ದಕ್ಷಿಣ ಕನ್ನಡ | ರಾಜ್ಯದ ಪ್ರಥಮ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ

Date:

Advertisements

ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಂಗಳೂರು ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗಾಗಿ ನಗರದ ಹೃದಯ ಭಾಗದಲ್ಲಿ ಬೃಹತ್ ಬೀದಿಬದಿ ವ್ಯಾಪಾರ ವಲಯ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದರು.

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾವಲಂಬಿ ಬದುಕಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆದ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಗರದ ಎಲ್ಲ 60 ವಾರ್ಡ್‌ಗಳಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪ್ರತಿ ವಾರ್ಡ್‌ಗಳಲ್ಲಿ ಮಹಾನಗರ ಪಾಲಿಕೆ ವ್ಯಾಪಾರ ವಲಯ ನಿರ್ಮಿಸಿಕೊಡಲಿದೆ. ಬೀದಿಬದಿ ವ್ಯಾಪಾರಿಗಳು ಸಹಕಾರ ಸಂಘ ರಚಿಸಿರುವುದು ಬೀದಿಬದಿ ವ್ಯಾಪಾರಿಗಳನ್ನು ಪ್ರಗತಿಶೀಲರನ್ನಾಗಿ ಮಾಡಲು ಅನುಕೂಲವಾಗಲಿದೆ” ಎಂದು ಶುಭ ಹಾರೈಸಿದರು.

Advertisements

ಸಂಘದ ಅಧ್ಯಕ್ಷ ಬಿ ಕೆ ಇಮ್ತಿಯಾಝ್ ಪ್ರಾಸ್ತಾವಿಕ ಮಾತುಗಳನ್ನಾಡಿ, “ಬೀದಿಬದಿ ವ್ಯಾಪಾರಿಗಳ ರಕ್ತ ಹೀರುತ್ತಿರುವ ಬಡ್ಡಿ ದಂಧೆಕೋರರಿಂದ ಮುಕ್ತಿಗೊಳಿಸುವುದಕ್ಕಾಗಿ ಮತ್ತು ಬೀದಿಬದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ಪಂಗನಾಮ ಹಾಕುತ್ತಿದ್ದ ಬ್ಲೇಡ್ ಕಂಪೆನಿಗಳಿಂದ ಬೀದಿ ವ್ಯಾಪಾರಿಗಳನ್ನು ರಕ್ಷಿಸಿ ಆರ್ಥಿಕ ಸ್ವಾವಲಂಬಿಗಳಾಗಿ ಮಾಡಿ ಅವರನ್ನು ಪ್ರಗತಿಶೀಲರನ್ನಾಗಿ ಮಾಡುವ ನಿಟ್ಟಿನಲ್ಲಿ ಸಹಕಾರ ಸಂಘವನ್ನು ರಚಿಸಲಾಗಿದೆ” ಎಂದರು.

ಪಾಲಿಕೆಯ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, “ಸಹಕಾರ ಸಂಘದ ಸದಸ್ಯರಿಗೆ ಷೇರು ಪ್ರಮಾಣ ಪತ್ರ ವಿತರಿಸಿ ಬೀದಿಬದಿ ವ್ಯಾಪಾರಿಗಳ ಸಹಕಾರ ಸಂಘ ಮಾಡಿರುವುದು ಒಂದು ಐತಿಹಾಸಿಕ ಹೆಜ್ಜೆ. ನಗರದ ಅಭಿವೃದ್ಧಿಗೆ ಬೀದಿ ವ್ಯಾಪಾರಿಗಳು ಕೈಜೋಡಿಸಬೇಕು” ಎಂದು ಕರೆ ನೀಡಿದರು.

beedi

ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್, ಭಗವತಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಬಿ ಎಂ ಮಾಧವ, ಪರಿವರ್ತನಾ ಗ್ರಾಮೀಣ ಸೊಸೈಟಿಯ ನಿರ್ದೇಶಕ ಡಿ ಕೃಷ್ಣಾನಂದ, ಚಿಂತಕಿ ಡಾ ರೀಟಾ ನೋರೋನ್ಹ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಾಮರಸ್ಯ ಮಂಗಳೂರಿನ ಅಧ್ಯಕ್ಷೆ ಮಂಜುಳಾ ನಾಯಕ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸಾಲಿಯಾನ್, ಸಂಘದ ಉಪಾಧ್ಯಕ್ಷ ಹರೀಶ್ ಪೂಜಾರಿ ಶುಭ ಹಾರೈಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದರಾಮಯ್ಯ ಐದು ವರ್ಷ ಅಧಿಕಾರ ಪೂರೈಸುತ್ತಾರೆ: ಸಚಿವ ರಾಜಣ್ಣ

ಸಿಐಟಿಯು ಅಧ್ಯಕ್ಷರೂ ನಾಗುರಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಜೆ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯುವ ವಕೀಲ ಚರಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಬಾವ ಪದರಂಗಿ, ಗ್ಲೋಬಲ್ ಮಾರ್ಕೆಟ್ ವರ್ತಕರ ಸಂಘದ ಅಧ್ಯಕ್ಷ ಮೊಹಮ್ಮದ್ ಫೈರೋಜ್, ಕಾರ್ಮಿಕ ಮುಖಂಡ ಸುಕುಮಾರ್ ತೊಕ್ಕೊಟ್ಟು, ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಕವಿರಾಜ್ ಉಡುಪಿ, ಮಾಜಿ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ, ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X