ದಕ್ಷಿಣ ಕನ್ನಡ | ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ವ್ಯವಸ್ಥೆಗೆ ಕೂಡಲೇ ಕ್ರಮವಹಿಸಿ: ಜಿಲ್ಲಾಧಿಕಾರಿ

Date:

Advertisements

ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಸಿದ ಸಫಾಯಿ ಕರ್ಮಚಾರಿ ಅಥವಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

“ಮಂಗಳೂರು ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಾದ ಪುರಸಭೆ ಹಾಗೂ ಪಟ್ಟಣ ಪಂಚಾಯತ್‍ಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಸಮವಸ್ತ್ರ ಬದಲಾಯಿಸಲು, ಊಟ ಉಪಹಾರಕ್ಕೆ ಹಾಗೂ ವಿಶ್ರಾಂತಿಗಾಗಿ ಕೊಠಡಿ ನೀಡಬೇಕು. ಮುಖ್ಯವಾಗಿ ಅವರಿಗೆ ಕುಡಿಯುವ ನೀರು ಒದಗಿಸಬೇಕು. ಇದಕ್ಕೆ ಶಾಶ್ವತವಾದ ವ್ಯವಸ್ಥೆಯನ್ನು ಮಾಡಬೇಕು. ಅದಕ್ಕೂ ಮುನ್ನ ತಾತ್ಕಾಲಿಕವಾಗಿ ಈ ವ್ಯವಸ್ಥೆ ಕಲ್ಪಿಸಬೇಕು” ಎಂದು ಸೂಚಿಸಿದರು.

Advertisements

ಪೌರ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೇ ಕೊಂಡೊಯ್ಯುವಲು ಅನುಕೂಲವಾಗುವಂತ ಉತ್ತಮ ಪೌಚ್ ಮಾದರಿಯ ನೀರಿನ ಬಾಟಲ್‌ಗಳನ್ನು ವ್ಯವಸ್ಥೆ ಮಾಡಿಕೊಡುವಂತೆ ಅವರು ತಿಳಿಸಿದರು.

“ಪೌರಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದ 371 ಹುದ್ದೆಗಳಿಗೆ 336 ಅರ್ಜಿಗಳು ಬಂದಿವೆ. ಇದರಲ್ಲಿ 207 ಜನರ ನೇಮಕವಾಗಿದೆ. ಉಳಿದವು ಅರ್ನಹತೆಯ ಆಧಾರದಲ್ಲಿ ತಿರಸ್ಕೃತಗೊಂಡಿವೆ” ಎಂದು ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಬೀದ್ ಗಡ್ಯಾಳ್ ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಮಾತನಾಡಿ, “ಯಾವ ಕಾರಣಕ್ಕೆ ಅರ್ಜಿಗಳು ತಿರಸ್ಕೃತಗೊಂಡಿವೆ ಎಂಬುದನ್ನು ಪರಿಶೀಲಿಸಿ ವರದಿ ನೀಡಬೇಕು” ಎಂದು ತಿಳಿಸಿದರು.

ದಲಿತರಿಗೆ ಮೀಸಲಿಟ್ಟಿರುವ ಭೂಮಿ ಕೆಲವೆಡೆ ಅತಿಕ್ರಮಣಕ್ಕೆ ಒಳಗಾಗುತ್ತಿದೆ ಎಂದು ದಲಿತ ಮುಖಂಡರು ಸಭೆಯ ಗಮನಕ್ಕೆ ತಂದಾಗ ಪ್ರತಿಕ್ರಿಸಿದ ಜಿಲ್ಲಾಧಿಕಾರಿಯವರು ಈ ಬಗ್ಗೆ ಕ್ರಮವಹಿಸಿ ಅಂತಹ ಭೂಮಿಗೆ ತಡೆಬೇಲಿ ಹಾಕಿ ಫಲಕ ಅಳವಡಿಸುವಂತೆ ನಿರ್ದೇಶನ ನೀಡಿದರು.

“ಪೌರಕಾರ್ಮಿಕರು ನಿವೃತ್ತಿಯಾಗುವ ದಿನದಂದೇ ಅವರನ್ನು ಬೀಳ್ಕೊಡುವ ಸಮಾರಂಭದಲ್ಲಿ ಅವರಿಗೆ ಸಲ್ಲಬೇಕಾದ ನಿವೃತ್ತಿ ಮೊತ್ತದ ಚೆಕ್ ನೀಡಬೇಕು. ನಿವೃತ್ತಿ ವೇತನಕ್ಕಾಗಿ ಅವರು ಕಚೇರಿಗೆ ಅಲೆಯುವಂತಾಗಬಾರದು. ಅದಕ್ಕಾಗಿ ಮೂರು ತಿಂಗಳ ಮುನ್ನವೇ ಅಧಿಕಾರಿಗಳು ನಿವೃತ್ತಿ ದಾಖಲಾತಿಗಳನ್ನು ಸಿದ್ಧಪಡಿಸಿ ಖಜಾನೆಗೆ ಸಲ್ಲಿಸಬೇಕು. ಜಿಲ್ಲೆಯಲ್ಲಿ ಇದು ಶೇ. 100ರಷ್ಟು ಅನುಷ್ಟಾನಗೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸಿಡಿಲಾಘಾತಕ್ಕೆ ಸುಟ್ಟು ಕರಕಲಾದ ದಿನಸಿ ಅಂಗಡಿ

ಜಿಲ್ಲಾ ಎಸ್‌ಪಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ವಿಶ್ವನಾಥ್ ಬಂಟ್ವಾಳ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X