ರಾಜ್ಯ ಬಜೆಟ್‌ ಮೇಲೆ ಕರಾವಳಿಗರ ಕಣ್ಣು; ಈ ಬಾರಿಯ ನಿರೀಕ್ಷೆಗಳೇನು?

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮಾರ್ಚ್ 6ರಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಇದು ಅವರ 17ನೇ ಬಜೆಟ್‌ ಆಗಿದ್ದು, ಈ ಬಾರಿ ಕರಾವಳಿ ಭಾಗದ ಜನರ ನಿರೀಕ್ಷೆಗಳು ಗರಿಷ್ಠ ಮಟ್ಟಕ್ಕೇರಿವೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ 320 ಕಿ.ಮೀ ಉದ್ದದ ಕಡಲತೀರ ಪ್ರದೇಶವು ಆರೋಗ್ಯ, ಪ್ರವಾಸೋದ್ಯಮ, ಕೃಷಿ, ಮೀನುಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ವಿಶೇಷ ಗಮನಕ್ಕೆ ಅರ್ಹವಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯ.

- Advertisement -
1009866610

ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮೊದಲ ಪ್ರಾಶಸ್ತ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹಲವು ವರ್ಷಗಳ ಬೇಡಿಕೆ. ನಿವೇಶನ ಗುರುತಿಸಲಾಗಿದ್ದರೂ ಕಾಮಗಾರಿ ಆರಂಭವಾಗಿಲ್ಲ. ‌ಕರಾವಳಿ ಜಿಲ್ಲೆಯಲ್ಲೇ 10ಕ್ಕೂ ಹೆಚ್ಚು ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು 20ಕ್ಕೂ ಅಧಿಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಿದ್ದರೂ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಸೌಲಭ್ಯಗಳ ಕೊರತೆ ಇದೆ. ಈ ಬಜೆಟ್‌ನಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯ ಹೊಸ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲು ಅನುದಾನ ನೀಡಬೇಕು. ತಾಲೂಕು ಆಸ್ಪತ್ರೆಗಳ ಮೇಲ್ದರ್ಜೆಗೇರಿಕೆ, ಕ್ಯಾನ್ಸರ್ ಮತ್ತು ಹೃದ್ರೋಗ ವಿಶೇಷ ಸರ್ಕಾರಿ ಆಸ್ಪತ್ರೆಗಳ ಸ್ಥಾಪನೆಗೂ ಒತ್ತಾಯ ಕೇಳಿಬರುತ್ತಿದೆ.

1009866604

ಕಡಲತೀರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ

ಗೋವಾ ಮಾದರಿಯಲ್ಲಿ ಬೀಚ್ ಅಭಿವೃದ್ಧಿ ಮಾಡುವ ಭರವಸೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಆದರೆ ಮಾಸ್ಟರ್ ಪ್ಲಾನ್ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಕಡಲ್ಕೊರೆತ ನಿಯಂತ್ರಣ, ಎತ್ತರದ ರಸ್ತೆ ನಿರ್ಮಾಣ, ಮೂಲ ಸೌಕರ್ಯಗಳನ್ನು ಒದಗಿಸುವುದು ಅವಶ್ಯಕವಾಗಿದೆ.

ಈಗಾಗಲೇ ಕರಾವಳಿ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಕಡಲ್ಕೊರೆತ ನಿಯಂತ್ರಣಕ್ಕೆ ಎತ್ತರದ ರಸ್ತೆ ನಿರ್ಮಾಣ ಅಗತ್ಯವಿದೆ ಎಂದಿದ್ದಾರೆ. ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ʼವಾಟರ್ ಮೆಟ್ರೊʼ ಜಾರಿಗೆ ಒತ್ತಾಯಿಸಿದ್ದಾರೆ. ಧಾರ್ಮಿಕ ಪ್ರವಾಸೋದ್ಯಮ, ಸರ್ಕ್ಯೂಟ್ ಟೂರಿಸಂ ಯೋಜನೆಗಳು ಕಾಗದದಲ್ಲೇ ಉಳಿಯಬಾರದು ಎಂಬುದು ಜನರ ಆಶಯ.

1009866608

ಕೃಷಿ, ನೀರಾವರಿ ಮತ್ತು ಕೈಗಾರಿಕೆ

ಬ್ರಹ್ಮಾವರ ಕೃಷಿ ಅಧ್ಯಯನ ಕೇಂದ್ರದ ಮೂಲಸೌಕರ್ಯ ಅಭಿವೃದ್ಧಿ, ಕೃಷಿ ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿ ಮೇಲ್ದರ್ಜೆಗೇರಿಸುವುದು ಅವಶ್ಯಕವಾಗಿದೆ. ಯಡ್ತಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಸತೀಶ ಕುಮಾರ್ ಶೆಟ್ಟಿ ವಾರಾಹಿ ನೀರಾವರಿ ಯೋಜನೆಯ ಎಡದಂಡೆ ಕಾಮಗಾರಿ ಪೂರ್ಣಗೊಳಿಸಲು ಬಜೆಟ್‌ನಲ್ಲಿ ಅನುದಾನ ನೀಡಬೇಕೆಂದು ಮನವಿ ಮಾಡಿದ್ದಾರೆ.

