ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

Date:

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ ಆಕ್ರೋಶ ಸ್ಪೋಟಗೊಂಡು, ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಹೀನಾಯವಾಗಿ ಸೋತು ಇಂಡಿಯಾ ಒಕ್ಕೂಟವು ಬಹುಮತಗಳಿಸಲಿದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಹೇಳಿದರು.

- Advertisement -

ಮಂಗಳೂರು ನಗರದ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಿಜೆಪಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿದೆ. ಮೋದಿಯವರ ಆಡಳಿತ ಅವಧಿಯಲ್ಲಿ ಶೇ.1ರಷ್ಟು ಜನರಲ್ಲಿ ದೇಶದ ಒಟ್ಟು ಸಂಪತ್ತು ಶೇಖರಣೆಯಾಗಿದೆ. ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜಗತ್ತಿನ ಹಲವು ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಬಡತನ ಪ್ರಮಾಣ ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಪ್ರಮಾಣಕ್ಕೆ ಏರಿಕೆಯಾಗಿದೆ ಎಂದು ಮೊಯ್ಲಿ ವಿವರಿಸಿದರು.

ಈ ಬಾರಿಯ ಚುನಾವಣಾ ಪ್ರಕ್ರಿಯೆಯನ್ನು ಎರಡು ತಿಂಗಳ ಸುದೀರ್ಘ ಅವಧಿಗೆ   ಆಯೋಜಿಸಿರುವುದು ಅನುಮಾನಕ್ಕೆ ಎಡೆ ಮಾಡಿದೆ. ತಂತ್ರಜ್ಞಾನ ಅಭಿವೃದ್ಧಿ ಯಾಗಿದ್ದರೂ ಚುನಾವಣಾ ಪ್ರಕ್ರಿಯೆ ಯಾಕಿಷ್ಟು ವಿಳಂಬ? ಸುಮಾರು 60 ದಿನಗಳ ಕಾಲ ಚುನಾನಣೆ ನಡೆಯುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕುತ್ತಿವೆ. ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಮೊಯಿಲಿ ಆಗ್ರಹಿಸಿದರು.

ಕರ್ನಾಟಕ ಸರ್ಕಾರಕ್ಕೆ ಸಂವಿಧಾನದ ಪ್ರಕಾರ ನೀಡಬೇಕಾದ ತೆರಿಗೆಯ ಪಾಲನ್ನು ನೀಡದೆ ಖಾಲಿ ಚೊಂಬು ನೀಡಿದೆ. ಇದು ಕೆಪಿಸಿಸಿ ಪ್ರಕಟಿಸಿದ ಅತ್ಯಂತ ಸೂಕ್ತವಾದ ಜಾಹೀರಾತು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ, ಐವನ್ ಡಿಸೋಜ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಭಾಸ್ಕರ.ಕೆ, ಮಾಹಾಬಲ ಮಾರ್ಲ, ಅಶ್ರಫ್ ಎಐಸಿಸಿ‌ ಅಲ್ಪಸಂಖ್ಯಾತ ವಿಭಾಗದ ವೀಕ್ಷಕ ಜಾನ್ ಕೆನಾನ್, ಕೆಪಿಸಿಸಿ ಚುನಾವಣಾ ವಾರ್ ರೂಮ್ ಮುಖ್ಯ ಸಂಯೋಜಕ ಅಶ್ವಿನ್ ಕುಮಾರ್ ರೈ, ಮುಖಂಡರಾದ ಶಾಹುಲ್ ಹಮೀದ್, ಶುಭೋದಯ ಆಳ್ವಾ, ಡಿ.ಕೆ. ಅಶೋಕ್, ಆರಿಫ್, ಶಬೀರ್ ಸಿದ್ದಕಟ್ಟೆ, ಟಿ.ಕೆ. ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...