ಭಾರತ ದೇಶದಲ್ಲಿ ರಾಮರಾಜ್ಯವಾಗಲು ಹಾಗೂ ಹಿಂದೂ ಸಮಾಜವನ್ನು ಉಳಿಸಲು ದೇಶಾದ್ಯಂತ ಸಂಪೂರ್ಣ ಮದ್ಯ ನಿಷೇಧ ಕಾನೂನು ಕಟ್ಟು ನಿಟ್ಟಾಗಿ ಜಾರಿಯಾಗಬೇಕು. ಸರ್ಕಾರವು ಮದ್ಯ ಮಾರಾಟಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಹಿಂದೂ ಸಮಾಜದಲ್ಲಿ ಮದ್ಯಪಾನ ಮಾಡುವವರ ಸಂಖ್ಯೆ ಮಿತಿ ಮೀರಿದೆ ಎಂದು ಜೆಡಿಯು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಪ್ರೀತ್ ಕುಮಾರ್ ಪೂಜಾರಿ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, “ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಜನರು ಕುಡಿತದ ದಾಸರಾಗುತ್ತಿದ್ದಾರೆ. ಮದ್ಯಪಾನದ ದರವನ್ನು ಸರ್ಕಾರವು ವಿಪರೀತ ಏರಿಕೆ ಮಾಡಿದ್ದು, ಜನಸಾಮಾನ್ಯರು ಕಷ್ಟಪಟ್ಟು ದುಡಿದ ಹಣವನ್ನು ಮದ್ಯಪಾನ ಮಾಡಲು ಬಳಸುತ್ತಿದ್ದಾರೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ದೇಶಾದ್ಯಂತ ಸಂಪೂರ್ಣ ಮದ್ಯ ನಿಷೇಧ ಕಾನೂನು ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಬಳಕೆ: ರೇಣುಕಾಚಾರ್ಯ ಆರೋಪ
“ಮದ್ಯ ಸೇವನೆ ಹಾಗೂ ಮಾರಾಟದಲ್ಲಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡಕ್ಕೆ ಅಗ್ರಸ್ಥಾನವಿದೆ. ಮದ್ಯಪಾನವು ರಾಮರಾಜ್ಯ ಆಗುತ್ತಿರುವ ಹಿಂದೂ ಸಮಾಜವನ್ನು ಸದ್ದಿಲ್ಲದೆ ಸಾಯಿಸುತ್ತಿದೆ. ಕೂಡಲೇ ಮದ್ಯ ನಿಷೇಧ ಕಾನೂನು ಜಾರಿಗೊಳಿಸಬೇಕು” ಎಂದು ಜೆಡಿಯು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಪ್ರೀತ್ ಕುಮಾರ್ ಪೂಜಾರಿ ಒತ್ತಾಯಿಸಿದ್ದಾರೆ.