ಸ್ಥಗಿತಗೊಂಡ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದರಿಂದ ರೈತರಿಗೆ ನೆರವಾಗಲಿದೆ. ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಒತ್ತಾಯಿಸಿದ್ದಾರೆ.

1009866624 1

ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ

ಕರಾವಳಿಯ 13 ಮೀನುಗಾರಿಕಾ ಬಂದರುಗಳಲ್ಲಿ ಹೂಳೆತ್ತಲು ₹70 ಕೋಟಿ ಯೋಜನೆ ರೂಪಿಸಿರುವುದಾಗಿ ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದ್ದಾರೆ. ಡೀಸೆಲ್ ಸಬ್ಸಿಡಿ ಹೆಚ್ಚಳ, ಮಳೆಗಾಲ ಭತ್ಯೆ, ಲೈಫ್ ಜಾಕೆಟ್ ಸಹಾಯಧನ ಮೀನುಗಾರರ ಪ್ರಮುಖ ಬೇಡಿಕೆಗಳಾಗಿವೆ.

ಉಡುಪಿ ಶಾಸಕ ಯಶಪಾಲ ಸುವರ್ಣ ಮೀನುಗಾರಿಕೆ ಮತ್ತು ಬಂದರು ಇಲಾಖೆ ವಿಲೀನಗೊಳಿಸಿ ಎಂಜಿನಿಯರಿಂಗ್ ವಿಭಾಗ ಪ್ರಾರಂಭಿಸುವಂತೆ ಸಲಹೆ ನೀಡಿದ್ದಾರೆ.

1009866620

ಮೂಲಸೌಕರ್ಯ ಮತ್ತು ಸಾರಿಗೆ

ಬೈಂದೂರು, ಕುಂದಾಪುರ, ಹೆಬ್ರಿ, ಕಾರ್ಕಳ ಭಾಗಗಳಲ್ಲಿ ಮಳೆ ಹಾನಿ ಪರಿಹಾರಕ್ಕೆ ವಿಶೇಷ ಅನುದಾನ ಅಗತ್ಯವಿದೆ. ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಹೆಚ್ಚಳ, ಬ್ರಹ್ಮಾವರ-ಬಾರ್ಕೂರು-ಸಿದ್ದಾಪುರ ರಸ್ತೆ ರಾಜ್ಯ ಹೆದ್ದಾರಿ ಕಾಮಗಾರಿ ವೇಗಗೊಳಿಸುವುದು ಪ್ರಾಥಮಿಕತೆ ಪಡೆಯಬೇಕಿದೆ.

ಕುಂದಾಪುರ ಶಾಸಕ ಕಿರಣ್ ಕೊಡ್ಲಿ ಸಿಆರ್‌ಜೆಡ್ ಕಚೇರಿಯನ್ನು ಮಂಗಳೂರು ಅಥವಾ ಉಡುಪಿಗೆ ಸ್ಥಳಾಂತರಿಸಲು ಸಲಹೆ ನೀಡಿದ್ದಾರೆ.

1009860994

ಸಾಮಾಜಿಕ ನ್ಯಾಯ ಮತ್ತು ಭೂ ಹಕ್ಕು

ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು, ಭೂ ಅನುದಾನ ನಿಯಮ 5ರ ಪ್ರಕಾರ ಸರ್ಕಾರಿ ಜಮೀನಿನ 50% ದಲಿತರಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ. ಅಕ್ರಮ-ಸಕ್ರಮ ಹೆಸರಿನಲ್ಲಿ ಜಮೀನು ಬಲಾಡ್ಯರ ಪಾಲಾಗುತ್ತಿರುವುದನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಆರೋಗ್ಯ, ಪ್ರವಾಸೋದ್ಯಮ, ಕೃಷಿ, ಮೀನುಗಾರಿಕೆ, ಮೂಲಸೌಕರ್ಯ ಮತ್ತು ಸಾಮಾಜಿಕ ನ್ಯಾಯ ಎಲ್ಲವನ್ನೂ ಒಳಗೊಂಡ ಸಮಗ್ರ ಪ್ಯಾಕೇಜ್ ಅಗತ್ಯವಾಗಿದೆ. ವಿಶೇಷವಾಗಿ ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಘೋಷಣೆ ಈ ಬಜೆಟ್‌ನ ಪ್ರಮುಖ ಆಕರ್ಷಣೆಯಾಗಬಹುದೇ ಎಂಬ ಕುತೂಹಲ ಎಲ್ಲರಲ್ಲೂ ಇದೆ.

ಈ ಬಾರಿ ಬಜೆಟ್‌ನಲ್ಲಿ ಘೋಷಣೆ ಮಾತ್ರವಲ್ಲ, ಕಾರ್ಯಗತಗೊಳ್ಳುವ ಸ್ಪಷ್ಟ ಯೋಜನೆಗಳು ಪ್ರಕಟವಾದರೆ ಕರಾವಳಿಯ ಜನರ ನಿರೀಕ್ಷೆಗೆ ನ್ಯಾಯ ದೊರೆಯಲಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ ಸಿಗದ ಎಬಿವಿಪಿ ಪಾತ್ರದ ಪ್ರಶ್ನೆಗಳು

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ತುರ್ತು ಕ್ರಮ

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ...