ಮಾರ್ಚ್ 2ರಂದು ನಡೆಯುವ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 5 ರಿಂದ 6 ಸಾವಿರ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ “ಹೊಂಬೆಳಕು” ಪೋಸ್ಟರ್ (ಭಿತ್ತಿ ಪತ್ರ) ಬಿಡುಗಡೆಗೊಳಿಸಿ ಮಾತನಾಡಿದರು.
“ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಗ್ರಾಮ ಸ್ವರಾಜ್ ಟ್ರಸ್ಟ್ ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ “ಹೊಂಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾರ್ಚ್ 2ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಆಯೋಜಿಸಿದೆ” ಎಂದು ಮಾಹಿತಿ ನೀಡಿದರು.
“ಈ ಹಿಂದೆ ಕೋಟ ಶ್ರೀನಿವಾಸ ಪೂಜಾರಿಯವರ ನೇತ್ರತ್ವದಲ್ಲಿ ಹೊಳಪು ಕ್ರಿಡೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಆಗ್ರಹದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ
ಸುದ್ದಿಗೋಷ್ಟಿಯಲ್ಲಿ ಹೊಂಬೆಳಕು ಸಮಾವೇಶದ ಗೌರವ ಸಲಹೆಗಾರ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಗ್ರಾಮ ಸ್ವರಾಜ್ ಟ್ರಸ್ಟ್ ಆಧ್ಯಕ್ಷ ಕೆ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಲಾರೆನ್ಸ್ ಡಿಸೋಜ, ಖಜಾಂಚಿ ಪ್ರವೀಣ ಚಂದ್ರ ಆಳ್ವ ಇದ್ದರು.
