ದಕ್ಷಿಣ ಕನ್ನಡ | ಆಹಾರ ಸುರಕ್ಷತಾ ಕಾಯ್ದೆಯಡಿ ‘ಪಿಜಿ’ಗಳ ನೋಂದಣಿ ಕಡ್ಡಾಯ: ಡಿಎಚ್‌ಒ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ‘ಪೇಯಿಂಗ್ ಗೆಸ್ಟ್’ (ಪಿಜಿ)ಸಂಸ್ಥೆಗಳನ್ನು ಆಹಾರ ಸುರಕ್ಷತಾ ಕಾಯ್ದೆಯಡಿ ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಸೂಚನೆ ನೀಡಿದ್ದಾರೆ.

- Advertisement -

ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. “ಆಹಾರ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ವಸತಿ ನಿಲಯಗಳು, ಬಿಸಿಯೂಟ ನಡೆಸುವ ಶಾಲೆಗಳಿಗೆ ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಆರೋಗ್ಯ ಸುರಕ್ಷೆಯ ದೃಷ್ಟಿಯಿಂದ ಇವನ್ನು ಕಡ್ಡಾಯವಾಗಿ ಪಾಲಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಜಿಲ್ಲೆಯ ಕೆಲವು ಖಾಸಗಿ ನರ್ಸಿಂಗ್ ಕಾಲೇಜುಗಳ ವಸತಿ ನಿಲಯಗಳಲ್ಲಿ ಇತ್ತೀಚೆಗೆ ವಾಂತಿ-ಬೇಧಿ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಮುಂಜಾ‌ಗೃತಾ ಕ್ರಮವಾಗಿ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ಮಾಹಿತಿ ನೀಡಲು ಡಿಡಿಪಿಐ, ಸಂಬಂಧಪಟ್ಟ ಇಲಾಖೆಗಳ ಪ್ರಮುಖರು, ವಸತಿ ನಿಲಯಗಳ ಪ್ರಮುಖರ ಸಭೆಯನ್ನು ಕರೆಯಲಾಗಿದೆ” ಎಂದು ಮಾಹಿತಿ ನೀಡಿದರು.

“ಒಂದೊಮ್ಮೆ ಸಂಸ್ಥೆಗಳು ನಿಯಮಗಳನ್ನು ಪಾಲಿಸದಿದ್ದಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮೂಲಕ ಪ್ರಕರಣ ದಾಖಲಿಸಬಹುದಾಗಿದೆ. ಈ ಹಿಂದೆ ನಗರದ ಕದ್ರಿ ರಸ್ತೆಯ ನರ್ಸಿಂಗ್ ಕಾಲೇಜೊಂದರ ವಿದ್ಯಾರ್ಥಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾನುವಾರದಂದು ಇನ್ನೊಂದು ಸಂಸ್ಥೆಯ ವಸತಿ ನಿಲಯದಲ್ಲಿ ಇಂತಹದ್ದೇ ಪ್ರಕರಣ ನಡೆದಿರುವುದು ಕಂಡುಬಂದಿದೆ. ಘಟನೆಯ ಸ್ಥಳದಲ್ಲಿದ್ದ ಆಹಾರದ ಸ್ಯಾಂಪಲ್‌ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ವಹಿಸಲಾಗುತ್ತದೆ” ಎಂದು ಹೇಳಿದರು.

“ವಳಚ್ಚಿಲ್‌ನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಅಲ್ಲಿನ ಅಡುಗೆ ಕೋಣೆಗೆ ಬಾಗಿಲು ಹಾಕಿಸಲಾಗಿದೆ. ದಾಸ್ತಾನು ಕೊಠಡಿಯಲ್ಲಿ ದಿನಸಿ, ತರಕಾರಿಗಳು, ಆಹಾರ ಪದಾರ್ಥಗಳ ಸ್ವಚ್ಛತೆ ಕಾಪಾಡುವುದರ ಜತೆಗೆ, ಇಲಿ, ಹೆಗ್ಗಣ, ಹಲ್ಲಿ ಕ್ರಿಮಿಕೀಟಗಳ ಹಾವಳಿ ಇರದಂತೆ ಎಚ್ಚರಿಕೆ ವಹಿಸಬೇಕು. ಎಲ್ಲ ವಸತಿ ನಿಲಯಗಳು ಪಾಲಿಸಬೇಕಾದ ನಿಯಮಗಳನ್ನು ಕಳುಹಿಸಲಾಗಿದ್ದು, ಇದು ಬಿಸಿಯೂಟ ಒದಗಿಸುವ ಶಾಲೆಗಳಿಗೂ ಅನ್ವಯಿಸುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್;‌ ಸುಟ್ಟು ಹೋದ 6 ಎಕರೆ ಕಬ್ಬು

“ಅಡುಗೆ ಕೋಣೆಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಕುಡಿಯಲು ಮತ್ತು ಅಡುಗೆಗೆ ಬಳಸುವ ನೀರು ಶುದ್ಧವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಅಡುಗೆ ಮಾಡುವವರು, ಸಹಾಯಕರು, ಊಟ ಬಡಿಸುವವರು ಕಡ್ಡಾಯವಾಗಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಿ, ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಬೇಕು” ಎಂದು ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...