ದಕ್ಷಿಣ ಕನ್ನಡ | ಹೊಸವರ್ಷದ ಸಂಭ್ರಮ-2025; ಮದ್ಯ, ಬಿಯರ್ ಮಾರಾಟದಲ್ಲಿ ಅನಿರೀಕ್ಷಿತ ಕುಸಿತ

Date:

ಅಕ್ರಮವಾಗಿ ಮದ್ಯ(ಮಿಲಿಟರಿ, ಗೋವಾ ನಿರ್ಮಿತ ಮತ್ತು ಸುಂಕ ಮುಕ್ತ) ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಿದ ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಈ ಡಿಸೆಂಬರ್‌ನಲ್ಲಿ ಉತ್ತಮ ಮಾರಾಟದ ನಿರೀಕ್ಷೆಯಲ್ಲಿತ್ತು. ಆದರೆ ಅವರ ನಿರೀಕ್ಷೆ ಹುಸಿಯಾಗಿದ್ದು, ಮದ್ಯ ಮತ್ತು ಬಿಯರ್ ಮಾರಾಟದಲ್ಲಿ ತೀವ್ರ ಕುಸಿತ ಕಂಡಿದೆ.

- Advertisement -

ಡಿಸೆಂಬರ್ 31ರವರೆಗೆ, ಕೇವಲ 2,36,036 ಬಾಕ್ಸ್ ಭಾರತೀಯ ನಿರ್ಮಿತ ವಿದೇಶಿ ಮದ್ಯ ಮಾರಾಟವಾಗಿದೆ ಎಂಬುದು ಡೇಟಾದಿಂದ ತಿಳಿದುಬಂದಿದೆ. ಆದರೆ ಡಿಸೆಂಬರ್ 2024ರಲ್ಲಿ 2.76 ಲಕ್ಷ ಬಾಕ್ಸ್ ಮಾರಾಟದ ನಿರೀಕ್ಷೆಯಿತ್ತು. ಇದು ಕಳೆದ ಡಿಸೆಂಬರ್‌ನಲ್ಲಿ 2,41,034 ಬಾಕ್ಸ್‌ಗಳಿಗಿಂತ ಕಡಿಮೆಯಾಗಿದೆ. ಇದರ ನಡುವೆ ಡಿಸೆಂಬರ್ 2022ರಿಂದ 2023ರ ಅಂತ್ಯದವರೆಗೆ ಸುಮಾರು ಶೇ.12.67ರಷ್ಟು ಬೆಳವಣಿಗೆಯನ್ನು ಕಂಡ ಬಿಯರ್ 2,23,124 ಬಾಕ್ಸ್‌ಗಳಿಗೆ ಇಳಿದಿದೆ. ಕಳೆದ ವರ್ಷ 2,58,663 ಬಾಕ್ಸ್‌ಗಳ ಬಿಯರ್ ಮಾರಾಟವಾಗಿತ್ತೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮಂಗಳೂರು ಉಪವಿಭಾಗದ ಜಿಲ್ಲೆಗಳು ಸೇರಿದಂತೆ ರಾಜ್ಯದ ಇತರ ಎಲ್ಲ ಜಿಲ್ಲೆಗಳು ಉತ್ತಮವಾಗಿ ಮದ್ಯ ಮಾರಾಟ ಸಾಧಿಸಿದ್ದರೆ, ದಕ್ಷಿಣ ಕನ್ನಡ ಮದ್ಯ ಮಾರಾಟದಲ್ಲಿ ಹಿಂದುಳಿದಿದೆ. ಸಾಮಾನ್ಯವಾಗಿ ಡಿಸೆಂಬರ್‌ನಲ್ಲಿ ಹೆಚ್ಚಿನ ಬೆಳವಣಿಗೆ ಕಾಣುತ್ತಿದ್ದ ಮದ್ಯ ಮಾರಾಟ ಈ ಬಾರಿ ನಕಾರಾತ್ಮಕ ಮಾರಾಟವಾಗಿದೆ. ಈ ಬಗ್ಗೆ ನಮಗೂ ಖಚಿತವಿಲ್ಲ” ಎಂದು ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತ ಟಿ ಎಂ ಶ್ರೀನಿವಾಸ್ ಹೇಳಿದ್ದಾರೆ.

