ದ.ಕ | ಅಮೆರಿಕ ಮೆಚ್ಚಿಸಲು ಇಸ್ರೇಲ್‌ಗೆ ಮೋದಿ ಬೆಂಬಲ: ಯಾದವ್ ಶೆಟ್ಟಿ ಆರೋಪ

Date:

Advertisements

ಅಮೆರಿಕವನ್ನು ಮೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಪ್ಯಾಲೆಸ್ತೀನ್‌ನಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐಎಂ) ಪ್ರಧಾನ ಕಾರ್ಯದರ್ಶಿ ಯಾದವ್ ಶೆಟ್ಟಿ ಆರೋಪಿಸಿದರು.

ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐಎಂ)ದಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕೊಟ್ಟಾರ ಚೌಕಿಯ ವಿಎಸ್‌ಕೆ ಸಭಾಂಗಣದಲ್ಲಿ ಭಾನುವಾರ ನಡೆದ ದಕ್ಷಿಣ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

“ಜಗತ್ತು ಆತಂಕಕಾರಿ ಸ್ಥಿತಿಯಲ್ಲಿದೆ. ಒಂದು ವರ್ಷದಿಂದ ಇಸ್ರೇಲ್ ಪ್ಯಾಲೆಸ್ತೀನ್ ಯುದ್ಧ ನಡೆಯುತ್ತಿದೆ. ಇಸ್ರೇಲ್ ನರಮೇಧದಿಂದ 48,000 ಮಂದಿ ಸಾವನ್ನಪ್ಪಿದ್ದಾರೆ. ಆ ಪೈಕಿ 16,000 ಮಂದಿ ಮಹಿಳೆಯರು ಮತ್ತು ಮಕ್ಕಳು ಆಗಿದ್ದಾರೆ. ಈ ಭೀಕರ ಕ್ರೂರತೆ ಖಂಡನೀಯ” ಎಂದು ಹೇಳಿದರು.

Advertisements

“2014ರಲ್ಲಿ ಮೋದಿಯವರು ಅಚ್ಚೇದಿನ್ ತರುವ, ರೈತರ ಆದಾಯ ದ್ವಿಗುಣಗೊಳಿಸುವ, ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ನೀಡಿದರು. ಆದರೆ ಈಗ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೂ ಕೂಡ ಭರವಸೆಯನ್ನು ಪೂರೈಸಿಲ್ಲ. ಬದಲಾಗಿ ನೆಲಜಲವನ್ನು ಅಂಬಾನಿ ಅದಾನಿಗೆ ಧಾರೆ ಎರೆದಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು ಸಮಾವೇಶ 1

“ನೂರಾರು ವರ್ಷಗಳಿಂದ ಕಮ್ಯೂನಿಸ್ಟ್ ಪಕ್ಷ ನಡೆಸಿದ ಹೋರಾಟದ ಫಲವಾಗಿ ಕಾರ್ಮಿಕ ಕಾನೂನುಗಳನ್ನು ಜಾರಿ ಮಾಡಲಾಗಿತ್ತು. ಆದರೆ ಮೋದಿ ಸರ್ಕಾರ ಈ ಕಾನೂನನ್ನು ರೈತರಿಗೆ ಹಾನಿಯಾಗುವಂತೆ, ಕಾರ್ಪೊರೇಟ್ ಪರವಾಗಿ ಬದಲಾಯಿಸಿದೆ. ಈ ಮರಣ ಶಾಸನದ ವಿರುದ್ಧ ರೈತರು ಒಂದು ವರ್ಷಕ್ಕೂ ಅಧಿಕ ಕಾಲದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ 715 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಇಂದಿಗೂ ರೈತರಿಗೆ ನ್ಯಾಯ ದೊರೆತಿಲ್ಲ” ಎಂದು ಹೇಳಿದರು.

“ಮಂಗಳೂರಿನಲ್ಲಿ ಈ ಹಿಂದೆ ಕೆಂಬಾವುಟಗಳು ರಾರಾಜಿಸುತ್ತಿದ್ದವು. ಇಂದು ಅದನ್ನು ನಾವು ಮರುಕಳಿಸಬೇಕಿದ್ದು, ನಗರ ಪಾಲಿಕೆಯ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಿದೆ. ಕೆಂಬಾವುಟವೇ ಪರ್ಯಾಯ ಎಂಬುದನ್ನು ಜನತೆಗೆ ಮನವರಿಕೆ ಮಾಡಬೇಕಿದೆ” ಎಂದು ನಾಯಕರುಗಳಿಗೆ ಕರೆ ನೀಡಿದರು.

ಮಂಗಳೂರು ಸಮಾವೇಶ 2

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಅಧ್ಯಕ್ಷೀಯ ಭಾಷಣ ಮಾಡಿ, “ಮೂರನೇ ಬಾರಿಗೆ ಕೇಂದ್ರದಲ್ಲಿ ಮೋದಿ ಸರ್ಕಾರ ಬಂದರೂ ಕೂಡ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿಕೂಟ ಬಿಜೆಪಿಗೆ ಮುಖಭಂಗವಾಗುವಂತೆ ಚುನಾವಣಾ ಪ್ರದರ್ಶನ ತೋರಿದೆ. ಈ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟವನ್ನು ಸ್ಥಾಪಿಸುವಲ್ಲಿ ಮುಖ್ಯಪಾತ್ರ ವಹಿಸಿದ್ದು ಕಾಂಗ್ರೆಸ್ ಅಲ್ಲ ಸಿಪಿಐಎಂ ಎಂಬುದು ನಮಗೆ ತಿಳಿದಿರಬೇಕು. ನಮ್ಮ ಪಕ್ಷದ ಅಧಿವೇಶನದಲ್ಲಿ ಮೈತ್ರಿಕೂಟದ ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದರು.

ಮಂಗಳೂರು ಸಮಾವೇಶ 3

“ದೇಶದ ರಾಜಕಾರಣದಲ್ಲಿ ಸಿಪಿಐಎಂ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಈವರೆಗೂ ನಮ್ಮ ಪಕ್ಷ ಅತಿ ದೊಡ್ಡ ಕೊಡುಗೆಯನ್ನು ನೀಡುತ್ತ ಬಂದಿದೆ. ಈ ಹಿಂದೆ ಬ್ರಿಟೀಷರು ನಮ್ಮನ್ನು ಹೊಸಕಿ ಹಾಕುವ ಪ್ರಯತ್ನ ಮಾಡಿದರು. ಆದರೆ ಅದನ್ನು ಎದುರಿಸಿ ನಾವು ಇಂದಿಗೂ ಅನ್ಯಾಯದ ವಿರುದ್ಧ ಹೋರಾಡುತ್ತಿದ್ದೇವೆ. ಯಾವುದೇ ಸರ್ಕಾರವಾದರೂ ಅದು ರೈತ, ಕಾರ್ಮಿಕ ವಿರೋಧಿಯಾದರೆ ಅದರ ವಿರುದ್ಧ ನಾವು ಹೋರಾಟ ನಡೆಸಿದ್ದೇವೆ ಮತ್ತು ನಡೆಸುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ನಿರ್ಧಾರ

“ರಷ್ಯಾದಲ್ಲಿ ಸೋವಿಯತ್ ಸರ್ಕಾರ ಪತನವಾದಾಗ ವಿಶ್ವದಲ್ಲೇ ಮಾರ್ಕ್ಸ್‌ವಾದ ಅಂತ್ಯವೆಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಮಾರ್ಕ್ಸ್‌ವಾದ ಇಂದಿಗೂ ಪ್ರಸ್ತುತವಾಗಿದೆ. 2008ರಲ್ಲಿ ಜಾಗತಿಕ ಆರ್ಥಿಕ ಬಿಕ್ಕಟ್ಟು ಉಂಟಾದಾಗ ಹಲವು ತಜ್ಞರು ಇದೇ ಕಾರ್ಲ್ ಮಾರ್ಕ್ಸ್ ಬರೆದ ಪುಸ್ತಕಗಳನ್ನು ಖರೀದಿಸಿದ್ದಾರೆ. ಮಾರ್ಕ್ಸ್ ಪುಸ್ತಕದಲ್ಲಿ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕಿದ್ದಾರೆ. ಅದರ ಅರ್ಥ ಬಂಡವಾಳಶಾಹಿಗಳು ಎಷ್ಟೇ ಪಿತೂರಿ ಬಾರಿಸಿದರೂ ಮಾರ್ಕ್ಸ್‌ವಾದ, ಸಮಾಜವಾದ ಅಂತಿಮ ಸತ್ಯ” ಎಂದರು.

ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಾಲಕೃಷ್ಣ ಶೆಟ್ಟಿ, ನಗರ ಸಮಿತಿ ಸದಸ್ಯರಾದ ಪದ್ಮಾವತಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಹಿರಿಯರಾದ ಜಯರಾಮ್ ಮಣಿಯಾಣಿ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್, ಅಧ್ಯಕ್ಷ ಪ್ರಕಾಶ್ ಕೊಟ್ಟಾರಿ, ಕಾರ್ಯಾಧ್ಯಕ್ಷ ಅಶೋಕ್ ಶ್ರೀಯಾನ್, ಸಂಘಟನಾ ಕಾರ್ಯದರ್ಶಿ ಮನೋಜ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ, ಖಜಾಂಚಿ ರಾಜೇಶ್ ಉರ್ವಸ್ಟೋರ್, ಸಿಪಿಐಎಂ ನಗರ ಕಾರ್ಯದರ್ಶಿ ಸಂತೋಷ್ ಬಜಾಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X