ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, ಜನೌಷಧಿ ಕೇಂದ್ರಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸೂಕ್ತ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಹಲವು ಕಡೆ ಜನೌಷಧಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರಗಳಿಗೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಆದರೆ, ರಾಜ್ಯದ ವಿವಿಧೆಡೆ ನಕಲಿ ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದರು.
ನಕಲಿ ಕೇಂದ್ರಗಳಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಜನೌಷಧಿ ಕೇಂದ್ರಗಳ ವ್ಯವಹಾರ ಮತ್ತು ಕಾರ್ಯನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಕೇಂದ್ರ ಸರ್ಕಾರ ಸೂಕ್ತ ಕಾನೂನು ರೂಪಿಸಬೇಕು ಎಂದು ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಹೇಳಿದರು.




