ಮಂಗಳೂರು | ಖಾಸಗಿ ಒಪ್ಪಂದಕ್ಕೆ ವಿರೋಧ; ಆರೋಗ್ಯಾಧಿಕಾರಿಗಳ ಹೇಳಿಕೆ ಹಾಸ್ಯಾಸ್ಪದ : ಸಿಪಿಐಎಂಎಲ್ ಲಿಬರೇಶನ್

Date:

ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕು ಆಸ್ಪತ್ರೆಗಳು, ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿರುವ ಸರಕಾರದ ಕ್ರಮವನ್ನು ವಿರೋಧಿಸಿ ಸಿಪಿಐಎಂಎಲ್ ಲಿಬರೇಶನ್ ವತಿಯಿಂದ ಈಗಾಗಲೇ ಪ್ರತಿಭಟನೆ ನಡೆಸಲಾಗಿದೆ.

- Advertisement -

ಈ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿಗಳು ಕೆಲವು ಸಂಘಟನೆಗಳು ನಕರಾತ್ಮಕ ವಿಷಯಗಳನ್ನು ಹರಡುತ್ತಿವೆ, ಇದು ಸತ್ಯಾಂಶಕ್ಕೆ ದೂರವಾಗಿದೆ ಎಂದು ನೀಡಿದ ಹೇಳಿಕೆಯನ್ನು ಸಿಪಿಐಎಂಎಲ್ ಲಿಬರೇಶನ್ ತೀವ್ರವಾಗಿ ಖಂಡಿಸಿದೆ. ಆರೋಗ್ಯಾಧಿಕಾರಿಗಳ ಈ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಪಕ್ಷದ ಜಿಲ್ಲಾ ಸಮಿತಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಜನತೆಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆಗಳು ಲಭ್ಯವಾಗುತ್ತಿವೆ ಎಂಬ ಆರೋಗ್ಯಾಧಿಕಾರಿಗಳ ಹೇಳಿಕೆಯನ್ನು ತಳ್ಳಿಹಾಕಿರುವ ಸಂಘಟನೆ, ವಾಸ್ತವವಾಗಿ ಯಾವುದೇ ಚಿಕಿತ್ಸೆ ಉಚಿತವಾಗಿ ದೊರೆಯುತ್ತಿಲ್ಲ; ಆಯುಷ್ಮಾನ್ ಯೋಜನೆಯಡಿ ಅದರ ವೆಚ್ಚವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದೆ.

ಜಿಲ್ಲೆಯ ಜನರಿಂದ ಈ ಖಾಸಗೀ ಪರ ನೀತಿಗೆ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳು ಇಂತಹ ಬಾಲಿಷ ಹೇಳಿಕೆ ನೀಡಿರುವುದು ಸ್ಪಷ್ಟವಾಗುತ್ತದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ತಜ್ಞ ವೈದ್ಯರ ಸೇವೆ ಒದಗಿಸುವುದು ಸರಕಾರದ ಕರ್ತವ್ಯವಾಗಿದ್ದು, ಈ ಹೊಣೆಗಾರಿಕೆಯಿಂದ ಸರಕಾರ ಹಿಂದೆ ಸರಿದಿರುವುದು ಆರೋಗ್ಯಾಧಿಕಾರಿಗಳ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ ಎಂದು ಟೀಕಿಸಲಾಗಿದೆ.

ಈ ಒಪ್ಪಂದವು ಒಟ್ಟು ಆರೋಗ್ಯ ಕ್ಷೇತ್ರವನ್ನೇ ಖಾಸಗೀಕರಣಗೊಳಿಸುವ ಸರಕಾರದ ಹುನ್ನಾರವಾಗಿದ್ದು, ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಸಂಬಂಧಿತ ಒಪ್ಪಂದವನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಈ ಬಗ್ಗೆ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...