ಮಂಗಳೂರು | ಬ್ಯಾರಿ ಭಾಷೆಯನ್ನು ಸಮುದಾಯಕ್ಕೆ ಸೀಮಿತಗೊಳಿಸಬಾರದು: ರಮಾನಾಥ ರೈ

Date:

ಭಾಷೆಯು ಮನುಷ್ಯರ ನಡುವಿನ ಸಂಪರ್ಕದ ಪ್ರಮುಖ ಮಾಧ್ಯಮವಾಗಿದ್ದು, ಬ್ಯಾರಿ ಭಾಷೆ ಸುಂದರವಾದ ಭಾಷೆಯಾಗಿದೆ. ಅದನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

- Advertisement -

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಹಾಗೂ ಬ್ಯಾರಿ ಸಾಹಿತ್ಯ ಪರಿಷತ್‌ ಬಂಟ್ವಾಳ ಸಹಯೋಗದಲ್ಲಿ ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ನಡೆದ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಪುತ್ತೂರು ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಸಮಾರೋಪ ಭಾಷಣದಲ್ಲಿ ಮಾತನಾಡಿ, ಆಂಗ್ಲ ಭಾಷೆಯ ಮೇಲಿನ ಅತಿಯಾದ ವ್ಯಾಮೋಹದಿಂದ ಮನೆಗಳಲ್ಲಿ ಮಾತೃಭಾಷೆಯ ಬಳಕೆ ಕಡಿಮೆಯಾಗುತ್ತಿದೆ. ಪ್ರತಿಷ್ಠೆಯ ಹೆಸರಿನಲ್ಲಿ ಆಂಗ್ಲ ಭಾಷೆಯ ಬಳಕೆ ಹೆಚ್ಚಿದಂತೆ ಬ್ಯಾರಿ ಪದಗಳು ನಶಿಸಿಹೋಗುವ ಅಪಾಯವಿದೆ ಎಂದರು. ಯಾವ ಮಟ್ಟಿಗೆ ವಿದ್ಯಾಭ್ಯಾಸ ಅಥವಾ ಸಾಧನೆ ಮಾಡಿದರೂ ಮನೆಯಲ್ಲಿ ಮಾತೃಭಾಷೆಯನ್ನು ಬೆಳೆಸಬೇಕು ಎಂದು ಕರೆ ನೀಡಿದರು. ಭಾಷೆಯನ್ನು ಉಳಿಸಲು ಸಾಮಾನ್ಯ ಜನರ ದೈನಂದಿನ ಬಳಕೆಯೇ ಮುಖ್ಯ ಎಂದು ಅಭಿಪ್ರಾಯಪಟ್ಟ ಅವರು, ಕೂಲಿ ಕಾರ್ಮಿಕರು, ಮೀನು ಮಾರಾಟಗಾರರು, ಗುಜರಿ ಹಾಗೂ ಸಣ್ಣ ವ್ಯಾಪಾರಿಗಳೇ ಬ್ಯಾರಿ ಭಾಷೆಯನ್ನು ಜೀವಂತವಾಗಿಡಬಲ್ಲರು ಎಂದರು.

1010865384

ಕಾರ್ಯಕ್ರಮದಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಹಾಜಿ ಜಿ.ಎ. ಬಾವ, ಪೂನಾದ ಡಾ.ಡಿ.ವೈ. ಪಾಟೀಲ್ ವಿಶ್ವವಿದ್ಯಾಲಯದ ಕುಲ ಸಚಿವ ಡಾ. ಬಿ.ಎಂ. ಬೀರಾನ್ ಮೊಹಿದಿನ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಜಿ ಎ. ಉಸ್ಮಾನ್ ಕರೋಪಾಡಿ, ಹಿರಿಯ ಪತ್ರಕರ್ತ ಇಬ್ರಾಹಿಂ ಅಡ್ಕಸ್ಥಳ, ಜನಪ್ರಿಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಅಬ್ದುಲ್ ಬಶೀರ್ ವಿ.ಕೆ. ಹಾಗೂ ಎ.ಜೆ. ಆಸ್ಪತ್ರೆಯ ಹಿರಿಯ ವೈದ್ಯೆ ಡಾ. ಹಸೀನಾ ಪೊನ್ನೋಡಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ವಹಿಸಿದ್ದರು.

ಈ ಸಂದರ್ಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಹಿರಿಯ ಸಾಹಿತಿ, ಕವಿ ಹಾಗೂ ಗಾಯಕ ರಹೀಂ ಬಿ.ಸಿ.ರೋಡ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಸತ್ತಾರ್ ಗೂಡಿನಬಳಿ ನಿರ್ದೇಶನದ “ತೆರು ತಪ್ಪಿರ್” ಬ್ಯಾರಿ ನಾಟಕ ಪ್ರದರ್ಶನವೂ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...