ದಕ್ಷಿಣ ಕನ್ನಡ | ಸರ್ಕಾರ ಅಧಿಕೃತ ಕಸಾಯಿಖಾನೆಗೆ ಅನುಮತಿ ನೀಡಲು ಮುಸ್ಲಿಂ ಮುಖಂಡರ ಒತ್ತಾಯ

Date:

ಜಾನುವಾರುಗಳ ರಕ್ಷಣೆ ಹೆಸರಿಲ್ಲಿ ನಡೆಯುತ್ತಿರುವ ಮುಸ್ಲಿಮರ ಮೇಲಿನ ದೌರ್ಜನ್ಯ ಹಾಗೂ ಪೊಲೀಸರ ಅತಿರೇಕದ ವರ್ತನೆಯ ನಿಯಂತ್ರಣಕ್ಕಾಗಿ ಸರ್ಕಾರ ಅಧಿಕೃತವಾಗಿ ಕಸಾಯಿಖಾನೆಗೆ ಅನುಮತಿ ನೀಡಬೇಕು ಎಂದು ಮುಸ್ಲಿಂ ಮುಖಂಡರ ಸಭೆಯಲ್ಲಿ ಒತ್ತಾಯಿಸಲಾಗಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜಾನುವಾರುಗಳ ಹೆಸರಿನಲ್ಲಿ ನಡೆಯುತ್ತಿರುವ ತಾರತಮ್ಯ ಧೋರಣೆ ಕೃತ್ಯವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಾಜಕೀಯ, ಸಾಮಾಜಿಕ ಮುಖಂಡರು, ಧಾರ್ಮಿಕ ನೇತಾರರು ಹಲವಾರು ಮಸೀದಿಗಳ ಅಧ್ಯಕ್ಷರುಗಳನ್ನು ಒಳಗೊಂಡ ಮುಸ್ಲಿಂ ಮುಖಂಡರ ಸಭೆಯು ಶುಕ್ರವಾರ ಸಭೆ ಬಿಸಿರೋಡ್ ನಲ್ಲಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳ ಹೆಸರಿನಲ್ಲಿ ಮುಸ್ಲಿಮರನ್ನು ಗುರಿಪಡಿಸಿಕೊಂಡು ನಡೆಯುತ್ತಿರುವ ಶೂಟೌಟ್, ಮನೆ, ಕಟ್ಟಡಗಳ ಜಪ್ತಿ, ಪ್ರಾರ್ಥನೆ ಸಲ್ಲಿಸುವ ಮಸೀದಿಗಳ ಒಳಗೆ ಪೊಲೀಸ್ ಪೇದೆಗಳು ಗೋಹತ್ಯೆ ಕಾಯಿದೆಯ ಮಾಹಿತಿ ಕೊಡುವ ನೆಪದಲ್ಲಿ ಮುಸ್ಲಿಮರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಷಡ್ಯಂತ್ರವನ್ನು ಮುಸ್ಲಿಂ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ದ್ವೇಷ ಭಾಷಣ ಮಾಡುವ ಸಂಘಪರಿವಾರದ ಮುಖಂಡರ ಮೇಲೆ ಮೃದು ದೋರಣೆ ಬಗ್ಗೆ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

