ದಕ್ಷಿಣ ಕನ್ನಡ | ಆಹಾರ ಸುರಕ್ಷತಾ ಕಾಯ್ದೆಯಡಿ ‘ಪಿಜಿ’ಗಳ ನೋಂದಣಿ ಕಡ್ಡಾಯ: ಡಿಎಚ್‌ಒ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ‘ಪೇಯಿಂಗ್ ಗೆಸ್ಟ್’ (ಪಿಜಿ)ಸಂಸ್ಥೆಗಳನ್ನು ಆಹಾರ ಸುರಕ್ಷತಾ ಕಾಯ್ದೆಯಡಿ ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಸೂಚನೆ ನೀಡಿದ್ದಾರೆ.

ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. “ಆಹಾರ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ವಸತಿ ನಿಲಯಗಳು, ಬಿಸಿಯೂಟ ನಡೆಸುವ ಶಾಲೆಗಳಿಗೆ ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಆರೋಗ್ಯ ಸುರಕ್ಷೆಯ ದೃಷ್ಟಿಯಿಂದ ಇವನ್ನು ಕಡ್ಡಾಯವಾಗಿ ಪಾಲಿಸಬೇಕು” ಎಂದರು.

“ಜಿಲ್ಲೆಯ ಕೆಲವು ಖಾಸಗಿ ನರ್ಸಿಂಗ್ ಕಾಲೇಜುಗಳ ವಸತಿ ನಿಲಯಗಳಲ್ಲಿ ಇತ್ತೀಚೆಗೆ ವಾಂತಿ-ಬೇಧಿ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಮುಂಜಾ‌ಗೃತಾ ಕ್ರಮವಾಗಿ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ಮಾಹಿತಿ ನೀಡಲು ಡಿಡಿಪಿಐ, ಸಂಬಂಧಪಟ್ಟ ಇಲಾಖೆಗಳ ಪ್ರಮುಖರು, ವಸತಿ ನಿಲಯಗಳ ಪ್ರಮುಖರ ಸಭೆಯನ್ನು ಕರೆಯಲಾಗಿದೆ” ಎಂದು ಮಾಹಿತಿ ನೀಡಿದರು.

Advertisements

ಒಂದೊಮ್ಮೆ ಸಂಸ್ಥೆಗಳು ನಿಯಮಗಳನ್ನು ಪಾಲಿಸದಿದ್ದಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮೂಲಕ ಪ್ರಕರಣ ದಾಖಲಿಸಬಹುದಾಗಿದೆ. ಈ ಹಿಂದೆ ನಗರದ ಕದ್ರಿ ರಸ್ತೆಯ ನರ್ಸಿಂಗ್ ಕಾಲೇಜೊಂದರ ವಿದ್ಯಾರ್ಥಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾನುವಾರದಂದು ಇನ್ನೊಂದು ಸಂಸ್ಥೆಯ ವಸತಿ ನಿಲಯದಲ್ಲಿ ಇಂತಹದ್ದೇ ಪ್ರಕರಣ ನಡೆದಿರುವುದು ಕಂಡುಬಂದಿದೆ. ಘಟನೆಯ ಸ್ಥಳದಲ್ಲಿದ್ದ ಆಹಾರದ ಸ್ಯಾಂಪಲ್‌ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ವಹಿಸಲಾಗುತ್ತದೆ” ಎಂದು ಹೇಳಿದರು.

“ವಳಚ್ಚಿಲ್‌ನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಅಲ್ಲಿನ ಅಡುಗೆ ಕೋಣೆಗೆ ಬಾಗಿಲು ಹಾಕಿಸಲಾಗಿದೆ. ದಾಸ್ತಾನು ಕೊಠಡಿಯಲ್ಲಿ ದಿನಸಿ, ತರಕಾರಿಗಳು, ಆಹಾರ ಪದಾರ್ಥಗಳ ಸ್ವಚ್ಛತೆ ಕಾಪಾಡುವುದರ ಜತೆಗೆ, ಇಲಿ, ಹೆಗ್ಗಣ, ಹಲ್ಲಿ ಕ್ರಿಮಿಕೀಟಗಳ ಹಾವಳಿ ಇರದಂತೆ ಎಚ್ಚರಿಕೆ ವಹಿಸಬೇಕು. ಎಲ್ಲ ವಸತಿ ನಿಲಯಗಳು ಪಾಲಿಸಬೇಕಾದ ನಿಯಮಗಳನ್ನು ಕಳುಹಿಸಲಾಗಿದ್ದು, ಇದು ಬಿಸಿಯೂಟ ಒದಗಿಸುವ ಶಾಲೆಗಳಿಗೂ ಅನ್ವಯಿಸುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್;‌ ಸುಟ್ಟು ಹೋದ 6 ಎಕರೆ ಕಬ್ಬು

“ಅಡುಗೆ ಕೋಣೆಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಕುಡಿಯಲು ಮತ್ತು ಅಡುಗೆಗೆ ಬಳಸುವ ನೀರು ಶುದ್ಧವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಅಡುಗೆ ಮಾಡುವವರು, ಸಹಾಯಕರು, ಊಟ ಬಡಿಸುವವರು ಕಡ್ಡಾಯವಾಗಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಿ, ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಬೇಕು” ಎಂದು ಸೂಚಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X