ಕರಾವಳಿಯಲ್ಲಿ ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುವ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಸೆರೆಹಿಡಿದಿದ್ದಾರೆ.
ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಟ್ಟಿಂಗ್ ನಡೆಸುತ್ತಿದ್ದ ಪತ್ಯೇಕ ಪ್ರಕರಣಗಳಲ್ಲಿ ಹಲವರನ್ನು ಬಂಧಿಸಲಾಗಿದೆ. ಮೊದಲನೇ ಪ್ರಕರಣದಲ್ಲಿ ಮಾರ್ಪಾಡಿಯ ಸುಖೇಶ್ ಆಚಾರ್ಯ(33) ಉಮೇಶ್(40) ಮತ್ತು ಪುರಂದರ ಕುಲಾಲ್(38) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಮೂಡುಬಿದಿರೆಯ ಕಡಲಕೆರೆ ಪಾರ್ಕ್‌ನಲ್ಲಿ ಸುಖೇಶ್ ಆಚಾರ್ಯ ಎಂಬಾತನು ಪುರಂದರ್ ಎಂಬಾತನಿಂದ ಹಣ ಪಡೆದು allpaanel.com/m/home ಎಂಬ ಮೊಬೈಲ್ ವೆಬ್ ಸೈಟ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿ ಸುಖೇಶ್ ಆಚಾರ್ಯ ಎಂಬಾತನನ್ನು ಹಿಡಿದು ಪೊಲೀಸರು ವಿಚಾರಿಸಿದ್ದಾರೆ.
ಶ್ರೀಲಂಕ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಪಂದ್ಯದಲ್ಲಿ ಬೆಟ್ಟಿಂಗ್ ಮಾಡಲು ಅವರಿಂದ ಹಣ ಪಡೆದು ಬೆಟ್ಟಿಂಗ್ ಆಡುತ್ತಿರುವುದಾಗಿ ಸುಖೇಶ್ ಆಚಾರ್ಯ ವಿಚಾರಣೆ ವೇಳೆ ತಿಳಿಸಿದ್ದು, allpaanel.com/m/home ಎಂಬ ವೆಬ್ ಸೈಟನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿರುತ್ತಾನೆ.
ಆರೋಪಿ ಸುಖೇಶ್ ಆಚಾರ್ಯನ ಬಳಿ ಇರುವ ಮೋಬೈಲ್‌ನ ಗೂಗಲ್ ಕ್ರೋಮ್ ಪರಿಶೀಲಿಸಿದಾಗ allpaanel.com/m/home ಎಂಬ ವೆಬ್ ಸೈಟ್‌ನಲ್ಲಿ ಹಣ ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್‌ಗೆ ತೊಡಗಿಸಿಕೊಂಡಿರುವ ಬಗ್ಗೆ ಕಂಡುಬಂದಿದೆ. ಶ್ರೀಲಂಕ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ನಡೆದಿದ್ದು, ಈ ಪಂದ್ಯಕ್ಕಾಗಿ ಹಣವನ್ನು ಬೆಟ್ಟಿಂಗ್ ಹಾಕುವ ಗಿರಾಕಿಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ನವೀದ್ (30), ಉಮೇಶ್ (40), ಪ್ರಸಾದ್ ದೇವಾಡಿಗ (35) ಎಂಬುವವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಮೂಡಬಿದಿರೆ ತಾಲೂಕು, ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿರುವ ಅಂಗಡಿಯ ಮುಂಭಾಗ ನವೀದ್ ಎಂಬಾತನು ಪ್ರಸಾದ್ ಮತ್ತು ಉಮೇಶ್ ಎಂಬುವವರಿಂದ ಹಣ ಪಡೆದು Comfort Zone 247 ಎಂಬ ಮೊಬೈಲ್ ವೆಬ್ ಸೈಟ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.
ನವೀದ್ ಎಂಬಾತನನ್ನು ಹಿಡಿದು ವಿಚಾರಿಸಿದಾಗ ಶ್ರೀಲಂಕ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಪಂದ್ಯದಲ್ಲಿ ಬೆಟ್ಟಿಂಗ್ ಮಾಡಲು ಅವರಿಂದ ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಹಣ ಪಡೆಯುವುದಾಗಿ ತಿಳಿಸಿದ್ದಾನೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | 5 ಗಂಟೆ ವಿದ್ಯುತ್ ಪೂರೈಕೆಗೆ ಬೆಸ್ಕಾಂ ಎಂ ಡಿ ಭರವಸೆ
Comfort Zone 247 ಎಂಬ ವೆಬ್ ಸೈಟನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ ಪ್ರಕಾರ ಆರೋಪಿ ನವೀದ್ ಬಳಿ ಇರುವ ಮೊಬೈಲ್‌ನ ಗೂಗಲ್ ಕ್ರೋಮ್‌ನಲ್ಲಿ Comfort Zone 247 ಎಂಬ ವೆಬ್ ಸೈಟ್‌ನಲ್ಲಿ ಹಣವನ್ನು ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್‌ಗೆ ತೊಡಗಿಸಿಕೊಂಡಿರುವ ಬಗ್ಗೆ ಕಂಡುಬಂದಿದೆ.
ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.