ದಕ್ಷಿಣ ಕನ್ನಡ | ʻತೂಗುಸೇತುವೆಗಳ ಸರದಾರʼ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ

Date:

ತೂಗುಸೇತುವೆಗಳ ಸರದಾರ ಎಂದೇ ಪ್ರಸಿದ್ಧಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಸೇತುವೆ ತಜ್ಞ ಡಾ. ಗಿರೀಶ್ ಭಾರದ್ವಾಜ್ ಕೊಂಚಾಡಿ (76) ಇಂದು ಮುಂಜಾನೆ ಸುಳ್ಯದಲ್ಲಿ ನಿಧನರಾಗಿದ್ದಾರೆ.

- Advertisement -

ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಾಗಿದ್ದ ಗಿರೀಶ್ ಭಾರದ್ವಾಜ್ ಅವರಿಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬಿ.ಇ. ಮೆಕಾನಿಕಲ್ ಎಂಜಿನಿಯರಿಂಗ್ ಪದವಿಧರರಾಗಿದ್ದ ಅವರು, ಪರಿಸರ ಸ್ನೇಹಿ ಸೇತುವೆಗಳ ನಿರ್ಮಾಣದ ಮೂಲಕ ದಕ್ಷಿಣ ಕನ್ನಡ, ಮಲೆನಾಡು ಭಾಗಗಳ ಕುಗ್ರಾಮಗಳನ್ನು ಸಂಧಿಸುವ ಸೇತುವೆಯಾಗಿದ್ದರು. 1989ರಲ್ಲಿ ಸುಳ್ಯ ತಾಲೂಕಿನ ಅರಂಬೂರಿನ ಪಯಸ್ವಿನಿ ನದಿಗೆ ನಿರ್ಮಿಸಿದ ಮೊದಲ ತೂಗುಸೇತುವೆ ಇವರ ಸೇತುವೆ ನಿರ್ಮಾಣದ ಸೇವೆಯನ್ನು ಬಹುದೂರ ಕೊಂಡೊಯ್ದಿತು. ದೇಶಾದ್ಯಂತ ಸುಮಾರು 140ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ ಹಿರಿಮೆ ಇವರಿಗೆ ಸಲ್ಲುತ್ತದೆ.

ಅವರ ಸೇವೆಯನ್ನು ಗುರುತಿಸಿದ ಕೇಂದ್ರ ಸರ್ಕಾರವು 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವ ಸಲ್ಲಿಸಿತ್ತು. ದೇಶಾದ್ಯಂತ ‘ಬ್ರಿಡ್ಜ್ ಮ್ಯಾನ್’, ‘ತೂಗುಸೇತುವೆಗಳ ಸರದಾರ’ ಎಂಬ ಹೆಸರಿನಿಂದಲೇ ಡಾ. ಗಿರೀಶ್ ಭಾರದ್ವಾಜ್ ಅವರು ಜನಮನ ಸೇರಿದ್ದರು.

ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿರುವ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಜನತೆ, ತಾಂತ್ರಿಕ ವಲಯದ ತಜ್ಞರು ಹಾಗೂ ಸಾವಿರಾರು ಗ್ರಾಮೀಣ ಕುಟುಂಬಗಳು ಸಂತಾಪ ವ್ಯಕ್ತಪಡಿಸಿವೆ.

ಸಚಿವ ಯು.ಟಿ. ಖಾದರ್ ಅವರು “ಅವರ ಅಗಲಿಕೆಯಿಂದ ಇಂಜಿನಿಯರಿಂಗ್ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ. ಸರ್ಕಾರದ ವತಿಯಿಂದ ಪೊಲೀಸ್ ಗೌರವದೊಂದಿಗೆ ಅಂತಿಮ ವಿದಾಯ ಸಲ್ಲಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ, ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ” ಎಂದು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಖಾಸಗಿ ಬಸ್ ಬೆಂಕಿಗಾಹುತಿ!

ಶಿವಮೊಗ್ಗ- ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು,...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಶಿವಮೊಗ್ಗ | ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅರಣ್ಯ ಇಲಾಖೆ ಸಿಬ್ಬಂದಿ ಬಂಧನ

ಶಿವಮೊಗ್ಗ ನಗರದ ವಾದಿ-ಹುದಾ ಸಮೀಪ 8 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...