ಮಂಗಳೂರು | ಮಾನವೀಯ ಗುಣಗಳಿಂದಾಗಿ ಸೌಹಾರ್ದ ಭಾರತದ ನಿರ್ಮಾಣ ಸಾಧ್ಯ : ರೋಯ್ ಕ್ಯಾಸ್ಟಲಿನೋ

Date:

ಜಾತ್ಯಾತೀತ ತತ್ವಗಳ ಅಡಿಪಾಯದಿಂದ ಭವ್ಯ ಭಾರತದ ನಿರ್ಮಾಣವಾಗಿದ್ದರೂ ಇಂದು ಅದೇ ತತ್ವಗಳಿಗೆ ಕೊಡಲಿಪೆಟ್ಟು ನೀಡುವ ಶಕ್ತಿಗಳು ಮೆರೆಯುತ್ತಿದ್ದು,ದೇಶದ ಸಂವಿಧಾನದ ಆಶಯಗಳನ್ನು ಬುಡಮೇಲುಗೊಳಿಸುವಂತಹ ದುಷ್ಕ್ರತ್ಯಗಳು ನಡೆಯುತ್ತಿದೆ.ಮತ್ತೆ ಸೌಹಾರ್ದ ಭಾರತದ ನಿರ್ಮಾಣವಾಗಬೇಕಾದರೆ ಎಳೆಯ ಪ್ರಾಯದ ಮಕ್ಕಳಲ್ಲೇ ಮಾನವೀಯ ಗುಣಗಳನ್ನು ಬೆಳೆಸುವ ಮೂಲಕ ಸೌಹಾರ್ದತೆಯನ್ನು ಕಾಪಾಡಬೇಕಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ರವರು ಅಭಿಪ್ರಾಯ ಪಟ್ಟರು.

- Advertisement -

ಅವರು ಕಳೆದ 6 ದಿನಗಳಿಂದ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ನಲ್ಲಿ ಜರುಗಿದ ಚಿಣ್ಣರ ಕಲರವ – 2026 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಸಮಾರೋಪಗೊಳಿಸುತ್ತಾ, ಈ ಮಾತುಗಳನ್ನು ಹೇಳಿದರು.ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಜಂಟಿ ಆಶ್ರಯದಲ್ಲಿ ಸಂತ ಅಲೋಶಿಯಸ್ ಹೈಸ್ಕೂಲ್ ನ ಸಹಕಾರದೊಂದಿಗೆ ಈ ಕಾರ್ಯಾಗಾರವು ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಮುಖ್ಯ ಅತಿಥಿಯಾದ ಚಿಣ್ಣರ ಚಾವಡಿಯ ಜಿಲ್ಲಾ ಸಂಚಾಲಕರೂ,ಯುವ ವಕೀಲರಾದ ಮನೋಜ್ ವಾಮಂಜೂರುರವರು ಮಾತನಾಡಿ, ವಿವಿಧ ಸ್ವರೂಪದ ಭಿನ್ನತೆಗಳುಳ್ಳ ಮಕ್ಕಳೆಲ್ಲರೂ ಒಂದಾಗಿ ಆಟವಾಡಿದರೆ ಅಲ್ಲಿ ಮೂಡುವ ಏಕತೆ ದೇಶಕ್ಕೆ ನೀಡುವ ಐಕ್ಯ ಸಂದೇಶವಾಗಿದೆ. ಇಂದಿನ ಶಿಕ್ಷಣ ನೀತಿಯು ಕೇವಲ ಅಂಕಗಳನ್ನು ಕೇಂದ್ರೀಕರಿಸುತ್ತದೆಯೇ ಹೊರತು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ಕೊರತೆಯು ಸಾಂಸ್ಕೃತಿಕ ರಂಗಕ್ಕೂ ಹಾಗೂ ಸಾಹಿತ್ಯ ಲೋಕಕ್ಕೂ ಅಗಾಧ ಪರಿಣಾಮವನ್ನು ಬೀರಿದೆ ಎಂದು ಆತಂಕ ವ್ಯಕ್ತಪಡಿಸಿದರು.

1010899760

ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಗೌರವ ಸಲಹೆಗಾರರಾದ ಫ್ಲೇವಿ ಕ್ರಾಸ್ತಾ ಅತ್ತಾವರ, ಶಿಬಿರದ ಶಿಕ್ಷಕರಾದ ರಾಜ್ ಮುಖೇಶ್ ಸುಳ್ಯರವರು ಮಾತನಾಡಿ, ಇಂತಹ ಶಿಬಿರಗಳು ಮಕ್ಕಳನ್ನು ಸಮಾಜಮುಖಿಯನ್ನಾಗಿಸುವಲ್ಲಿ ಇನ್ನಷ್ಟು ಪ್ರಖರವಾಗಿ ಮೂಡಿಬರಲಿ ಎಂದು ಆಶಯ ವ್ಯಕ್ತಪಡಿಸಿದರು. ಶಿಬಿರದ ಬಗ್ಗೆ ಶಿಬಿರಾರ್ಥಿಗಳು ಹಾಗೂ ಪೋಷಕರು ಮೆಚ್ಚುಗೆಯ ಮಾತುಗಳನ್ನಾಡಿದರು.ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಇತ್ತೀಚೆಗೆ ನಡೆದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಚಿಣ್ಣರ ಚಾವಡಿ ತಂಡದ ಸಂಚಾಲಕರಾದ ಸುನಿಲ್ ಕುಮಾರ್ ಬಜಾಲ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಚಿಣ್ಣರ ಚಾವಡಿ ತಂಡದ ನಿಕಟಪೂರ್ವ ಅಧ್ಯಕ್ಷರಾದ ಪೂರ್ವಿ ಶೆಟ್ಟಿಯವರು ಮಾತನಾಡಿ,ಚಿಣ್ಣರ ಕಲರವದಂತಹ ಶಿಬಿರಗಳು ಮಕ್ಕಳ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ಮನಸಿಗೆ ತುಂಬಾ ಮುದ ನೀಡುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಚಿಣ್ಣರ ಚಾವಡಿ ತಂಡದ ಸಹಸಂಚಾಲಕರಾದ ಅಸುಂತ ಡಿಸೋಜ, ಶಿಬಿರದ ನಿರ್ದೇಶಕರಾದ ಪ್ರವೀಣ್ ವಿಸ್ಮಯ ಬಜಾಲ್, ಚಿಣ್ಣರ ಚಾವಡಿಯ ಕಾರ್ಯದರ್ಶಿ ಸಂಗಮೇಶ್ ರವರು ಉಪಸ್ಥಿತರಿದ್ದರು. ಚಿಣ್ಣರ ಚಾವಡಿ ತಂಡದ ನೂತನ ಅಧ್ಯಕ್ಷರಾದ ಆಡ್ಲಿನ್ ಸಿಕ್ವೇರಾರವರು ಪ್ರಾರಂಭದಲ್ಲಿ ಸ್ವಾಗತಿಸಿ, ಬಳಿಕ ಇಡೀ ಕಾರ್ಯಕ್ರಮವನ್ನು ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...