ಮಂಗಳೂರು | ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಬಶೀರ್ ಅಹ್ಮದ್ ಕಿನ್ಯಾ ಆಯ್ಕೆ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ದೇರಳಕಟ್ಟೆಯ ಮೇಲ್ತೆನೆ ಸಂಘಟನೆಯ ಸಹಯೋಗದಲ್ಲಿ ಮೇ 5ರಂದು ಉಳ್ಳಾಲ ತಾಲೂಕಿನ ಮುಡಿಪು ಬಳಿಯ ಹೂಹಾಕುವ ಕಲ್ಲು ಎಸ್.ಕೆ. ಮಲ್ಟಿಪರ್ಪಸ್ ಹಾಲ್‌ನಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಕವಿ ಹಾಗೂ ಗಾಯಕರಾದ ಬಶೀರ್ ಅಹ್ಮದ್ ಕಿನ್ಯಾ ಆಯ್ಕೆಯಾಗಿದ್ದಾರೆ.

- Advertisement -

ಸುಮಾರು 28 ವರ್ಷಗಳ ಕಾಲ ಬ್ಯಾರಿ ಗಾಯಕನಾಗಿ ಸೇವೆ ಸಲ್ಲಿಸಿರುವ ಅವರು ಬಹುಭಾಷಾ ಕವಿ ಹಾಗೂ ಪತ್ರಕರ್ತರಾಗಿ ಕೂಡ ಗುರುತಿಸಿಕೊಂಡಿದ್ದಾರೆ. ಬಶೀರ್ ಕಿನ್ಯರೊ ಪಾಟ್, ಕೊತ್ತಿಪ್ಪೂ, ನಲ್ಮಾಲೆ ಮತ್ತು ಮೀಲಾದ್ ಪಾಟ್ ಸೇರಿದಂತೆ ಹಲವಾರು ಬ್ಯಾರಿ ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ “ನೂರು ಕವಿಮಾರೊ ಕಾವ್ಯ ಸಂಕಲನ” ಕೃತಿಗೆ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಅವರ ಮೊದಲ ಧ್ವನಿಸುರುಳಿ ‘ಮಸ್ಕತ್ತ್‌ಗೊರು ಕಲ್ಲಾಸ್’ ಕೆಲವೇ ದಿನಗಳಲ್ಲಿ ಸಂಪೂರ್ಣವಾಗಿ ಮಾರಾಟವಾಗಿ ದಾಖಲೆ ನಿರ್ಮಿಸಿತು. ನಂತರ ಅಲಿಕಾತ್, ಉರುಮಾಲ್, ಬಂಗಾರ್, ಮಹರ್, ಮರ್ಹಬ, ಸುಲ್ತಾನ ಮುಂತಾದ ಧ್ವನಿಸುರುಳಿಗಳೂ ಜನಪ್ರಿಯತೆ ಪಡೆದವು. 2002ರಲ್ಲಿ ಬಿಡುಗಡೆಯಾದ ಬ್ಯಾರಿ ಬೈಲಾ ಧ್ವನಿಸುರುಳಿ ಸುಮಾರು 22,000 ಪ್ರತಿಗಳು ಮಾರಾಟಗೊಂಡು ವಿಶೇಷ ಸಾಧನೆ ಮಾಡಿದೆ.

ಬ್ಯಾರಿ ಮತ್ತು ಕನ್ನಡ ಭಾಷೆಗಳಲ್ಲಿ ಧಫ್ ಹಾಡುಗಳನ್ನು ರಚಿಸಿರುವ ಅವರು 150ಕ್ಕೂ ಹೆಚ್ಚು ಬ್ಯಾರಿ, ಕನ್ನಡ ಹಾಗೂ ಮಲಯಾಳಂ ಧ್ವನಿಸುರುಳಿಗಳಿಗೆ ಸಾಹಿತ್ಯ ಬರೆದು ಹಾಡಿದ್ದಾರೆ. ರಾಜ್ಯ, ದೇಶ ಹಾಗೂ ವಿದೇಶಗಳಲ್ಲಿ ನಡೆದ ಕವಿಗೋಷ್ಠಿಗಳಲ್ಲೂ ಸಕ್ರಿಯವಾಗಿ ಭಾಗವಹಿಸಿದ್ದಾರೆ.

ಅವರ ಸಾಹಿತ್ಯ ಹಾಗೂ ಸಂಗೀತ ಸೇವೆಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಿದೆ. 2013ರಲ್ಲಿ ದುಬೈನಲ್ಲಿ ನಡೆದ ಮೀಲಾದ್ ಮೀಟ್‌ನಲ್ಲಿ ಅವರನ್ನು ಬ್ಯಾರಿ ಕವಿಯಾಗಿ ಗೌರವಿಸಲಾಯಿತು. ಅದೇ ವರ್ಷ ಮಂಗಳೂರಿನ ಬ್ಯಾರಿ ಕಲಾರಂಗವು “ಬ್ಯಾರಿ ಕಲಾಶ್ರೀ” ಪ್ರಶಸ್ತಿ ನೀಡಿ ಸನ್ಮಾನಿಸಿತು. 2015ರಲ್ಲಿ ಅಬುಧಾಬಿಯ ವಿವಿಧ ಬ್ಯಾರಿ ಸಂಘಟನೆಗಳೂ ಅವರನ್ನು ಅಭಿನಂದಿಸಿವೆ.

ಬ್ಯಾರಿ ಬರಹಗಾರರು ಮತ್ತು ಕಲಾವಿದರ ಒಕ್ಕೂಟ ಹಾಗೂ ಮೇಲ್ತೆನೆ ಸಂಘಟನೆಯ ಸ್ಥಾಪಕರಲ್ಲಿ ಒಬ್ಬರಾಗಿರುವ ಅವರು ಸಂಘಟನಾ ಕ್ಷೇತ್ರದಲ್ಲೂ ಪ್ರಮುಖ ಪಾತ್ರವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...