ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್‌ಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Date:

ಸಮಾಜ ಸೇವೆ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಜನಪರ ಕ್ಷೇತ್ರಗಳಲ್ಲಿ ನಿರಂತರವಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ (ರಿ), ಮಂಗಳೂರು (BSWT) ಸಂಸ್ಥೆಯು 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.

- Advertisement -

ಕಳೆದ ಹಲವು ವರ್ಷಗಳಿಂದ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯು ಪ್ರತಿವರ್ಷ ಸುಮಾರು 200 ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಮೂಲಕ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೆರವು, ಆರೋಗ್ಯ ಸೇವೆ ಹಾಗೂ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದ ಅಗತ್ಯವಿರುವ ವರ್ಗಗಳಿಗೆ ಆಸರೆಯಾಗಿ ನಿಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...
WhatsApp Image 2026 11 01 at 10.11.50 PM

ಮಹಿಳೆಯರು ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕೆಂಬ ಉದ್ದೇಶದಿಂದ ಉಚಿತ ಹೊಲಿಗೆ ತರಬೇತಿ ನೀಡುತ್ತಿದ್ದು, ಅವರ ಕೌಶಲ್ಯಾಭಿವೃದ್ಧಿ ಮತ್ತು ಆರ್ಥಿಕ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. ವಿಶೇಷವಾಗಿ ವಿಶೇಷ ಚೇತನರನ್ನು ಗುರುತಿಸಿ, ಅವರಿಗೆ ಅಗತ್ಯ ತರಬೇತಿ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಅವರಲ್ಲಿರುವ ಸಾಮರ್ಥ್ಯವನ್ನು ಬೆಳೆಸಲು ಶ್ರಮಿಸುತ್ತಿದೆ.

“ಸ್ವಾವಲಂಬಿ ಬದುಕಿಗೆ ಸ್ವಾಭಿಮಾನದ ಉಡುಗೊರೆ” ಎಂಬ ಆಶಯದೊಂದಿಗೆ ಸಂಸ್ಥೆಯು ನಡೆಸುತ್ತಿರುವ ಸೇವಾ ಕಾರ್ಯಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಪೂರಕವಾಗಿವೆ.

ಸಂಸ್ಥೆಯ ಈ ನಿರಂತರ ಜನಪರ ಕಾಳಜಿ, ಸಾಮಾಜಿಕ ಬದ್ಧತೆ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂಸ್ಥೆಯ ಸೇವಾ ಪಯಣಕ್ಕೆ ಸಂದ ಗೌರವವಾಗಿದೆ. ಈ ಪ್ರಶಸ್ತಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಪ್ರೇರಣೆ ನೀಡಲಿದೆ.

ಈ ಸಾಧನೆಗೆ ಸಹಕರಿಸಿದ ಹಿತೈಷಿಗಳು, ಪದಾಧಿಕಾರಿಗಳು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ಪ್ರತ್ಯಕ್ಷ ಮತ್ತು ವಪರೋಕ್ಷವಾಗಿ ಬೆಂಬಲಿಸಿದ ಎಲ್ಲಾ ಪ್ರೀತಿಪಾತ್ರರಿಗೆ ಸಂಸ್ಥೆಯು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತದೆ ಎಂದು ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಎಂ.ಎ. ಮಾಸ್ಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು...

ರಾಯಚೂರು | ಕೌಟುಂಬಿಕ ಕಲಹ: ದಂಪತಿ ಸೇರಿ ಇಬ್ಬರು ಮಕ್ಕಳು ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ, ಹೆಂಡತಿ ಇಬ್ಬರು ಮಕ್ಕಳು ಸೇರಿ ನಾಲ್ವರು...

‘ಪ್ರಜಾಸೇವೆ’ ಆಂದೋಲನ ಜನಪರ ಕಾರ್ಯಕ್ರಮ- ಸಿ. ಪುಟ್ಟರಂಗಶೆಟ್ಟಿ

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ...

ಶಿವಮೊಗ್ಗ | ಡಾ. ಕಾಂತರಾಜ್ ಕೆ.ಪಿ ನೂತನ ಡಿಎಚ್ಓ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ...