ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವಾಗಿರುವ ನಂದಿನಿಗೆ ಒಳಪಡುವ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಒಂದೂವರೆ ವರ್ಷದಿಂದ ಹಾಲು ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ ಎಂದು ಒಕ್ಕೂಟದ ಎಂಡಿ ವಿವೇಕ ಡಿ. ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕುಲಶೇಖರದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
“ಉಭಯ ಜಿಲ್ಲೆಗಳಲ್ಲಿನ ಹಾಲು ಹಾಗೂ ಹಾಲಿನ ಉತ್ಪಾದನೆಗಳಿಗಾಗಿ ಬೇಡಿಕೆ ಪೂರೈಸಲು ಸದ್ಯ ಹೊರ ಜಿಲ್ಲೆಗಳನ್ನು ಅವಲಂಬಿಸಲಾಗುತ್ತಿದೆ. ಈ ಅವಲಂಬನೆಯನ್ನು ತಪ್ಪಿಸಿ, ಸ್ಥಳೀಯ ಹೈನುಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಹಲವು ತಂತ್ರಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ” ಎಂದರು.
“ಮಿಶ್ರ ಕರು ತಳಿ ಯೋಜನೆ ಮೂಲಕ ಹಸು ಖರೀದಿದಾರರಿಗೆ ಸುಮಾರು ₹3,500ರಷ್ಟು ಸಹಾಯಧನ, ಒಂದು ಎಕರೆ ಪ್ರದೇಶದಲ್ಲಿ ಹಸಿರು ಹುಲ್ಲು ಬೆಳೆಯುವವರಿಗೆ ₹20,000 ಸಬ್ಸಿಡಿ, ಎರಡ್ಮೂರು ಹಸುಗಳನ್ನು ಸಾಕುವವರಿಗೆ, ಮತ್ತಷ್ಟು ಹೆಚ್ಚುವರಿ ಹಸು ಸಾಕಲು ಸಬ್ಸಿಡಿ ಜತೆಗೆ ಬೇಸಿಗೆಯಲ್ಲಿ ಪಶು ಆಹಾರವಾದ ಸೈಲೇಜ್ (ಹಸಿ ಜೋಳವನ್ನು ಹಸಿರು ಎಲೆಗಳೊಂದಿಗೆ ಕತ್ತರಿಸಿ ತಯಾರಿಸುವ ಪಶು ಆಹಾರ) ಖರೀದಿಗೆ ಒಕ್ಕೂಟ ಯೋಜನೆ ರೂಪಿಸುತ್ತಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಸ್ವಚ್ಛತೆಗೆ ಆದ್ಯತೆ ನೀಡಿ: ಎನ್‌ಜಿಟಿ ಅಧ್ಯಕ್ಷ
“ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯುವಜನರು ಹೈನುಗಾರಿಕೆಯಲ್ಲಿ ನಿರಾಸಕ್ತಿ ಹೊಂದಿರುವುದೇ, ಹಾಲಿನ ಉತ್ಪನ್ನಗಳ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ” ಎಂದರು.