ದಕ್ಷಿಣ ಕನ್ನಡ | 25 ಸತ್ತ ಆಡಿನ ತಲೆಗಳ ಜತೆಗೆ ವ್ಯಕ್ತಿಗಳ ಭಾವಚಿತ್ರ ಇಟ್ಟು ವಾಮಾಚಾರ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಸತ್ತ ಆಡಿನ ತಲೆಯೊಂದಿಗೆ ವ್ಯಕ್ತಿಗಳ ಭಾವ ಚಿತ್ರ ಬಳಸಿ ಕೃಷಿ ತೋಟದ ಗೇಟ್ ಮುಂಭಾಗ ವಾಮಾಚಾರ ನಡೆಸಿರುವ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿ ಬೀಳುವಂತೆ ಮಾಡಿದೆ.

- Advertisement -

ದಕ್ಷಿಣ ಕನ್ನಡದ ಬೆಳ್ತಂಗಡಿಯ ಗರ್ಡಾಡಿಯ ಬೋಳಿಯಾರ್‌ನಲ್ಲಿ ಜಾಗದ ತಕರಾರು ಇದ್ದ ಹಿನ್ನೆಲೆಯಲ್ಲಿ ವಾಮಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಕೃಷಿ ತೋಟ ಮುಂಭಾಗ ಸತ್ತ ಆಡಿನ ತಲೆಗಳು ಹಾಗೂ ವ್ಯಕ್ತಿಗಳ ಭಾವಚಿತ್ರ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆಡಿನ ತಲೆಗೆ ಹಲವು ಜನರ ಭಾವಚಿತ್ರವನ್ನು ಮೊಳೆ ಹೊಡೆದು ವಾಮಾಚಾರ ನಡೆಸಲಾಗಿದೆ. ಸಮಾಜದ ಕೆಲ ಗಣ್ಯ ವ್ಯಕ್ತಿಗಳ ಫೋಟೋ ಕೂಡ ಬಳಕೆ ಮಾಡಲಾಗಿದ್ದು, ಜಾಗದ ಮಾಲೀಕರಾದ ಗೋಪು ಕುಮಾರ್ ಹಾಗೂ ಸುಮೇಶ್ ವಿರುದ್ಧ ಮಂಗಳೂರಿನ ರಾಜೇಶ್ ಪ್ರಭು ಎಂಬಾತನೇ ವಾಮಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ರಾಜೇಶ್ ಪ್ರಭು ಹಾಗೂ ಗೋಪು ಕುಮಾರ್ ನಡುವೆ ಜಾಗದ ತಕರಾರು ಇತ್ತು. ಹಾಗಾಗಿ ಗೋಪು ಕುಮಾರ್ ಹಾಗೂ ಸಂಗಡಿಗರು ರಾಜೇಶ್ ಪ್ರಭು ವಿರುದ್ಧ ಕಾನೂನು ಹೋರಾಟಕ್ಕೆ  ಮುಂದಾಗಿದ್ದರು. ಇದೇ ಕಾರಣಕ್ಕೆ ಗೋಪು ಕುಮಾರ್ ಸಹಿತ ಬೆಂಬಲಿಸಿದವರ ವಿರುದ್ಧವು ವಾಮಾಚಾರ ಪ್ರಯೋಗ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಳೆಯಿಂದ ಪ್ರವಾಹ: ಹಾನಿಗೊಳಗಾದ ತುಪ್ಪರಿ ಹಳ್ಳ, ಬೆಣ್ಣೆ ಹಳ್ಳ ಪ್ರದೇಶಕ್ಕೆ ಸಚಿವ ಸಂತೋಷ ಲಾಡ್ ಭೇಟಿ

ಸ್ಥಳದಲ್ಲಿ 25 ಆಡಿನ ತಲೆಗಳು, ಮೊಟ್ಟೆ, ಮರದ ಪ್ರತಿಕೃತಿ, ಭಾವಚಿತ್ರ, ಹೂವು ಪತ್ತೆಯಾಗಿದೆ. ತೋಟದ ಬಳಿ ಆಗಮಿಸುವ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದು, ಕೃತ್ಯ ನಡೆಸಿದವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...