ದಕ್ಷಿಣ ಕನ್ನಡ | ಪತ್ರಿಕಾ ದಿನಾಚರಣೆ: ಮೋಗ್ಲಿಂಗ್ ಸ್ಮರಣೆ

Date:

ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ಅವರ ಹೆಸರಿನಲ್ಲಿ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಆಳ್ವಾರಿಸ್ ಒತ್ತಾಯಿಸಿದರು.

- Advertisement -

ಸೋಮವಾರ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೋಗ್ಲಿಂಗ್ ಸ್ಮರಣೆಯ ಕಾರ್ಯಕ್ರಮವನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, “ಹರ್ಮನ್ ಮೋಗ್ಲಿಂಗ್ ಅವರು ಮಂಗಳೂರ ಸಮಾಚಾರ ಪತ್ರಿಕೆಯನ್ನು ಆರಂಭಿಸುವ ಮೂಲಕ ನೈಜ ಪತ್ರಿಕಾ ಧರ್ಮದ ಅಡಿಪಾಯ ಹಾಕಿದ್ದರು, ಇವತ್ತಿನ ಕಾಲ ಸಂದರ್ಭದಲ್ಲಿ ಪತ್ರಿಕಾ ಧರ್ಮವನ್ನು ಪಾಲಿಸುವ ಬಗ್ಗೆ ಬದ್ಧತೆಯಿಂದ ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರು ಕಾರ್ಯನಿರ್ವಹಿಸಬೇಕಾಗಿದೆ” ಎಂದು ಹೇಳಿದರು.

ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ.ಎಚ್.ಎಮ್.ವಾಟ್ಸನ್ ಅವರು ಮಾತನಾಡಿ, “ಕಿಟೆಲ್, ಮೋಗ್ಲಿಂಗ್, ಬ್ರಿಗೆಲ್, ಗುಂಡರ್ಟ್ ಮೊದಲಾದ ಯುಗ ಪ್ರವರ್ತಕರ ನೆನಪಿನಲ್ಲಿ ಬಾಸೆಲ್ ಮಿಷನ್ ಮ್ಯೂಸಿಯಂ ಆರಂಭಿಸುವ ಉದ್ದೇಶ ಇದೆ” ಎಂದು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವ ಅಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ ಕಾರ್ಯಕ್ರಮ ನಿರ್ವಹಿಸಿದರು, ಕಾರ್ಯದರ್ಶಿ ಗಿರಿಧರ್ ಶೆಟ್ಟಿ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...