ದಕ್ಷಿಣ ಕನ್ನಡ | ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

Date:

ಮಂಗಳೂರು ನಗರದ ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

- Advertisement -

ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ(28) ಮೃತರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ರಂಜಿತಾ ಅವರಿಗೆ ಅವಧಿಗೆ ಮೊದಲೇ ಹೆರಿಗೆಯಾಗಿದ್ದು, ಅಕ್ಟೋಬರ್‌ 30ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು‌. ಎನ್‌ಐಸಿಯುವಿನಲ್ಲಿ ಅರೈಕೆಯಲ್ಲಿದ್ದ ಶಿಶು ನವೆಂಬರ್‌ 3ರಂದು ಮೃತಪಟ್ಟಿತ್ತು. ರಂಜಿತಾ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಘಟನೆ ನಡೆದಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಎಚ್ ಅರ್ ತಿಮ್ಮಯ್ಯ ತಿಳಿಸಿದ್ದಾರೆ.

“ರಂಜಿತಾ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯಲು ಮನೆಯವರೂ ಕೂಡ ಲೇಡಿಗೋಷನ್ ಆಸ್ಪತ್ರೆಗೆ ಬಂದಿದ್ದರು. ಆದರೆ ರಂಜಿತಾ ಏಕಾಏಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು” ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಆಟೋ ಪಲ್ಟಿ: ಓರ್ವ ಮಹಿಳೆ ಸಾವು: ಹಲವರಿಗೆ ಗಾಯ

ರಂಜಿತಾ ಅವರನ್ನು ಹೆರಿಗೆಗಾಗಿ ಮೊದಲು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೆಲವು ಗಂಭೀರ ಆರೋಗ್ಯ ಸಮಸ್ಯೆ ಇದ್ದುದರಿಂದ ಇಲ್ಲಿನ ಲೇಡಿಗೋಷನ್ ಆಸ್ಪತ್ರೆಗೆ ಅಕ್ಟೋಬರ್ 28ರಂದು ದಾಖಲು ಮಾಡಲಾಗಿತ್ತು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...