ದಕ್ಷಿಣ ಕನ್ನಡ | ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ; ಜನಪರ ಸಂಘಟನೆಗಳ ಬೆಂಬಲ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಸುರತ್ಕಲ್‌ನ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು. ಜಿಲ್ಲೆಯ ಹಲವು ಜನಪರ ಸಂಘಟನೆಗಳು ಧರಣಿಯಲ್ಲಿ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದವು.

ಹೆದ್ದಾರಿ ಅಗಲೀಕರಣ ಕಾಮಗಾರಿಗಳು ಶರವೇಗದಲ್ಲಿ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ, ಕೂಳೂರು ಸೇತುವೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ತಿಗೊಳಿಸಬೇಕು, ಬ್ರಹ್ಮರ ಕೂಟ್ಲು ಟೋಲ್‌ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್ ಟೋಲ್‌ಗೇಟ್‌ಗಳನ್ನು ಸ್ಥಾಪಿಸುವಾಗ ಅಂತರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ನಂತೂರು ಜಂಕ್ಷನ್‌ನಲ್ಲಿ ಧರಣಿಗೆ ಸಂಘಟನೆಗಳ ಜತೆ ನಾಗರಿಕರ ಬೆಂಬಲವೂ ವ್ಯಕ್ತವಾಯಿತು.

WhatsApp Image 2025 02 05 at 5.26.04 PM 1

ಧರಣಿಯ ತರುವಾಯ ಜಿಲ್ಲೆಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಮಂಗಳೂರಿನಲ್ಲಿ ಹೆದ್ದಾರಿ ಪ್ರಾಧಿಕಾರದ ವಿಶೇಷ ಸಭೆ ಕರೆಯುವಂತೆ ಆಗ್ರಹಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಪತ್ರ ಕಳುಹಿಸಿಕೊಡಲಾಯಿತು.

Advertisements
WhatsApp Image 2025 02 05 at 5.26.04 PM

ಮಾಜಿ ಸಚಿವ ಬಿ ರಮಾನಾಥ ರೈ, ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಸಹ ಸಂಚಾಲಕ ಶ್ರೀನಾಥ್ ಕುಲಾಲ್, ಕೆಪಿಸಿಸಿ ವಕ್ತಾರ ಎಮ್ ಜಿ ಹೆಗ್ಡೆ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್, ದಲಿತ ಮುಖಂಡ ಎಂ ದೇವದಾಸ್, ಸಾಮರಸ್ಯ ಮಂಗಳೂರು ಇದರ ಮಂಜುಳಾ ನಾಯಕ್, ಆಮ್ ಆದ್ಮಿಯ ಎಸ್ ಎಲ್ ಪಿಂಟೊ, ಬಂಟ್ವಾಳ ತಾಲೂಕು ಹೋರಾಟ ಸಮಿತಿಯ ಸುರೇಶ್ ಕುಮಾರ್ ಬಂಟ್ವಾಳ, ಮಾಜಿ ಕಾರ್ಪೊರೇಟರ್ ಮರಿಯಮ್ಮ ಥಾಮಸ್, ರೈತ ಸಂಘದ ಕೆ ಯಾದವ ಶೆಟ್ಟಿ, ಆಲ್ವಿನ್ ಮಿನೇಜಸ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ವಿವಿಧ ಸಂಘಟನೆಗಳ ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ವಸಂತ ಆಚಾರಿ, ಬಿ ಕೆ ಇಮ್ತಿಯಾಜ್, ಸದಾಶಿವ ದಾಸ್ ಕುಪ್ಪೆಪದವು, ರಾಧಾ ಮೂಡಬಿದ್ರೆ, ವಿ ಕುಕ್ಯಾನ್, ಎಚ್ ವಿ ರಾವ್, ಯೋಗೀಶ್ ಜಪ್ಪಿನಮೊಗರು, ಸದಾಶಿವ ಪಡುಬಿದ್ರೆ, ಅನುರಾಧ ಬಾಳಿಗಾ, ಕರಿಯ ವಾಮಂಜೂರು, ಕೃಷ್ಣಾ ಇನ್ನಾ, ಕೃಷ್ಣಪ್ಪ ಸಾಲ್ಯಾನ್, ಜೆ ಬಾಲಕೃಷ್ಣ ಶೆಟ್ಟಿ, ಸುಂದರ ಶೆಟ್ಟಿ, ವಸಂತಿ ಕುಪ್ಪೆಪದವು, ಲೋಲಾಕ್ಷಿ ಬಂಟ್ವಾಳ, ಪ್ರಮೀಳಾ, ಕೃಷ್ಣ ತಣ್ಣೀರುಬಾವಿ, ಬಾವಾ ಪದರಂಗಿ, ಟಿ ಎನ್ ರಮೇಶ್, ಮೂಡಾ ಸದಸ್ಯರಾದ ಅಬ್ದುಲ್ ಜಲೀಲ್, ನಿತಿನ್ ಕುತ್ತಾರ್, ಇಕ್ಬಾಲ್ ಮುಲ್ಕಿ, ಮೋಹನ್ ಶೆಟ್ಟಿ ಪಂಜಿಕಲ್ಲು, ಸಂಜೀವ ಬಲ್ಕೂರು, ಅಶ್ರಫ್ ಬದ್ರಿಯಾ, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮಾಜಿ ಕಾರ್ಪೊರೇಟರ್ ಗಳಾದ ಜಯಂತಿ ಶೆಟ್ಟಿ, ದಯಾನಂದ ಶೆಟ್ಟಿ, ಅಯಾಜ್ ಕೃಷ್ಣಾಪುರ ಮತ್ತಿತರರು ಧರಣಿಯ ನೇತೃತ್ವ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ | ಫೆ.5ರಂದು ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಾಮೂಹಿಕ ಧರಣಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X