“ಕರಾವಳಿ ಜಿಲ್ಲೆಯಲ್ಲಿ ಪ್ರತಿವರ್ಷ ಮತ್ತು ಪ್ರತಿತಿಂಗಳು ಹೆಚ್ಚಿ ಬಿಯರ್‌ ಮಾರಾಟವಾಗುತ್ತಿತ್ತು. ಹೆಚ್ಚಾಗಿ ಯುವಕರು ಬಿಯರ್‌ ಖರೀದಿ ಮಾಡುತ್ತಿದ್ದರು. ಈ ಬಾರಿಯ ಬಿಯರ್ ಮಾರಾಟ ಕುಸಿತದ ಹಿಂದಿನ ಕಾರಣವನ್ನು ಕಂಡುಹಿಡಿಯಲು ಇಲಾಖೆಗೆ ಸಾಧ್ಯವಾಗುತ್ತಿಲ್ಲ” ಎಂದು ಶ್ರೀನಿವಾಸ್ ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಮದ್ಯ ಮಾರಾಟ ಕುಸಿದಿದೆ. ಕಾರ್ಮಿಕ ಚಟುವಟಿಕೆಗಳು ಕಡಿಮೆಯಾಗಿದೆ ಮತ್ತು ಈ ಹಿಂದೆ ಕೇರಳದಿಂದ ಬರುತ್ತಿದ್ದ ಗ್ರಾಹಕರ ಸಂಖ್ಯೆಯೂ ಕಡಿಮೆಯಾಗಿರಬಹುದೆಂದು ಅಂದಾಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಆನೇಕಲ್‌ | ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ; ಮೀನುಗಾರರಿಗೆ ಎಚ್ಚರಿಕೆ ನೀಡಿದ ಪುರಸಭೆ

ಕರ್ನಾಟಕ ಮತ್ತು ಕೇರಳದಲ್ಲಿ ಮದ್ಯದ ಬೆಲೆ ಒಂದೇ ಆಗಿರುವುದರಿಂದ ಇದೀಗ ನೆರೆಯ ರಾಜ್ಯದ ಜನರು ಗಡಿ ಪ್ರದೇಶಗಳಲ್ಲಿನ ಮದ್ಯದಂಗಡಿಗಳಿಗೆ ಹೆಚ್ಚಾಗಿ ಬರುತ್ತಿಲ್ಲ. ಮೀನುಗಾರಿಕೆ ಚಟುವಟಿಕೆಗಳು ಸಂಪೂರ್ಣವಾಗಿ ನಿಂತಿದ್ದು, ಸುಮಾರು ಅರ್ಧದಷ್ಟು ಮೀನುಗಾರಿಕಾ ದೋಣಿಗಳು ಕಾರ್ಯಾಚರಣೆಯನ್ನು ನಿಲ್ಲಿಸಿವೆಯೆಂದು ತಿಳಿದುಬಂದಿದೆ. ಇದರಿಂದಲೂ ಮದ್ಯ ಮಾರಾಟ ಕುಸಿತ ಕಂಡ ಸಾಧ್ಯತೆಯಿದೆ. ಆದರೂ ಮಗರ ಪ್ರದೇಶಗಳಲ್ಲಿ ಮದ್ಯ ಮಾರಾಟ ಸಕಾರಾತ್ಮಕವಾಗಿದೆಯೆಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಒಪ್ಪತ್ತಿನ ಊಟಕ್ಕೆ ಕಷ್ಟಪಟ್ಟು ದುಡಿಯುವ ಜನರು ಮದ್ಯದ ಅಮಲಿಗೆ ಮುಳುಗಿ ಕುಟುಂಬಗಳನ್ನೇ ಸರ್ವನಾಶ ಮಾಡಿಕೊಂಡರೂ ಕಳವಳಗೊಳ್ಳದ ಅಧಿಕಾರಿಗಳು, ʼಕಾರ್ಮಿಕ ಚಟುವಟಿಕೆಗಳು ಕಡಿಮೆಯಾಗಿರುವುದರಿಂದ ಮದ್ಯ ಮಾರಾಟ ಅನರೀಕ್ಷಿತವಾಗಿ ಕುಸಿತ ಕಂಡಿದೆʼಯೆಂದು ಬಾಲಸುಟ್ಟ ಬೆಕ್ಕಿನಂತಾಡುತ್ತಿದ್ದಾರೆಂದು ಸ್ಥಳೀಯರು ವ್ಯಂಗ್ಯವಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...