ಮಂಗಳೂರು | ಮೋದಿ ಸರಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ : ಸುಕುಮಾರ್ ತೊಕ್ಕೋಟು

Date:

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ದುಡಿಯುವ ವರ್ಗದಲ್ಲ. ಇದರಿಂದಾಗಿ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೊಳಗಾಗಿದೆ ಹಾಗೂ ಬದುಕು ವಿನಾಶದತ್ತ ಸಾಗುತ್ತಿದೆ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟುರವರು ಅಭಿಪ್ರಾಯಪಟ್ಟರು.

- Advertisement -

ಅವರು ಕಳೆದ ಎರಡು ದಿನಗಳಿಂದ ಕುತ್ತಾರ್ ನಲ್ಲಿರುವ ಮುನ್ನೂರು ಯುವಕ ಮಂಡಲದಲ್ಲಿ ಜರುಗಿದ CPIM ಉಳ್ಳಾಲ ವಲಯ ಮಟ್ಟದ ಅಧ್ಯಯನ ಶಿಬಿರವನ್ನು ಸಮಾರೋಪಗೊಳಿಸುತ್ತಾ ಈ ಮಾತುಗಳನ್ನು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ವೇದಿಕೆಯಲ್ಲಿ ಉಪಸ್ಥಿತರಿದ್ದ CPIM ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳರವರು ಮಾತನಾಡಿ,ದ.ಕ.ಜಿಲ್ಲೆಯ ರಾಜಕಾರಣ ಉಳ್ಳವರ ಪರವಾಗಿ ವ್ಯವಸ್ಥಿತವಾಗಿ ಮುಂದುವರಿಯುತ್ತಿದ್ದು, ಅಭಿವೃದ್ಧಿ ಹಾಗೂ ಸೌಹಾರ್ದತೆಯ ಪ್ರಶ್ನೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯವರು ಕೊಡುಕೊಳ್ಳುವಿಕೆಯಲ್ಲಿಯೇ ಮಗ್ನರಾಗಿದ್ದಾರೆ.ಆದರೆ ಇಲ್ಲಿನ ಸಾಮಾನ್ಯ ಜನತೆಯ ಶಿಕ್ಷಣ ಉದ್ಯೋಗ, ಆರೋಗ್ಯದ ಸೇರಿದಂತೆ ಬದುಕಿನ ಪ್ರಶ್ನೆಯಲ್ಲಿ ಮಾತನಾಡಲು ಇವರಿಬ್ಬರಿಗೂ ಆಸಕ್ತಿ ಇಲ್ಲವಾಗಿದೆ.ಕಮ್ಯುನಿಸ್ಟ್ ಪಕ್ಷ ಮಾತ್ರವೇ ಅತ್ಯಂತ ಹಿಂದುಳಿದ,ಶೋಷಿತರ,ಬಡವರ ಪರವಾಗಿ ಗಟ್ಟಿ ಧ್ವನಿಯನ್ನು ಮೊಳಗಿಸುತ್ತದೆ.ಆರೋಗ್ಯ ಕ್ಷೇತ್ರವನ್ನೇ ಮಾರಲು ಹೊರಟ ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ಧ ಹಾಗೂ ಆರೋಗ್ಯ ಸಚಿವರ ದುರಂಹಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಸಮರಶೀಲ ಹೋರಾಟವನ್ನು ರೂಪಿಸಲು CPIM ಸಜ್ಜಾಗಿದೆ ಎಂದು ಹೇಳಿದರು

ಸಭೆಯ ಅಧ್ಯಕ್ಷತೆಯನ್ನು CPIM ಹಿರಿಯ ನಾಯಕರಾದ ಸುಂದರ ಕುಂಪಲರವರು ವಹಿಸಿದ್ದರು. ವೇದಿಕೆಯಲ್ಲಿ CPIM ಹಿರಿಯ ನಾಯಕರಾದ ಕೃಷ್ಣಪ್ಪ ಸಾಲ್ಯಾನ್, ಪದ್ಮಾವತಿ ಶೆಟ್ಟಿ,CPIM ಜಿಲ್ಲಾ ಸಮಿತಿ ಸದಸ್ಯರಾದ ಶೇಖರ್ ಕುಂದರ್, ಜಯಂತ ನಾಯಕ್, ರಫೀಕ್ ಹರೇಕಳ, CPIM ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು...