ದಕ್ಷಿಣ ಕನ್ನಡ | ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ

Date:

Advertisements

ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ-ಕಾರ್ಮಿಕ-‌ಕೃಷಿ ಕೂಲಿಕಾರರಿಂದ ನಡೆದ ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಜೆ ಬಾಲಕೃಷ್ಣ ಶೆಟ್ಟಿಯವರು ಮಾತನಾಡಿ, “ನೀತಿ ಆಯೋಗದ ಪರಿಕಲ್ಪನೆಗಳು ಬದಲಾಗಿದ್ದರ ಪರಿಣಾಮ ಇಂದಿನ ಆರ್ಥಿಕ ನೀತಿಗಳು ಉದ್ಯೋಗರಹಿತವಾಗಿ ಜಾರಿಯಾಗುತ್ತಿವೆ. ಉತ್ಪಾದನಾ ವಲಯದಲ್ಲಿ ಇದೇ ಮೊದಲ ಬಾರಿಗೆ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಕುಸಿದಿದೆ. ಮೋದಿ ಸರ್ಕಾರ ಎಷ್ಟೇ ಜಂಭ ಕೊಚ್ಚಿಕೊಂಡರೂ ಬಂಡವಾಳ ಹೂಡಿಕೆ ಆಗುತ್ತಿಲ್ಲ.‌ ಉದ್ಯೋಗಸ್ಥರ ಬದಲಾಗಿ ಗುತ್ತಿಗೆ ಹೊರಗುತ್ತಿಗೆ ತಾತ್ಕಾಲಿಕ ಉದ್ಯೋಗಗಳು ಹೆಚ್ಚಾಗಿವೆ. ಬಂಡವಾಳಶಾಹಿಗಳ ಪರವಾಗಿ ಕಾರ್ಮಿಕ ಕಾನೂನುಗಳನ್ನು ಬದಲಿಸಿ ಸಂಹಿತೆಗಳನ್ನಾಗಿ ಪರಿವರ್ತಿಸಲಾಗಿದೆ” ಎಂದು ಹೇಳಿದರು.

ಎಐಯುಟಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜ ಮಾತನಾಡಿ, “ಕಳೆದ 10 ವರ್ಷಗಳ ಮೋದಿ ಸರ್ಕಾರದ ನೀತಿಗಳು ಕಾರ್ಮಿಕ ವರ್ಗದ ಬದುಕಿನ ಮೇಲೆ ಪ್ರಹಾರಗಳನ್ನು ನಡೆಸಿವೆ. ಆದಾಯ ಕುಸಿತ, ಖಾಯಂ ಉದ್ಯೋಗಗಳ ಕುಸಿತ, ಗುತ್ತಿಗೆ ಹೊರಗುತ್ತಿಗೆ ಹಾಗೂ ಬಿಟ್ಟಿ ದುಡಿಮೆ ಹೆಚ್ಚಳ, ಕೋವಿಡ್ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕರು ಅನುಭವಿಸಿದ ಸಂಕಟ ಹಾಗೂ ಕೃಷಿ ಬಿಕ್ಕಟ್ಟಿನ ಪರಿಣಾಮದಿಂದ ಅಸಂಘಟಿತ ಕಾರ್ಮಿಕರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳ, ಸಾಮಾಜಿಕ ರಕ್ಷಣೆ ಇಲ್ಲದ ಅತಂತ್ರದ ಬದುಕು, ಯೋಜನಾ ಕಾರ್ಮಿಕರನ್ನು ಗೌರವಧನದ ಹೆಸರಲ್ಲಿ ಶೋಷಿಸುವ ನೀತಿ ತೀವ್ರಗೊಂಡಿದೆ” ಎಂದು ಹೇಳಿದರು.

Advertisements

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಜನಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ಒದಗಿಸಬೇಕಾದ ಕೇಂದ್ರ ಸರ್ಕಾರ ಪ್ರತಿಯೊಂದು ಹಂತದಲ್ಲಿಯೂ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭವಾಗುವ ನೀತಿಗಳನ್ನು ಜಾರಿಗೊಳಿಸುತ್ತಿದೆ. ಇದರಿಂದಾಗಿ ದೇಶದ ಶೇ.45ರಷ್ಟು ಸಂಪತ್ತು ಹೊಂದಿರುವ ಕೇವಲ ಶೇ.1ರಷ್ಟಿರುವ ಶ್ರೀಮಂತರಲ್ಲಿ ಕೇವಲ ಶೇ.3ರಷ್ಟು ಮಾತ್ರವೇ ಜಿಎಸ್‌ಟಿ ಸಂಗ್ರಹ ಮಾಡಲಾಗುತ್ತಿದೆ. ಆದರೆ ದೇಶದ ಶೇ.50ರಷ್ಟು ಜನರಿಂದ ಶೇ.65ರಷ್ಟು ಜಿಎಸ್‌ಟಿ ಸಂಗ್ರಹ ಮಾಡಲಾಗುತ್ತಿದೆ” ಎಂದು ಹೇಳಿದರು.

ಸಭೆಯನ್ನುದ್ದೇಶಿಸಿ ರಾಜ್ಯ ರೈತ ಸಂಘದ ನಾಯಕ ಸನ್ನಿ ಡಿಸೋಜ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಯಾದವ ಶೆಟ್ಟಿಯವರು ಮಾತನಾಡಿ, ಕೇಂದ್ರ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕಘಟನೆಗಳ ಸಮಿತಿಯ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ನಾಯಕರುಗಳಾದ ವಸಂತ ಆಚಾರಿ, ಯೋಗೀಶ್‌ ಜಪ್ಪಿನಮೊಗರು, ಸುಕುಮಾರ್, ಪದ್ಮಾವತಿ ಶೆಟ್ಟಿ, ಜಯಂತ ನಾಯಕ್, ಜಯಂತಿ ಶೆಟ್ಟಿ, ವಸಂತಿ ಕುಪ್ಪೆಪದವು, ರಾಧಾ ಮೂಡಬಿದ್ರೆ, ಗಿರಿಜಾ, ನೋಣಯ್ಯ ಗೌಡ, ರೋಹಿದಾಸ್, ಸುಂದರ ಕುಂಪಲ, ಬಿ ಕೆ‌ ಇಮ್ತಿಯಾಜ್,  ಎಐಟಿಯುಸಿ ಜಿಲ್ಲಾ ಮುಖಂಡರುಗಳಾದ ಬಿ ಶೇಖರ್, ವಿ ಕುಕ್ಯಾನ್, ಎಚ್ ವಿ ರಾವ್, ಕರುಣಾಕರ್, ಸುರೇಶ್ ಕುಮಾರ್, ಸುಲೋಚನ, ರೈತ ಸಂಘಟನೆಗಳ ಮುಖಂಡರುಗಳಾದ ಕೃಷ್ಣಪ್ಪ ಸಾಲ್ಯಾನ್, ಸದಾಶಿವದಾಸ್, ಓಸ್ವಾಲ್ಡ್ ಪ್ರಕಾಶ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X