ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಂದ ಪೊಲೀಸ್ ಠಾಣಾ ಭೇಟಿ

Date:

ಬಂಟ್ವಾಳ ಸಮೀಪದ ಕಲ್ಲಡ್ಕದ ಗೋಳ್ತಮಜಲು ಎಂಬಲ್ಲಿರುವ, ಬಾಲಕಿಯರ ವಿದ್ಯಾಸಂಸ್ಥೆ ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಂದ ಇತ್ತೀಚೆಗೆ ಪೊಲೀಸ್ ಠಾಣಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ, ಇಲ್ಲಿನ, ಪ್ರಥಮ ಪಿಯುಸಿ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿನಿಯರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದರು.

- Advertisement -

ಈ ಕುರಿತು ಪ್ರಸ್ತುತ ಯುವಜನತೆಯಲ್ಲಿ ಪೊಲೀಸ್ ಠಾಣೆಯ ಕಾರ್ಯ ಚಟುವಟಿಕೆಗಳ ಬಗೆಗಿನ ಅರಿವು ಮೂಡಿಸುವ ಜತೆಗೆ ಪೊಲೀಸರ ಬಗ್ಗೆ ಇರುವ ಭಯ ಮತ್ತು ಗೊಂದಲದ ಭಾವನೆಯನ್ನು ಹೋಗಲಾಡಿಸುವ ಕುರಿತು ಮಾಹಿತಿ ಹಂಚಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ನಿಟ್ಟಿನಲ್ಲಿ, ಬಂಟ್ವಾಳ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ಧನ್ಯಶ್ರೀಯವರು ವಿದ್ಯಾರ್ಥಿನಿಯರಿಗೆ ಪೊಲೀಸ್ ಠಾಣೆಯ ಕುರಿತು ತಿಳುವಳಿಕೆ ನೀಡಿದ್ದಲ್ಲದೆ, “ವಿದ್ಯಾರ್ಥಿನಿಯರು ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಯುಪಿಎಸ್‌ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ಪೊಲೀಸ್ ಇಲಾಖೆ ಸೇರಿದಂತೆ, ಸರ್ಕಾರಿ ಉದ್ಯೋಗ‌ ಗಿಟ್ಟಿಸಿಕೊಳ್ಳುವಲ್ಲಿ ಗಮನಹರಿಸಬೇಕು. ಅದಕ್ಕೆ ಪೂರಕವಾಗಿ ವಿದ್ಯಾರ್ಥಿನಿಯರು ನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು 1

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಿ ಕೃಷ್ಣಯ್ಯಶೆಟ್ಟಿ ಜ್ಯುವೆಲ್ಲರ್ಸ್ನಿಂದ ವಜ್ರ ಮತ್ತು ಚಿನ್ನಾಭರಣ ಪ್ರದರ್ಶನ

ಠಾಣೆಯ ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್‌ ವಾಕಿ-ಟಾಕಿಯನ್ನು ಬಳಸುವ ವಿಧಾನದ ಬಗ್ಗೆ ಹಾಗೂ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ಕುರಿತು ಮಾಹಿತಿ ನೀಡಿದರು. ಹಾಗೆಯೇ ವಿದ್ಯಾರ್ಥಿನಿಯರು ತಮಗೆ ಇರುವ ಗೊಂದಲ-ಸಂದೇಹಗಳ ಬಗ್ಗೆ ಪೊಲೀಸರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...