗೆ ಪ್ರಚೋದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಪ್ರತಿನಿಧಿಗಳು ಎಂ ಜಿ ಹೆಗ್ಡೆಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ನೈತಿಕ ಬೆಂಬಲ ವ್ಯಕ್ತಪಡಿಸಿದರು.

“ಎಂ ಜಿ ಹೆಗ್ಡೆಯವರನ್ನು ಬೆದರಿಸುತ್ತಿರುವ ಶಕ್ತಿಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಎಂ ಜಿ ಹೆಗ್ಡೆಯವರಿಗೆ ರಕ್ಷಣೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅನರ್ಹತೆ ಹಿನ್ನೆಲೆ ನಗರಸಭೆ ಆಯುಕ್ತ ಮಂಜುನಾಥ್ ನೇಮಕಾತಿ ರದ್ದು; ವಾರ್ಡ್ ಸದಸ್ಯರ ಅಸಮಾಧಾನ

ಸಮಾನ ಮನಸ್ಕರ ವೇದಿಕೆಯ ಮುನೀರ್ ಕಾಟಿಪಳ್ಳ, ಕರ್ನಾಟಕ ಪ್ರಾಂತ ರೈತ ಸಂಘದ ಕೆ ಯಾದವ ಶೆಟ್ಟಿ, ದಲಿತ ನಾಯಕ ಎಂ ದೇವದಾಸ್, ಹಿರಿಯ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯದ ಮಂಜುಳಾ ನಾಯಕ್, ಡಿವೈಎಫ್ಐ ನಾಯಕ ಸಂತೋಷ್ ಬಜಾಲ್, ಸಮುದಾಯದ ಮನೋಜ್ ವಾಮಂಜೂರು, ಸಾಮಾಜಿಕ ಕಾರ್ಯಕರ್ತರಾದ ಸ್ಟಾನಿ ಆಳ್ವಾರಿಸ್, ನಿತಿನ್ ಬಂಗೇರ, ಸಮರ್ಥ್ ಭಟ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ...

ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ...

ಬೀದರ್‌ | ಜೆಜೆಎಂ ಕಾಮಗಾರಿ ಅಪೂರ್ಣ: ಕೆಸರು ಗದ್ದೆಯಂತಾದ ರಸ್ತೆಗಳು

ಮಳೆಗೆ ಕೆಸರು ಗದ್ದೆಯಂತಾದ ರಸ್ತೆ, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ...