ಗುರುಪುರ ಹೋಬಳಿಯಲ್ಲಿ ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಒತ್ತಾಯಿಸಿ CPIM ಪಾದಯಾತ್ರೆ

Date:

ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಜಿಲ್ಲೆಯಲ್ಲಿ‌ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು CPIM ಗುರುಪುರ ವಲಯ ಸಮಿತಿ ನೇತೃತ್ವದಲ್ಲಿ ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದವರಗೆ ಹಕ್ಕೊತ್ತಾಯ ಪಾದಯಾತ್ರೆ ನಡೆಯಿತು.

- Advertisement -

CPIM ದಕ್ಷಿಣ ಕನ್ನಡ‌ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಪಾದಯಾತ್ರೆಯ ಸಮಾರೋಪ ಭಾಷಣ ಮಾಡಿದರು. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಕ್ಷೇತ್ರವನ್ನು ಪೂರ್ಣವಾಗಿ ಕಡೆಗಣಿಸಲಾಗಿದೆ. ಬಹುತೇಕ ಹೋಬಳಿ ಕೇಂದ್ರಗಳಲ್ಲಿ ಸಮುದಾಯ ಆಸ್ಪತ್ರೆಗಳನ್ನು ತೆರೆಯಲು ಇಲ್ಲಿಯವರಗೆ ಸಾಧ್ಯ ಆಗಿಲ್ಲ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ವೈದ್ಯರು, ದಾದಿಯರು ಸಹಿತ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿವೆ. ಹೊಸದಾಗಿ ಸ್ಥಾಪನೆಗೊಂಡಿರುವ ನಾಲಕ್ಕು ತಾಲೂಕುಗಳಲ್ಲಿ ಇಲ್ಲಿಯವರಗೆ ತಾಲೂಕು ಆಸ್ಪತ್ರೆಗಳ ನಿರ್ಮಾಣ ಆಗಿಲ್ಲ ಎಂಬುದು ಗ್ರಾಮೀಣ ಭಾಗಗಳ ಆರೋಗ್ಯ ಕ್ಷೇತ್ರದ ಗಂಭೀರ ಸ್ಥಿತಿಯನ್ನು‌ ಪ್ರತಿಬಿಂಬಿಸುತ್ತದೆ ಎಂದು ಅವರು ಆರೋಪಿಸಿದರು. ಜಿಲ್ಲೆಯ ದೊಡ್ಡ ಹೋಬಳಿ ಕೇಂದ್ರ ಆಗಿರುವ ಗುರುಪರದಲ್ಲಿ ಎಲ್ಲಾ ಅರ್ಹತೆಗಳ ಹೊರತಾಗಿಯು ಸಮುದಾಯ ಆಸ್ಪತ್ರೆ ಮಂಜೂರು ಮಾಡಲು ಮೀನಾಮೇಷ ಎಣಿಸುತ್ತಿರುವುದು ವಿಷಾದನೀಯ, ಈ ಕುರಿತು ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಮುನೀರ್ ಕಾಟಿಪಳ್ಳ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

CPIM ಜಿಲ್ಲಾ ಸಮಿತಿ ಸದಸ್ಯ ಮನೋಜ್ ವಾಮಂಜೂರು ಮಾತಾಡುತ್ತಾ, ಜಿಲ್ಲೆಯ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಪಿ.ಪಿ.ಪಿ ಮಾದರಿ ಪಿಡುಗಿನಂತೆ ಕಾಡುತ್ತಿದೆ. ಜಿಲ್ಲಾಸ್ಪತ್ರೆ ವೆನ್ಲಾಕ್ ಸಹಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವರಗೆ ಖಾಸಗಿ ಮೆಡಿಕಲ್ ಕಾಲೇಜುಗಳ ವಶವಾಗುತ್ತಿವೆ, ಸರಕಾರ ಪಿ.ಪಿ.ಪಿ ಮಾದರಿ ಕೈಬಿಟ್ಟು ಜಿಲ್ಲೆಯ ಸಾರ್ವಜನಿಕ ಆರೋಗ್ಯ ಕ್ಷೇತ್ರವನ್ನು ಬಲಪಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ದಕ್ಷಿಣ ಕನ್ನಡ | ಫೆ.12ರಂದು ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ

ಪಾದಯಾತ್ರೆಗೆ ಕುಪ್ಪೆಪದವು ಆರೋಗ್ಯ ಕೇಂದ್ರದ ಬಳಿ ಸಿಪಿಐಎಂ ಗುರುಪುರ ವಲಯ ಕಾರ್ಯದರ್ಶಿ ಸದಾಶಿವ ದಾಸ್ ಚಾಲನೆ ನೀಡಿದರು. ಜಿಲ್ಲಾ ಸಮಿತಿ ಸದಸ್ಯೆ ವಸಂತಿ ಕುಪ್ಪೆಪದವು ಕಾರ್ಯಕ್ರಮ ನಿರ್ವಹಿಸಿದರು. ಬಾಬು ಸಾಲ್ಯಾನ್ ತಿರುವೈಲು, ಆನಂದ ಪೂಜಾರಿ ಇರುವೈಲು, ಲೋಲಾಕ್ಷಿ, ಕುಸುಮ ಕುಪ್ಪೆಪದವು, ಭವ್ಯ ಮುಚ್ಚೂರು, ಹೊನ್ನಯ್ಯ ಅಮೀನ್ ವಾಮಂಜೂರು, ನೋಣಯ್ಯ ಗೌಡ ಮಿಜಾರು, ಗೋಪಾಲ ಮೂಲ್ಯ ಮಳಲಿ, ಭವಾನಿ ಕುಪ್ಪೆಪದವು ಮತ್ತಿತರರು ಪಾದಯಾತ್ರೆಯ ನೇತೃತ್ವ ವಹಿಸಿದ್ದರು.

ಗ್ರಾಮೀಣ ಭಾಗದಲ್ಲಿ ಸಾರ್ವಜನಿಕ ಆರೋಗ್ಯ ಕ್ಷೇತ್ರ ಬಲಪಡಿಸಲು ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...