ಮಂಗಳೂರು | ಹೋಳಿ ಡಿಜೆ ಪಾರ್ಟಿಗೆ ದಾಳಿ ನಡೆಸಿ ದಾಂಧಲೆಗೈದ ಬಜರಂಗದಳದ ಕಾರ್ಯಕರ್ತರು

Date:

  • ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ದಾಳಿ
  • ಬ್ಯಾನರ್ ಹರಿದು ಹಾಕಿ ವಸ್ತುಗಳನ್ನ ಪುಡಿಗೈದು ದಾಂಧಲೆ ನಡೆಸಿದ ಬಜರಂಗದಳ

ಮಂಗಳೂರು ನಗರದ ಮರೋಳಿ ಎಂಬಲ್ಲಿ ‘ರಂಗ್ ದ ಬರ್ಸಾ’ ಹೆಸರಿನಲ್ಲಿ ಆಯೋಜಿಸಿದ್ದ ಹೋಳಿ ಆಚರಣೆ ಪಾರ್ಟಿಗೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ, ದಾಂಧಲೆಗೈದಿರುವ ಘಟನೆ ರವಿವಾರ ನಡೆದಿದೆ.

ಹೋಳಿ ಆಚರಣೆಯ ಭಾಗವಾಗಿ ರಂಗ್‌ ದೇ ಬರ್ಸಾ ಹೆಸರಿನ ಕಾರ್ಯಕ್ರಮ ಆಯೋಜಿಸಿದ್ದು, ಈ ವೇಳೆ ಡಿಜೆ ಪಾರ್ಟಿ ಜೊತೆಗೆ ಯುವಕ ಯುವತಿಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು. ಡಿಜೆ ಪಾರ್ಟಿಯಲ್ಲಿ ಯುವಕ ಯುವತಿಯರು ಅಶ್ಲೀಲವಾಗಿ ವರ್ತಿಸುತ್ತಿದ್ದಾರೆ ಹಾಗೂ ಅನ್ಯಕೋಮಿನ ಯುವಕರೂ ಕೂಡ ಇದ್ದಾರೆಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಅಲ್ಲದೆ, ಸ್ಥಳದಲ್ಲಿದ್ದ ಹೋಲಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನ ಪುಡಿಗೈದು ದಾಂಧಲೆ ಮಾಡಿದ್ದಾರೆ. ಈ ವೇಳೆ ಬಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ, ಆರು ಮಂದಿ ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಮಾಹಿತಿ ನೀಡಿರುವ ಮಂಗಳೂರು ಕಮಿಷನರ್ ಕುಲದೀಪ್‌ ಕುಮಾರ್‌, ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಒಟ್ಟು 6 ಮಂದಿ ಹೋಗಿ ಅಡ್ಡಿಪಡಿಸಿದ್ದರು. ಕೆಲವು ಬ್ಯಾನರ್, ಪೋಸ್ಟರ್‌ಗಳಿಗೆ ಹಾನಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಿದ್ದೇವೆ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಗ್ರಾಮ ಪಂಚಾಯತಿ ಮುಖ್ಯ ಪುಸ್ತಕ ಬರಹಗಾರರ ಪ್ರತಿಭಟನೆ

ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ...