ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

Date:

ಕುಮಟಾ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ (ಎಸಿ) ಪಿ ಶ್ರವಣ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಕಲ್ಯಾಣಿ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಿದ ಶ್ರವಣ್ ಕುಮಾರ್ ಅವರಿಂದ ದಕ್ಷ ಹಾಗೂ ಜನಸ್ನೇಹಿ ಆಡಳಿತವನ್ನು ನೀಡಲಿದ್ದಾರೆ ಎನ್ನುವ ನಿರೀಕ್ಷೆ ಸಾರ್ವಜನಿಕರಲ್ಲಿದೆ. ತಾಲೂಕಿನ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳನ್ನು ಪರಿಹರಿಸುವಲ್ಲಿ ಇವರು ಯಶಸ್ವಿಯಾಗಲಿ ಎಂದು ಆಶಿಸಿದ್ದಾರೆ. ಯುವ ಅಧಿಕಾರಿಯೊಬ್ಬರು ಅಧಿಕಾರ ವಹಿಸಿಕೊಂಡಿರುವುದರಿಂದ ಆಡಳಿತದಲ್ಲಿ ಹೊಸತನ ಮತ್ತು ಚುರುಕುತನ ಮೂಡಬಹುದು ಎಂಬ ವಿಶ್ವಾಸ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪಿ. ಶ್ರವಣ್ ಕುಮಾರ್ ವ್ಯಕ್ತಿ ಪರಿಚಯ: ಇವರು ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಗ್ರಾಮದವರು. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಪದವಿ ಪಡೆದಿದ್ದಾರೆ. ಕೆಲ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ, ಇಂಡಿಯನ್ ಡಿಫೆನ್ಸ್ ಸ್ಟೇಟ್ ಸರ್ವೀಸ್‌ನಲ್ಲಿ ತರಬೇತಿ ಪಡೆದಿದ್ದಾರೆ. ಬಳಿಕ ಇಂಡಿಯನ್ ರೆವೆನ್ಯೂ ಸರ್ವಿಸ್‌ನಲ್ಲಿಯೂ ಸೇವೆ ಸಲ್ಲಿಸಿ, 2023ರ ಬ್ಯಾಚ್‌ನ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದರು.

ಇದನ್ನೂ ಓದಿ: ಉತ್ತರ ಕನ್ನಡ | ಭೂಕುಸಿತ, ಕಡಲ್ಕೊರೆತ ತಡೆಗೆ ₹800 ಕೋಟಿ ಅನುದಾನ: ಸಚಿವ ಕೃಷ್ಣ ಬೈರೇಗೌಡ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...