ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಲಾಲ್ ಎಂಬಾತ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪವಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಈತಬ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಂತ್ರಸ್ತ ಅಪ್ರಾಪ್ತೆ(14) ಕಳೆದ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ತೆರಳುತ್ತಿದ್ದು, ಈ ವೇಳೆ ಆತ ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಬಾಲಕಿ ಪ್ರತಿರೋಧಿಸಿದಾಗ ಜೀವ ಬೆದರಿಕೆ ಒಡ್ಡಿದ್ದರಿಂದ, ಭಯಗೊಂಡ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.
ಆಗಸ್ಟ್ 13ರಂದು ಸಂಜೆ ಆಕೆ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆಗೆ ಬಂದ ಆರೋಪಿಯು ಆಕೆಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿ, ಆಗಸ್ಟ್ 15ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅಶ್ವಿನಿ ಛಲವಾದಿ ಅತ್ಯಾಚಾರ–ಕೊಲೆ ಪ್ರಕರಣ: SDPIಯಿಂದ ತೀವ್ರ ಖಂಡನೆ
ಆರೋಪಿಯನ್ನು ಆಗಸ್ಟ್ 15ರಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಮಂಗಳೂರು ಜೈಲಿಗೆ ಅಟ್ಟಲಾಗಿದೆ.
ಈತ ರಿಕ್ಷಾದಲ್ಲಿ ಮಕ್ಕಳನ್ನು ಸ್ಕೂಲಿಗೆ ಡ್ರಾಪ್-ಪಿಕಪ್ ಮಾಡುತ್ತಿದ್ದ. 4 ಮಕ್ಕಳ ತಂದೆಯಾಗಿರುವ ಈತನ ಈ ಕೃತ್ಯಕ್ಕೆ ಪತ್ನಿ ಮಕ್ಕಳು ಮತ್ತು ಕುಟುಂಬಸ್ಥರು ನೊಂದು ಹೋಗಿದ್ದಾರೆ.





