ಕುಮಟಾ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ (ಎಸಿ) ಪಿ ಶ್ರವಣ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಕಲ್ಯಾಣಿ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಿದ ಶ್ರವಣ್ ಕುಮಾರ್ ಅವರಿಂದ ದಕ್ಷ ಹಾಗೂ ಜನಸ್ನೇಹಿ ಆಡಳಿತವನ್ನು ನೀಡಲಿದ್ದಾರೆ ಎನ್ನುವ ನಿರೀಕ್ಷೆ ಸಾರ್ವಜನಿಕರಲ್ಲಿದೆ. ತಾಲೂಕಿನ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳನ್ನು ಪರಿಹರಿಸುವಲ್ಲಿ ಇವರು ಯಶಸ್ವಿಯಾಗಲಿ ಎಂದು ಆಶಿಸಿದ್ದಾರೆ. ಯುವ ಅಧಿಕಾರಿಯೊಬ್ಬರು ಅಧಿಕಾರ ವಹಿಸಿಕೊಂಡಿರುವುದರಿಂದ ಆಡಳಿತದಲ್ಲಿ ಹೊಸತನ ಮತ್ತು ಚುರುಕುತನ ಮೂಡಬಹುದು ಎಂಬ ವಿಶ್ವಾಸ ವ್ಯಕ್ತವಾಗಿದೆ.
ಪಿ. ಶ್ರವಣ್ ಕುಮಾರ್ ವ್ಯಕ್ತಿ ಪರಿಚಯ: ಇವರು ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಗ್ರಾಮದವರು. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಪದವಿ ಪಡೆದಿದ್ದಾರೆ. ಕೆಲ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ, ಇಂಡಿಯನ್ ಡಿಫೆನ್ಸ್ ಸ್ಟೇಟ್ ಸರ್ವೀಸ್‌ನಲ್ಲಿ ತರಬೇತಿ ಪಡೆದಿದ್ದಾರೆ. ಬಳಿಕ ಇಂಡಿಯನ್ ರೆವೆನ್ಯೂ ಸರ್ವಿಸ್‌ನಲ್ಲಿಯೂ ಸೇವೆ ಸಲ್ಲಿಸಿ, 2023ರ ಬ್ಯಾಚ್‌ನ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದರು.
ಇದನ್ನೂ ಓದಿ: ಉತ್ತರ ಕನ್ನಡ | ಭೂಕುಸಿತ, ಕಡಲ್ಕೊರೆತ ತಡೆಗೆ ₹800 ಕೋಟಿ ಅನುದಾನ: ಸಚಿವ ಕೃಷ್ಣ ಬೈರೇಗೌಡ