ದಕ್ಷಿಣ ಕನ್ನಡ | ಮುಸ್ಲಿಮರಿಗೆ ಬಾಯ್‌ಕಾಟ್ – ಹಿಂದು ವ್ಯಾಪಾರಿಗಳಿಗೆ ಆದಾಯ ಕ್ಷೀಣ; ವಿಎಚ್‌ಪಿ ತಂದ ಆಪತ್ತು

Date:

ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇವಾಲಯದಲ್ಲಿ ನಡೆಯುತ್ತಿರುವ ನವರಾತ್ರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವಂತೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಕರೆಕೊಟ್ಟಿತ್ತು. ಆದರೆ, ಆ ಕರೆಯಿಂದಾಗಿ ಮುಸ್ಲಿಂ ವ್ಯಾಪಾರಿಗಳಿಗೆ ಮಾತ್ರವಲ್ಲದೆ, ಹಿಂದು ವ್ಯಾಪಾರಿಗಳಿಗೂ ಆದಾಯ ಕ್ಷೀಣಿಸುವಂತೆ ಮಾಡಿದೆ. ಜಾತ್ರೆ ಆರಂಭವಾಗಿ ಮೂರು ದಿನಗಳು ಕಳೆದರೂ ವ್ಯಾಪಾರ ಇನ್ನೂ ಚುರುಕುಗೊಂಡಿಲ್ಲವೆಂದು ಜಾತ್ರೆಯಲ್ಲಿ ಅಂಗಡಿ ತೆರೆದಿರುವ ಹಿಂದು ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಅಲ್ಲದೆ, ವಿಎಚ್‌ಪಿ ನೀಡಿದ್ದ ಬಾಯ್‌ಕಾಟ್ ಕರೆಯ ಹೊರತಾಗಿಯೂ ಗುರುವಾರ ಹಿಂದು-ಮುಸ್ಲಿಂ ಸಮುದಾಯದ ಜನರು ಉಭಯ ಸಮುದಾಯದ ವ್ಯಾಪಾರಿಗಳ ಅಂಗಡಿಗಳಿಗೆ ಹೋಗಿದ್ದಾರೆ. ತಮ್ಮಿಷ್ಟದ ವಸ್ತುಗಳು, ಆಟಿಕೆಗಳು ಹಾಗೂ ತಿನಿಸುಗಳನ್ನು ಖರೀದಿಸಿದ್ದಾರೆ. ಯಾವ ಉದ್ದೇಶದಿಂದ ವಿಎಚ್‌ಪಿ ಬಾಯ್‌ಕಾಟ್‌ ಕರೆ ಕೊಟ್ಟಿತ್ತೋ ಆ ಉದ್ದೇಶವನ್ನು ಹುಸಿಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆದರೆ, ಬಾಯ್‌ಕಾಟ್‌ ಕರೆಯ ಕಾರಣದಿಂದಾಗಿ ಜಾತ್ರೆಯು ವಿವಾದದ ತಾಣವಾಗಬಹುದೆಂದು ಹೆಚ್ಚಿನ ಜನರು ಇನ್ನೂ ಜಾತ್ರೆಯತ್ತ ಸುಳಿದಿಲ್ಲ. ಪರಿಣಾಮ ವ್ಯಾಪಾರ ಕಡಿಮೆಯಾಗಿದೆ. ಪ್ರಸ್ತುತ ಸನ್ನಿವೇಶವನ್ನು ನೋಡಿದರೆ, ಜಾತ್ರೆಯ ಇನ್ನುಳಿದಿರುವ ದಿನಗಳಲ್ಲಿಯೂ ಹೆಚ್ಚು ವ್ಯಾಪಾರ ನಡೆಯುವ ಸಾಧ್ಯತೆಯಿಲ್ಲವೆಂದು ಅನೇಕ ಹಿಂದು ವ್ಯಾಪಾರಿಗಳು ಭಾವಿಸಿದ್ದಾರೆ.

”ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವ್ಯಾಪಾರದಲ್ಲಿ ಭಾರೀ ಕುಸಿತ ಕಂಡಿದೆ. ಈ ಹಿಂದೆ ಜಾತ್ರೆಗೆ ಸಾಕಷ್ಟು ಹಿಂದುಯೇತರ ಗ್ರಾಹಕರು ಬರುತ್ತಿದ್ದರು. ಆದರೆ, ಈ ಬಾರಿ ಗ್ರಾಹಕರ ಸಂಖ್ಯೆ ಕಡಿಮೆಯಾಗಿದೆ” ಎಂದು ಜಾತ್ರೆಯಲ್ಲಿದ್ದ ವ್ಯಾಪಾರಿಯೊಬ್ಬರು ಹೇಳಿದ್ದಾರೆ.

ಸಾಮಾನ್ಯವಾಗಿ, ಚಪ್ಪಲಿಗಳು, ಬಟ್ಟೆಗಳು, ಆಲಂಕಾರಿಕ ವಸ್ತುಗಳು ಇತ್ಯಾದಿಗಳು ಜಾತ್ರೆಗೆ ಹೆಚ್ಚು ಜನರನ್ನು ಸೆಳೆಯುತ್ತವೆ. ಆದರೆ, ಇವುಗಳನ್ನು ಹೆಚ್ಚಾಗಿ ಮಾರಾಟ ಮಾಡುವ ಹಲವು ಹಿಂದುಯೇತರ ವ್ಯಾಪಾರಿಗಳಿಗೆ ಜಾತ್ರೆಯಲ್ಲಿ ಮಳಿಗೆಗಳು ದೊರೆಯದ ಕಾರಣ, ಇಂತಹ ವಸ್ತುಗಳ ಮಳಿಗೆಗಳು ತುಂಬಾ ಕಡಿಮೆ ಇದೆ. ಹೀಗಾಗಿ, ಹೆಚ್ಚು ಗ್ರಾಹಕರು ಬರುತ್ತಿಲ್ಲವೆಂದು ಸ್ಥಳೀಯರು ಹೇಳುತ್ತಾರೆ.

ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಹಾವೇರಿ ಜಿಲ್ಲೆಯ ಹಿರೂರಿನ ಸಂಜೀವ್ ಸೇರಿದಂತೆ ಹಲವು ಮಾರಾಟಗಾರರು ಈ ಬಾರಿ ವ್ಯಾಪಾರ ವಹಿವಾಟು ಕ್ಷೀಣಿಸಿದೆ ಎಂದು ಹೇಳಿದ್ದಾರೆ.

ಗ್ರಾಹಕರು ವ್ಯಾಪಾರ ವಹಿವಾಟಿನಲ್ಲಿ ಧರ್ಮದ ತಾರತಮ್ಯ ಮಾಡುವುದಿಲ್ಲ. ವಿಎಚ್‌ಪಿ ಮತ್ತು ಬಜರಂಗದಳದ ಕರೆಗೆ ಜನರು ಮಹತ್ವ ನೀಡಿಲ್ಲ. ಎಲ್ಲರೂ ಎಲ್ಲ ಮಳಿಗೆಗಳಿಗೂ ಭೇಟಿ ನೀಡಿ, ವ್ಯಾಪಾರ ಮಾಡುತ್ತಿದ್ದಾರೆ ಎಂದು ಮತ್ತೊಬ್ಬ ವ್ಯಾಪಾರಿ ಹೇಳಿದ್ದಾರೆ.

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಯನ್ನು ಹಿಂದುವೆಂದು ಭಾವಿಸಿದ್ದ ಹಿಂದುತ್ವವಾದಿ ಕಾರ್ಯಕರ್ತ, ಆತನ ಮಳಿಗೆಗೆ ಕೇಸರಿ ಧ್ವಜವನ್ನು ಹಾಕಿದ್ದ. ಆದರೆ, ತಾನು ಹಿಂದು ಅಲ್ಲ ಎಂದು ವ್ಯಾಪಾರಿ ಹೇಳಿದ ಬಳಿಕ ನಯವಾಗಿ ಧ್ವಜವನ್ನು ತೆಗೆದುಕೊಂಡು ಹೋದನೆಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...