ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಮಗುಚಿ ಬಿದ್ದ ಬೈಕಿಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಉಪ್ಪಿನಂಗಡಿ ಸಮೀಪದ ಕೂಟೇಲು ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ದ್ವಿಪಥದ ಏಕಮುಖ ರಸ್ತೆಯಿಂದ ತಕ್ಷಣಕ್ಕೆ ಮತ್ತೊಂದು ಪಥಕ್ಕೆ ಬಂದಿದ್ದು ಈ ಸಂದರ್ಭ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಮಗುಚಿ ಬಿದ್ದಿದ್ದು, ಕೂಡಲೇ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣಕ್ಕೆ ಬೆಂಕಿ ಆರಿಸುವ ವ್ಯವಸ್ಥೆ ಲಭ್ಯವಾಗದೇ ಇರುವುದರಿಂದ ದ್ವಿಚಜ್ರ ವಾಹನವು ಭಾಗಶಃ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ





