ದಕ್ಷಿಣ ಕನ್ನಡ | ಬಿಜೆಪಿ ವಿಜಯೋತ್ಸವದ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣ; ಮತ್ತೆ 7 ಮಂದಿ ಬಂಧನ

Date:

ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಧಾನಿಯಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ವೇಳೆ ಇಬ್ಬರಿಗೆ ಚೂರಿ ಇರಿದ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಈ ಹಿಂದೆ 6 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ,  ಮತ್ತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಪ್ರದೇಶದಲ್ಲಿ ಜೂನ್ 9ರಂದು ಬಿಜೆಪಿ ವಿಜಯೋತ್ಸವ ನಡೆದಿತ್ತು. ಈ ವೇಳೆ, ಘೋಷಣೆ ವಿಚಾರಕ್ಕೆ ಗಲಾಟೆಯಯಾಗಿದ್ದು, ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿಯಲಾಗಿತ್ತು. ಬಿಜೆಪಿ ಕಾರ್ಯಕರ್ತ ಹರೀಶ್ ಮತ್ತು ನಂದಕುಮಾರ್ ಚೂರಿ ಇರಿತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿದ್ದ ಕೊಣಾಜೆ ಠಾಣೆಯ ಪೊಲೀಸರು ಜೂನ್ 10ರಂದು ಆರು ಮಂದಿಯನ್ನು ಬಂಧಿಸಿದ್ದರು. ಇದೀಗ, ಮತ್ತೆ 7 ಮಂದಿಯನ್ನು ಬಂಧಿಸಿದ್ದಾರೆ. ಬಂಧತರನ್ನು ಇಮ್ರಾನ್, ಇರ್ಷಾದ್, ಶರ್ವಾನ್, ತಾಜುದ್ದೀನ್, ಮುಬಾರಕ್, ಅಶ್ರಫ್, ತಲ್ಲತ್ ಎಂದು ಗುರುತಿಸಲಾಗಿದೆ. ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪತ್ನಿ ಕೊಲೆಗೆ ಯತ್ನಿಸಿದ ಪತಿಗೆ 2 ವರ್ಷ ಜೈಲು, ದಂಡ

ಪತ್ನಿಗೆ ಕೌಟುಂಬಿಕ ಹಿಂಸೆ ನೀಡಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಪತಿಗೆ...

ಉಡುಪಿ | ಅಪಘಾತ ಪ್ರಕರಣಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ: ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ

ಅಪಘಾತ ಪ್ರಕರಣಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಪ್ರತಿ ಮೂರು ನಿಮಿಷಕ್ಕೆ ಒಬ್ಬರು...

ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ)...

ಧಾರವಾಡ | ಸಂಶೋಧನೆಗೆ ಜನಸಂಖ್ಯಾ ಅಧ್ಯಯನದಲ್ಲಿ ವಿಪುಲ ಅವಕಾಶಗಳಿವೆ -ಡಾ. ಎಂ. ಎನ್.ಮೇಗೇರಿ

"ಜನಸಂಖ್ಯಾ ಅಧ್ಯಯನದಲ್ಲಿ ಸಂಶೋಧನೆಗೆ ಸಾಕಷ್ಟು ಅವಕಾಶಗಳಿವೆ. ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಮಹತ್ವ...