ದಕ್ಷಿಣ ಕನ್ನಡ | ಸರ್ವಿಸ್ ಬಸ್ ನಿಲ್ದಾಣ ಕಾಮಗಾರಿ; ಮೂರು ತಿಂಗಳೊಳಗೆ ಪೂರ್ಣಗೊಳಿಸುವ ಭರವಸೆ

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ನ ತಾತ್ಕಾಲಿಕ ಸರ್ವಿಸ್ ಬಸ್ ನಿಲ್ದಾಣವನ್ನು ಸ್ಮಾರ್ಟ್‌ಗೊಳಿಸುವ ಮುಂದುವರಿದ ಕಾಮಗಾರಿಯನ್ನು ಮುಂದಿನ ಮೂರು ತಿಂಗಳೊಳಗೆ ಮುಗಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.

- Advertisement -

ಸರ್ವಿಸ್ ಬಸ್ ನಿಲ್ದಾಣದಲ್ಲಿನ ಅವ್ಯವಸ್ಥೆಯ ಕುರಿತಂತೆ ಸಾರ್ವಜನಿಕರ ದೂರಿನನ್ವಯ ಶಾಸಕ ವೇದವ್ಯಾಸ ಕಾಮತ್ ಅವರ ಜತೆ ಪಾಲಿಕೆಯ ಉಪ ಮೇಯರ್, ಸ್ಥಾಯಿಸಮಿತಿ ಅಧ್ಯಕ್ಷರು ಹಾಗೂ ಅಧಿಕಾರಿಗಳ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಾಕಷ್ಟು ಸಮಸ್ಯೆ ಇದೆ. ಬಸ್ ನಿಲ್ದಾಣದ ಮೇಲ್ಛಾವಣಿ, ಶೌಚಾಲಯ, ಸ್ಪೀಡ್ ಬ್ರೇಕರ್, ಪ್ರಯಾಣಿಕರಿಗೆ ಆಸನದ ವ್ಯವಸ್ಥೆ ಹಾಗೂ ಬೀದಿ ವ್ಯಾಪಾರಿಗಳ ಸಮಸ್ಯೆಯನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು. ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿಯಿಂದ ಮುಂದುವರೆದ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು” ಎಂದು ಹೇಳಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, “ಹಲವು ವರ್ಷಗಳ ಹಿಂದೆ ಇಲ್ಲಿ ಬಸ್ ನಿಲ್ದಾಣವೇ ಇರಲಿಲ್ಲ. ಸ್ಮಾರ್ಟ್ ಸಿಟಿ ಹಾಗೂ ಮನಪಾದ ಮೂಲಕ ಇದಕ್ಕೊಂದು ಹೊಸ ರೂಪು ನೀಡಲು ನಿರ್ಧರಿಸಿ ಈಗಾಗಲೇ ‌4 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಕಾಂಕ್ರಿಟೀಕರಣ ನಡೆದಿದೆ. ವ್ಯವಸ್ಥಿತವಾಗಿ ಮೇಲ್ಛಾವಣಿ, ಬಸ್‌ ರೂಟ್‌ಗೆ ಸಂಬಂಧಿಸಿ ನಾಮಫಲಕ, ಶೌಚಾಲಯ, ಕ್ಯಾಂಟೀನ್, ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕಾಗಿದೆ. ಮುಂದುವರರೆದ ಕಾಮಗಾರಿಗಾಗಿ ತಯಾರಿಸಲಾಗಿರುವ ಯೋಜನಾ ವರದಿಯ ಪ್ರಸ್ತಾವನೆಯನ್ನು ಮುಂದಿನ ಸ್ಮಾರ್ಟ್ ಸಿಟಿ ಸಭೆಯಲ್ಲಿ ಸಲ್ಲಿಸಲು ನಿರ್ಧರಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್‌ ಮೈತ್ರಿ ವಿರುದ್ಧ ಮುಂದುವರೆದ ಬಂಡಾಯ; ಕಾಂಗ್ರೆಸ್‌ಗೆ ಮಾಜಿ ಶಾಸಕ ಶಫಿ ಅಹಮದ್

ಉಪ ಮೇಯರ್ ಸುನೀತಾ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಭರತ್ ಕುಮಾರ್, ರೋಹಿತ್ ಅಮೀನ್, ವರುಣ್ ಚೌಟ, ದಕ್ಷಿಣ ಕನ್ನಡ ಜಿಲ್ಲಾ ಸಿಟಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಮಾಜಿ ಅಧ್ಯಕ್ಷ ದಿಲ್‌ರಾಜ್ ಆಳ್ವ, ಸ್ಮಾರ್ಟ್ ಸಿಟಿ ಅಧಿಕಾರಿ ಅರುಣ್ ಪ್ರಭ, ಮನಪಾ ಕಾರ್ಯನಿರ್ವಾಹಕ ಎಂಜಿನಿಯರ್ ನರೇಶ್ ಶೆಣೈ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...