ದ.ಕ | ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ: ಶಾಸಕ ವೇದವ್ಯಾಸ್ ಕಾಮತ್

Date:

Advertisements

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೇ ರಾಜ್ಯದ ಕರವೇ ಸೇವಕರ ಮೇಲಿನ ದುರುದ್ದೇಶ ಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿ ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು‌ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಸರ್ಕಾರದ ಯಾವುದೇ ಒತ್ತಡ ಇಲ್ಲ” ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಹೇಳಿಕೆ ನೀಡಿದರೆ, ಸ್ವತಃ ಗೃಹ ಸಚಿವರೇ ʼಹಳೆಯ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ ನೀಡಿದ್ದೆ, ಅದರಂತೆ ಈ ಕ್ರಮ ಕೈಗೊಳ್ಳಲಾಗಿದೆʼ ಎಂದು ಹೇಳಿಕೆ ನೀಡಿದ್ದಾರೆ. ಇಲ್ಲಿ ಯಾರ ಮಾತು ನಿಜ? ಏನೇ ಇದ್ದರೂ ಕಾಂಗ್ರೆಸ್ ಸರ್ಕಾರ ಈ ಮೂಲಕ ಹಿಂದೂ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದಂತೂ ಸ್ಪಷ್ಟ. ಅದರಲ್ಲಿ ಯಾವುದೇ ಸಂಶಯವೂ ಇಲ್ಲ” ಎಂದರು.

“ರಾಮಭಕ್ತರ ಮೇಲೆ ಇಷ್ಟೊಂದು ಹಗೆ ಸಾಧಿಸುವ ಕಾಂಗ್ರೆಸ್‌ನವರು ರಾಮಭಕ್ತರ ಮತವೇ ನಮಗೆ ಬೇಡವೆಂದು ಹೇಳಲಿ ನೋಡೋಣ” ಎಂದು ಸವಾಲು ಹಾಕಿದರು.

Advertisements

ಈ ಸುದ್ದಿ ಓದಿದ್ದೀರಾ? ಉಡುಪಿ | ಸಾಮಾಜಿಕ ನ್ಯಾಯವಿಲ್ಲದೆ ನಿಜವಾದ ಅಭಿವೃದ್ಧಿ ಅಸಾಧ್ಯ: ಡಾ. ಎಕ್ಕಾರು 

“ಇಡೀ ದೇಶದ ಜನತೆ ರಾಮ ಮಂದಿರದ ಸಂಭ್ರಮದಲ್ಲಿರುವಾಗ ನಮ್ಮ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ರಾಮಭಕ್ತರ ಮೇಲೆ ಆಕ್ರೋಶದಲ್ಲಿದೆ. ಹಾಗಾಗಿಯೇ ಕರವೇ ಸೇವಕರು ಹಾಗೂ ಹಿಂದೂಪರ ಕಾರ್ಯಕರ್ತರಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲು ಮುಂದಾಗಿದೆ. 31 ವರ್ಷಗಳ ಹಿಂದಿನ ಪ್ರಕರಣಗಳಿಗೆ ಮರುಜೀವ ನೀಡಿ ಹಿಂದೂ ಕಾರ್ಯಕರ್ತರನ್ನು ಬೆದರಿಸುವ ತಂತ್ರ ಇದಾಗಿದೆ. ಈಗಾಗಲೇ ಜಿಲ್ಲೆಯಲ್ಲೂ ಹಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದ್ದು, ಇನ್ನಷ್ಟು ಹೋರಾಟಗಾರರನ್ನು ಗಡಿಪಾರು ಮಾಡಲು ಕಾಂಗ್ರೆಸ್ ಸಿ‌ದ್ಧತೆ ನಡೆಸಿರುವುದು ಹಿಂದೂಗಳನ್ನು ಧಮನಿಸುವ ನೀತಿಗೆ ಸಾಕ್ಷಿಯಾಗಿದೆ. ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ” ಎಂದು ಶಾಸಕರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X