ದಕ್ಷಿಣ ಕನ್ನಡ | ಮಂಗಳೂರಿಗೆ ಎರಡು ದಿನ ನೀರಿನ ಪೂರೈಕೆ ಸ್ಥಗಿತ

Date:

ಮಂಗಳೂರಿಗೆ ನೀರು ಒದಗಿಸುವ ಏಕೈಕ ಜಲಮೂಲ ತುಂಬೆ ಅಣೆಕಟ್ಟೆ ಬರಿದಾಗುತ್ತಿರುವ ಕಾರಣ, ಎರಡು ದಿನಗಳ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಯೋಜಿಸಿದೆ.

- Advertisement -

ಹವಾಮಾನ ಇಲಾಖೆಯು ಜೂನ್‌ 4ರಂದು ರಾಜ್ಯಕ್ಕೆ ಮುಂಗಾರು ಮಾರುತಗಳು ಆಗಮಿಸಲಿವೆ ಎಂದು ಹೇಳಿದೆ. ಆದರೂ, ನೀರಿನ ಕೊರತೆಯನ್ನು ನಿಭಾಯಿಸಲು ಮತ್ತು ಕೆಲವೆಡೆ ಅಗತ್ಯ ಪೈಪ್‌ಲೈನ್‌ ಮರುಜೋಡಣೆ ಕಾಮಗಾರಿ ನಡೆಸಲು ಎರಡು ದಿನಗಳ ಕಾಲ ನೀರಿನ ಪೂರೈಕೆಯನ್ನು ನಿಲ್ಲಿಸಲು ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಈ ಬಗ್ಗೆ ಗುರುವಾರ ಸುತ್ತೋಲೆ ಹೊರಡಿಸಿರುವ ಎಂಸಿಸಿ, “ಜೂನ್ 4ರ ಬೆಳಿಗ್ಗೆ 6 ರಿಂದ ಜೂನ್ 6ರ ಬೆಳಿಗ್ಗೆ 6ರವರೆಗೆ ನಗರದಲ್ಲಿ ನೀರು ಸರಬರಾಜು ಸಂಪೂರ್ಣ ವ್ಯತ್ಯಯವಾಗಲಿದೆ” ಎಂದು ಹೇಳಿದೆ.

ಈ ಎರಡು ದಿನಗಳಲ್ಲಿ, ತುಂಬೆ ಅಣೆಕಟ್ಟೆಯ ಬೆಂದೂರ್‌ವೆಲ್ ಸ್ಟ್ರೆಚ್‌ನಲ್ಲಿ 1,000 ಎಂಎಂ ಪೈಪ್‌ಲೈನ್ ಮತ್ತು ಕೊಟ್ಟಾರ ಚೌಕಿಯಲ್ಲಿ 900 ಎಂಎಂ ಪೈಪ್‌ಲೈನ್ಅನ್ನು ಬದಲಾಯಿಸಿಲು ಎಂಸಿಸಿ ಯೋಜಿಸಿದೆ.

ತುಂಬೆ ಅಣೆಕಟ್ಟಿನ ನೀರಿನ ಮಟ್ಟವು ಗರಿಷ್ಠ ಸಂಗ್ರಹಕ್ಕಿಂತ 2.2 ಮೀಟರ್‌ಗೆ ಇಳಿದಿದೆ. ಅಣೆಕಟ್ಟೆಯ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಪೂರ್ವ ತುಂತುರು ಮಳೆಯಿಂದಾಗಿ ತುಂಬೆ ಬ್ಯಾರೇಜ್‌ನ ಮೇಲ್ಭಾಗದ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...