ಬಡವರ ಹಸಿವಿನ ಅರಿವಿಲ್ಲದ ಜನರಿಂದ ಬೀದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಸಂವಿಧಾನ ವಿರೋಧಿ ಕೃತ್ಯ : ಮುನೀರ್ ಕಾಟಿಪಳ್ಳ ತೀವ್ರ ಆಕ್ರೋಶ

Date:

ಬಡವರ ಬದುಕಿನ ಬವಣೆಯ ಅರಿಯದೆ ಬಡ ಬೀದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ ಎಂದು ಸಿಪಿಐಮ್ ದ.ಕ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಅವರು ಇಂದು ಬೀದಿಬದಿ ವ್ಯಾಪಾರಿಗಳ ಮೇಲೆ ಮುಂದುವರಿದ ಧಾಳಿ ಖಂಡಿಸಿ, ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶಕ್ಕೆ ಒತ್ತಾಯಿಸಿ, ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ CITU ನೇತೃತ್ವದಲ್ಲಿ ಇಂದು ಆರಂಭಗೊಂಡಿರುವ ಹಗಲು ರಾತ್ರಿ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ರಾಜ್ಯದ ಕೆಲವು ಸಚಿವರು ಹಾಗೂ ಬಡವರ ಹಸಿವಿನ ಆಳ ಅಗಲ ಗೊತ್ತಿಲ್ಲದ ಅಧಿಕಾರಿಗಳು ಯುರೋಪ್ ರಾಷ್ಟ್ರಗಳ ಮಾದರಿಯ ರಸ್ತೆ, ಪಾದಚಾರಿ ಮಾರ್ಗಗಳನ್ನು ನಿರ್ಮಿಸುವ ಬಗ್ಗೆ ಮಾತನಾಡುತ್ತಾರೆ ಆದರೆ ಯುರೋಪ್ ಮಾದರಿಯಲ್ಲಿ ಇಲ್ಲಿನ ಜನರಿಗೆ ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಶೇಕಡಾ 100 ರಷ್ಟು ನೀಡಲಾಗಿದೆ ಇಲ್ಲಿ ಅಂತಹ ಯಾವುದೇ ಪ್ರಯತ್ನವನ್ನು ಮಾಡದೆ ಬಡವರ ಮೇಲೆ ಸವಾರಿ ಮಾಡುವುದನ್ನು ನಿಲ್ಲಿಸಬೇಕು, ಸಂಡೆ ಬಜಾರ್ ವ್ಯಾಪಾರದಲ್ಲಿ ಬಡ ಗ್ರಾಹಕರ ಹಿತಾಸಕ್ತಿಯನ್ನು ಪಾಲಿಕೆ ಗೌರವಿಸಬೇಕು. ಸಂಡೆ ಬಜಾರ್ ವ್ಯಾಪಾರಿಗಳ ಮೇಲೆ ಮತ್ತೆ ದಬ್ಬಾಳಿಕೆ ಮುಂದುವರಿದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಮುನೀರ್ ಕಾಟಿಪಳ್ಳರವರು ಎಚ್ಚರಿಕೆ ನೀಡಿದರು

ಸಿಐಟಿಯು ಜಿಲ್ಲಾ ಮುಖಂಡರಾದ ಜೆ. ಬಾಲಕೃಷ್ಣ ಶೆಟ್ಟಿ,ಜಯಂತಿ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು, ಸುನಿಲ್ ಕುಮಾರ್ ಬಜಾಲ್, ಬಿ.ಕೆ ಇಮ್ತಿಯಾಜ್, ರಮೇಶ್ ಉಳ್ಳಾಲ್, ರವಿಚಂದ್ರ ಕೊಂಚಾಡಿ, ಜಯಂತ್ ನಾಯ್ಕ್, ಯೋಗೀಶ್ ಜಪ್ಪಿನಮೊಗರು, ಪದ್ಮಾವತಿ ಶೆಟ್ಟಿ ಯವರು ಹೋರಾಟವನ್ನು ಬೆಂಬಲಿಸಿ ಮಾತನಾಡಿದರು.

1011639618

ಧರಣಿ ಸತ್ಯಾಗ್ರಹದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಮುಖರಾದ ಮುಜಾಫರ್ ಅಹ್ಮದ್, ಸಂತೋಷ್ ಆರ್. ಎಸ್, ವಿಜಯ್ ಜೈನ್, ಶಿವಪ್ಪ, ರಿಯಾಜ್ ಮದಕ, ನೌಶಾದ್ ಕಣ್ಣೂರ್, ರಫೀಕ್ ಪಾಂಡೇಶ್ವರ, ಸಿಕಂದರ್ ಬೇಗ್, ಅಶ್ರಫ್, ಪಕೀರ ನಾಯ್ಕ್, ಕಾಜ ಮೊಯ್ದಿನ್, ಶಿವಾನಂದ್, ಪ್ರದೀಪ್, ನಾಗರಾಜ್, ಜ್ಯೋತಿ ಬಾಯಿ, ಲಕ್ಕಮ್ಮ, ಮಂಜುಳಾ, ಹನುಮಂತ ನಾಯ್ಕ, ಮಹೇಶ್ ನಾಯ್ಕ್, ಖಾದರ್ ವಾಮಂಜೂರ್, ಸಿದ್ದವ್ವ, ಸಯ್ಯದ್ ಫಾರುಕ್, ಮಾಜಿ ವಿದ್ಯಾರ್ಥಿ ನಾಯಕ ಹಿದಾಯತುಲ್ಲ ಅಡ್ಡೂರು, ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಪ್ರಮೋದಿನಿ, ವಿಲಾಸಿನಿ, ಯೋಗಿತಾ ಸುವರ್ಣ, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...