ದಕ್ಷಿಣ ಕನ್ನಡ | ಮದ್ಯದ ಅಮಲಿನಲ್ಲಿ ಪತ್ನಿಯ ಕೊಲೆ; ಆ್ಯಸಿಡ್ ಸೇವಿಸಿ ತಾನೂ ಆತ್ಮಹತ್ಯೆ

Date:

Advertisements

ಮದ್ಯದ ಅಮಲಿನಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಗುಂಡು ಹಾರಿಸಿದ್ದು, ಆ್ಯಸಿಡ್ ಸೇವಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ರಾಮಚಂದ್ರ ಗೌಡ ಮತ್ತು ಅವರ ಪತ್ನಿ ವಿನೋದ ಕುಮಾರಿ ಎಂದು ಗುರುತಿಸಲಾಗಿದೆ.

ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಮನೆಯಲ್ಲಿದ್ದ ಪ್ರಶಾಂತ್ ಎಸ್‌ ಆರ್, “ತನ್ನ ತಂದೆ ರಾಮಚಂದ್ರ ಗೌಡ ಅವರಿಗೆ ಅತಿಯಾದ ಮದ್ಯಪಾನದ ಚಟವಿತ್ತು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisements

“ಶುಕ್ರವಾರ ಅತಿಯಾದ ಮದ್ಯ ಸೇವಿಸಿದ ನಂತರ ಮನೆಗೆ ಮರಳಿದ ತಂದೆ, ಅಜ್ಜ-ಅಜ್ಜಿ ಮತ್ತು ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದರು. 11:30ರ ಸುಮಾರಿಗೆ, ಹೊಸದಾಗಿ ನಿರ್ಮಿಸುತ್ತಿರುವ ಮನೆಯ ಅಡುಗೆ ಕೋಣೆಯಲ್ಲಿ ನನ್ನ ತಾಯಿಯೊಂದಿಗೆ ವಾಗ್ವಾದಕ್ಕಿಳಿದರು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಶೀಘ್ರದಲ್ಲಿ ನಿರ್ಧಾರ: ಶರಣಪ್ರಕಾಶ ಪಾಟೀಲ್

“ಜಗಳ ಬಿಡಿಸಲು ಬಂದ ಮಗ ಪ್ರಶಾಂತ್​​​ನಿಗೆ ತನ್ನ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಲು ರಾಮಚಂದ್ರ ಯತ್ನಿಸಿದ್ದಾನೆ. ಮಗನಿಗೆ ಶೂಟ್​​ ಮಾಡುವಾಗ ತಾಯಿ ವಿನೋದಾ ಅಡ್ಡ ಬಂದಿದ್ದಾರೆ. ಈ ವೇಳೆ ಗುಂಡು ತಗುಲಿ ವಿನೋದಾ ಕುಮಾರಿ ಮೃತಪಟ್ಟಿದ್ದಾರೆ. ಬಳಿಕ ಆ್ಯಸಿಡ್ ಸೇವಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಬಿಎನ್ಎಸ್ ಕಾಯ್ದೆಯ ಸೆಕ್ಷನ್ 103 ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ಮತ್ತು 27ರ ಅಡಿಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದಕ್ಷಿಣ ಕನ್ನಡ ಎಸ್‌ಪಿ ಯತೀಶ್ ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X