ದಕ್ಷಿಣ ಕನ್ನಡ | ಟಿಪ್ಪು‌ ಸುಲ್ತಾನ್ ಕಟೌಟ್ ತೆರವು ಮಾಡುವುದಿಲ್ಲ: ಡಿವೈಎಫ್ಐ

Date:

ಟಿಪ್ಪುಸುಲ್ತಾನ್ ಕಟೌಟ್ ತೆರವುಗೊಳಿಸುವ ಪ್ರಶ್ನೆಯೇ ಇಲ್ಲ. ಟಿಪ್ಪುಸುಲ್ತಾನ್, ರಾಣಿ ಅಬ್ಬಕ್ಕ, ಕೋಟಿ ಚೆನ್ನಯರ ಪ್ರತಿಮೆ ಸೇರಿದಂತೆ ಎಲ್ಲ ಆದರ್ಶರ, ಮಹಾತ್ಮರ ಕಟೌಟ್, ಬ್ಯಾನರ್‌ಗಳಿಗೆ ಡಿವೈಎಫ್ಐ ಕಾರ್ಯಕರ್ತರು ಕಾವಲು ನಿಂತು ಕಾಯುತ್ತಾರೆ ಎಂದು ಇಮ್ತಿಯಾಜ್ ತಿಳಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಟಿಪ್ಪುಸುಲ್ತಾನ್ ಕಟೌಟ್ ಹಾಕಿರುವುದನ್ನು ತೆರವುಗೊಳಿಸುಂತೆ ಕೋಣಾಜೆ ಪೊಲೀಸರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಕೋಣಾಜೆ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಸಮ್ಮೇಳನದ ಧ್ವಜ, ಬ್ಯಾನರ್ ಹಾಗೂ ಟಿಪ್ಪುಸುಲ್ತಾನ್ ಕಟೌಟ್ ಅಳವಡಿಸಲಾಗಿತ್ತು. ಸಮ್ಮೇಳನದ ಅಂಗವಾಗಿ ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಕಟೌಟ್, ಫ್ಲೆಕ್ಸ್ ಹಾಕಲಾಗಿದೆ. ಹರೇಕಳ ಕಚೇರಿ ಬಳಿ ಕಾರ್ಯಕರ್ತರು ಟಿಪ್ಪುಸುಲ್ತಾನ್ ಕಟೌಟ್ ಅಳವಡಿಸಿದ್ದರು. ಅನುಮತಿ ಇಲ್ಲದೆ ಅಳವಡಿಸಿರುವುದರಿಂದ ಟಿಪ್ಪು ಕಟೌಟ್ ತೆರವುಗೊಳಿಸುವಂತೆ ನಿನ್ನೆ ಕೋಣಾಜೆ ಪೊಲೀಸ್ ಠಾಣಾಧಿಕಾರಿ ನೋಟಿಸ್ ನೀಡಿದ್ದಾರೆ” ಎಂದು ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಬಿ ಕೆ ಇಮ್ತಿಯಾಜ್ ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಮಂಗಳೂರು ಪ್ರಕರಣ | ಬಿಜೆಪಿ ಶಾಸಕರ ಮೇಲಿನ ಎಫ್‌ಐಆರ್ ಖಂಡಿಸಿ ರಸ್ತೆ ತಡೆ: ಸಂಘಪರಿವಾರದ ಕಾರ್ಯಕರ್ತರ ಬಂಧನ

“ಟಿಪ್ಪುಸುಲ್ತಾನ್ ಕಟೌಟ್, ಬ್ಯಾನರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲು ಸರ್ಕಾರದ ನಿಷೇಧ ಇದೆಯೇ?, ಯಾವ ಸರ್ಕಾರ ನಿಷೇಧ ಹೇರಿದ್ದು?. ಕರ್ನಾಟಕದಲ್ಲಿ ಸರ್ಕಾರ ಬದಲಾಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಿಜೆಪಿ ಸರ್ಕಾರವೇ ಇದೆಯೇ?‌ ಕಾಂಗ್ರೆಸ್ ಸರ್ಕಾರದ ಕಾಲದಲ್ಲೂ ಪೊಲೀಸರು ಸಂಘಿ ಮನೋಭಾವನೆಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಇಮ್ತಿಯಾಜ್ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...