WhatsApp Image 2025 11 15 at 2.10.33 PM

ಮಂಗಳೂರಿನ ಕುದ್ರೋಳಿಯಲ್ಲಿರುವ ಅಧಿಕೃತ ಕಸಾಯಿಖಾನೆಯನ್ನು ಕಳೆದ ಹಲವಾರು ವರ್ಷಗಳಿಂದ ಬಂದ್ ಮಾಡಿ ಇಟ್ಟಿದೆ. ಇದರಿಂದ ಸರಕಾರದ ಆದಾಯವು ಕೈತಪ್ಪಿದ್ದು ಮಾತ್ರವಲ್ಲ ಕಾನೂನಾತ್ಮಕವಾದ ಆಹಾರವನ್ನು ಕಸಿದುಕೊಳ್ಳುವ ಷಡ್ಯಂತ್ರವಾಗಿದೆ. ಆದ್ದರಿಂದ ಕುದ್ರೋಳಿ ಕಸಾಯಿಖಾನೆಯನ್ನು ಕೂಡಲೇ ತೆರವುಗೊಳಿಸಬೇಕು ಮತ್ತು ಪ್ರತೀ ತಾಲೂಕು ಮಟ್ಟದಲ್ಲಿ ಸುಸಜ್ವಿತವಾದ ಕೋಣ, ಎತ್ತು ಮತ್ತು ಕುರಿಯ ಕಸಾಯಿಖಾನೆಯನ್ನು ತೆರೆಯಲು ಸರಕಾರ ಮತ್ತು ಜಿಲ್ಲಾಡಳಿತ ಮುಂದಾಗಬೇಕು. ಮತ್ತು ಅವೈಜ್ಞಾನಿಕ, ರೈತ ವಿರೋಧಿ, ಮತ್ತು ರಾಜಕೀಯ ಪ್ರೇರಿತ ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಹಿಂಪಡೆಯುವ ವಿಚಾರವಾಗಿ ಸರ್ಕಾರಕ್ಕೆ ಒತ್ತಡ ಹಾಕುವ ಬಗ್ಗೆ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ | ನಿಯಂತ್ರಣ ತಪ್ಪಿ ಸರ್ಕಲ್‌ಗೆ ಡಿಕ್ಕಿ ಹೊಡೆದ ಕಾರು; ಮೂವರು ಸಾವು

ಅದೇ ರೀತಿ ಬಿಜೆಪಿ ಸರಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯದಕ್ಕೆ ಪೊಲೀಸ್ ಇಲಾಖೆಯಿಂದ ಆಗುತ್ತಿರುವ ಅನ್ಯಾಯಕ್ಕೂ ಹೆಚ್ಚು ಸಮಸ್ಯೆ ಮುಸ್ಲಿಮರೇ ಅಧಿಕಾರಕ್ಕೆ ತಂದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಆಗುತ್ತಿದೆ. ಇಂತಹ ಪರಿಸ್ಥಿತಿ ಅಗುವುದಾದರೆ ಇದರ ವಿರುದ್ಧ ಪಕ್ಷಾತೀತವಾಗಿ ಹೋರಾಟ ನಡೆಸಲು ನಾವೆಲ್ಲರೂ ತಯಾರಾಗಿದ್ದೇವೆ ಎಂದು ಮುಖಂಡರು ಸಭೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಮುಸ್ಲಿಂ ಮುಖಂಡರ ನಿಯೋಗ ಶೀಘ್ರದಲ್ಲೇ ಮುಖ್ಯಮಂತ್ರಿ, ಮುಸ್ಲಿಂ ಸಚಿವರಿಗೆ ಮನವಿ ಸಲ್ಲಿಸುವ ಬಗ್ಗೆ, ತೀರ್ಮಾನಿಸಲಾಯಿತು. ಅದೇರೀತಿ ಎಲ್ಲಾ ಮುಸ್ಲಿಂ ಸಂಘಟನೆ, ರಾಜಕೀಯ ಪಕ್ಷಗಳ ಮುಖಂಡರನ್ನೊಳಗೊಂಡ ಜಿಲ್ಲಾ ಮುಸ್ಲಿಂ ಒಕ್ಕೂಟ ರಚನೆ ಮಾಡುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ರಾಜಕೀಯ, ಸಾಮಾಜಿಕ ಮುಖಂಡರು, ಧಾರ್ಮಿಕ ನೇತಾರರು ಹಲವಾರು ಮಸೀದಿಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...

ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ...

ಗದಗ | ಎಸ್ಸಿ, ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ  ಮೀಸಲಾತಿ ಪ್ರಮಾಣ ಹೆಚ್ಚಿಸಿ: ಬಾಲು ರಾಠೊಡ್ ಆಗ್ರಹ

"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ...

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ...